‘ಕರ್ನಾಟಕ’ ಎಂಬ ಹೆಸರಾಗಿ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಕಳೆದ 50 ವರ್ಷಗಳಲ್ಲಿ ಕರ್ನಾಟಕ ಸಾಧಿಸಿದ್ದನ್ನು ಸಂಭ್ರಮಿಸಲೇಬೇಕು. ಸಾಮಾನ್ಯವಾಗಿ ಇದರ ಶ್ರೇಯಸ್ಸನ್ನು ಈ ರಾಜ್ಯಕ್ಕೆ ಕೊಡುಗೆ ನೀಡಿದ ಅನೇಕ ಪ್ರಸಿದ್ಧ ಸಾಹಿತಿಗಳಿಗೆ, ಜನಪ್ರಿಯ ರಾಜಕಾರಣಿಗಳಿಗೆ ಹಾಗೂ ಪ್ರಖ್ಯಾತ ಮುಖಂಡರುಗಳಿಗೆ ಅರ್ಪಿಸಲಾಗುತ್ತದೆ. ಕರ್ನಾಟಕದ ಪ್ರಗತಿಯಲ್ಲಿ ಇವರೆಲ್ಲರ ಪಾತ್ರವೂ ಖಂಡಿತ ಇದೆ. ಆದರೆ ಈ ರಾಜ್ಯವನ್ನು ರೂಪಿಸುವುದರಲ್ಲಿ ಮಹಾಜನರಿಗಿಂತಲೂ ಹೆಚ್ಚಿನ ಪಾತ್ರ ನಿರ್ವಹಿಸಿರುವುದು ಈ ನಾಡಿನ ಸಾಮಾನ್ಯ ಜನರು. ಜನಚಳವಳಿಗಳ ರೂಪದಲ್ಲಿ ಜನಸಾಮಾನ್ಯರು ಬೃಹತ್ ತೇರನ್ನು ಎಳೆಯುವ ಮಹಾಶಕ್ತಿಯಂತೆ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕದ…

ನೂರ್ ಶ್ರೀಧರ್
ಚಿತ್ರದುರ್ಗದ ಇಂಜಿನಿಯರಿಂಗ್ ವಿದ್ಯಾರ್ಥಿ ನೂರ್ ಜುಲ್ಫೀಕರ್, ನೂರ್ ಶ್ರೀಧರ್ ಆಗಿದ್ದು ಭೂಗತ ಕ್ರಾಂತಿಕಾರಿ ಚಳವಳಿಯ ಪೂರ್ಣಾವಧಿ ಕಾರ್ಯಕರ್ತನಾಗಿದ್ದರಿಂದ. ಭಾರತದ ಸಂದರ್ಭದಲ್ಲಿ ಈ ರೀತಿಯ ಭೂಗತ ಸಶಸ್ತ್ರ ಚಳವಳಿಯಿಂದ ಕ್ರಾಂತಿ ಮಾಡಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ತೀವ್ರ ವೈಚಾರಿಕ ಸಂಘರ್ಷ ನಡೆಸಿ, 2014ರಿಂದ ಮುಖ್ಯವಾಹಿನಿ ಪ್ರಜಾತಾಂತ್ರಿಕ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ. ಕರ್ನಾಟಕ ಜನಶಕ್ತಿ ಮತ್ತು ಎದ್ದೇಳು ಕರ್ನಾಟಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಇವರು 'ನನ್ನೊಳಗಿನ ಸೂಫಿ’ ಹಾಗೂ 'ಭಾರತದ ಕ್ರಾಂತಿ ಮತ್ತು ಮಾವೋವಾದಿ ಚಳವಳಿ' ಎಂಬ ಕೃತಿಗಳನ್ನು ರಚಿಸಿದ್ದಾರೆ.