ತಲೆಮ್ಯಾಗೊಂದು ಸೂರು ಬೇಕೆಂಬುದು ಪ್ರತಿ ಕುಟುಂಬದ ಮಹದಾಸೆಯಾಗಿದೆ. ಸಂವಿಧಾನದ 21ನೇ ವಿಧಿಯ ‘ಬದುಕುವ ಹಕ್ಕನ್ನು’ ಭಾರತದ ಸರ್ವೋಚ್ಚ ನ್ಯಾಯಾಲಯವು ವಿಶಾಲವಾಗಿ ವ್ಯಾಖ್ಯಾನಿಸುವ ಮೂಲಕ ತಕ್ಕಷ್ಟು ಆಶ್ರಯ ಮತ್ತು ವಸತಿಯನ್ನು ಹೊಂದಿ ಘನತೆಯಿಂದ ಬದುಕುವ ಹಕ್ಕನ್ನು ಖಾತರಿಪಡಿಸುತ್ತದೆ. ಬದುಕುವ ಹಕ್ಕು ಕೇವಲ ಬದುಕುಳಿಯುವುದಕ್ಕಷ್ಟೇ ಅಲ್ಲದೇ ಮಾನವೀಯ ಸ್ಥಿತಿಯಲ್ಲಿ ಬದುಕುವ ಸಾಮರ್ಥ್ಯವನ್ನು ಒಳಗೊಂಡಿದೆ ಎಂಬ ಅಭಿಪ್ರಾಯವನ್ನು ಹಲವು ಮುಖ್ಯ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲವು ಸ್ಪಷ್ಟಪಡಿಸಿರುತ್ತದೆ. ಮೂಲಭೂತ ಸೌಲಭ್ಯವುಳ್ಳ ಒಂದು ‘ಮನೆ’ ಬಡವರಿಗೆ ಕೈಗೆಟುಕದ ಗಗನಕುಸುಮವಾಗಿದ್ದು, ಮನೆ ಇಲ್ಲದ ಮನಗಳು ಮರುಗುತ್ತಲೇ…

ಲತಾಮಾಲ
ಲತಾಮಾಲ ಅವರು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಸ್ವಯಂಸೇವಾ ಸಂಸ್ಥೆಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿರುತ್ತಾರೆ. ಇದರೊಂದಿಗೆ, ಸ್ವತಂತ್ರ ಸಮಾಲೋಚಕರಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಮೌಲ್ಯಮಾಪನ, ಅಧ್ಯಯನ ಮತ್ತು ತರಬೇತಿಗಳನ್ನು ನಡೆಸಿಕೊಟ್ಟಿರುತ್ತಾರೆ. ಬರವಣಿಗೆಯನ್ನು ತಮ್ಮ ವೃತ್ತಿಗೆ ಮಾತ್ರ ಸಿಮೀತಗೊಳಿಸಿದ್ದ ಇವರು, ಇತ್ತಿಚೆಗೆ ಪ್ರಸ್ತುತದ ರಾಜಕೀಯ ಆಗುಹೋಗುಗಳ ಕುರಿತಾಗಿ ಪುಸ್ತಕವನ್ನು ಹೊರತಂದಿದ್ದು, 'ಈದಿನ ಡಾಟ್ ಕಾಮ್'ಗೆ ರಾಜಕೀಯ ಹಾಗೂ ಅಭಿವೃದ್ಧಿ ಸಂಬಂಧಿತ ಲೇಖನಗಳನ್ನು ಬರೆಯುತ್ತಿರುತ್ತಾರೆ.