ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು ಸಿದ್ಧಾಂತಗಳ ತೌಲನಿಕ ಅಧ್ಯಯನವನ್ನು ಮುಕ್ತ ಮನಸ್ಸಿನಿಂದ ಮಾಡಿದ ಯಾರಿಗೇ ಆದರೂ ಅಂದಿನ ಸಂಪೂರ್ಣ ರಾಜಕೀಯದ ಒಂದು ಸಮಗ್ರ ಚಿತ್ರಣವನ್ನು ಗ್ರಹಿಸುವಷ್ಟು ಸಾಮಗ್ರಿ ಸಿಕ್ಕೇ ಸಿಗುತ್ತದೆ. ಆದರೆ ಯಾವುದೇ ವೈಚಾರಿಕ ಕಟ್ಟುಪಾಡುಗಳಿಗೆ ಒಳಗಾಗದೆ ಅವುಗಳನ್ನು ಗ್ರಹಿಸಬೇಕು. ಇದರಲ್ಲಿ ಅತಿ ಮುಖ್ಯವಾದ ಅಂಶವೆಂದರೆ ಓದುಗ ಅವರಿಬ್ಬರನ್ನು ಅತಿ ಮಾನುಷ ದೃಷ್ಟಿಕೋನದಿಂದ ನೋಡದೆ ವಾಸ್ತವಿಕತೆಯ ನೆಲಗಟ್ಟಿನ ಮೇಲೆ ಮತ್ತು ಅತಿ ಮುಖ್ಯವಾಗಿ ಅವರಿಬ್ಬರೂ ಇದ್ದ ಕಾಲಮಾನದ ರಾಜಕೀಯ ಇತಿಹಾಸದ…

ರಾಜಲಕ್ಷ್ಮಿ ಅಂಕಲಗಿ
ಮೂಲತಃ ವಿಜಯಪುರದವರಾದ ರಾಜಲಕ್ಷ್ಮಿ ಅಂಕಲಗಿಯವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಒಡನಾಡಿಗಳಾಗಿದ್ದ ಇವರು ಹಲವು ಹೋರಾಟಗಳಲ್ಲಿ ಭಾಗಿಯಾಗುತ್ತಲೇ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣಕಾರರಾಗಿದ್ದಾರೆ. ನ್ಯಾಯಾಂಗ, ರಾಜಕೀಯ, ಕೌಟುಂಬಿಕ ಕಲಹಗಳ ಕುರಿತು ನಿರಂತರ ಬರೆದಿದ್ದಾರೆ. ಸದ್ಯ ಯೂಟ್ಯೂಬ್ ಚಾನೆಲ್ ಮೂಲಕವೂ ಕೌಟುಂಬಿಕ ಕಾನೂನುಗಳ ಕುರಿತು ಅರಿವು ಮೂಡಿಸುತ್ತಿದ್ದಾರೆ. ವಾರ್ತಾಭಾರತಿ, ಈದಿನ ಸೇರಿದಂತೆ ಹಲವು ಪರ್ಯಾಯ ಮಾಧ್ಯಮಗಳ ಚರ್ಚೆಗಳಲ್ಲಿ ಮಾತನಾಡುವ ಇವರು, ತಮ್ಮ ಒಳನೋಟಗಳ ಮೂಲಕ ಗಮನ ಸೆಳೆದಿದ್ದಾರೆ.