ರಾಜಕೀಯ ರಂಗದಲ್ಲಿ ಇಂದು ಹೆಣ್ಣು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಪ್ರಭುತ್ವದ ಯೋಜನೆಗಳ ಫಲಾನುಭವಿಯಾಗಿ ಮತ್ತು ಆ ಯೋಜನೆಗಳ ವಿಸ್ತರಣಾಕಾರಳಾಗಿಯೇ ಹೊರತು ಆ ರಾಜಕೀಯ ಯೋಜನೆಗಳ ನೀತಿ ನಿರೂಪಕಳಾಗಿ ಅಲ್ಲ. ಇಂತಹ ಸ್ಥಿತಿ ಬದಲಾಗಬೇಕಾದರೆ ಅವಳಿಗೆ ರಾಜಕೀಯ ಅಧಿಕಾರ ಚಲಾಯಿಸುವ ಅವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಇಡೀ ದೇಶದ ರಾಜಕಾರಣವನ್ನು ಗಮನಿಸಿದರೆ ಕರ್ನಾಟಕದ ಸ್ಥಿತಿ ಅತ್ಯಂತ ಶೋಚನೀಯ. ಕರ್ನಾಟಕದಲ್ಲಿ ಇಲ್ಲಿಯವರೆಗೂ ಹದಿನೆಂಟು ರಾಜ್ಯಪಾಲರು ಆಗಿಹೋಗಿದ್ದಾರೆ. ಅದರಲ್ಲಿ ಒಬ್ಬರೇ ಮಹಿಳೆ. ಮೊದಲ ಮಹಿಳಾ ಚುನಾವಣಾ ಆಯುಕ್ತರೆಂಬ ಕೀರ್ತಿಗೆ ಪಾತ್ರರಾದ ವಿ.ಎಸ್. ರಮಾದೇವಿಯವರು…

ಡಾ.ಎನ್. ಗಾಯತ್ರಿ
ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. ಮಹಿಳಾ ಪರ ಚಿಂತಕಿಯಾಗಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು, ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃತಿಗಳು: 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ಜೋಲಿಯೂ ಕ್ಯೂರಿ (ಅನುವಾದ), ಭಗತ್ಸಿಂಗ್ ಮತ್ತು ಅವನ ಸಂಗಾತಿಗಳು (ವ್ಯಕ್ತಿ ಚಿತ್ರ), ನಾನೇಕ ನಾಸ್ತಿಕ (ಅನುವಾದ), ತ್ರಿವೇಣಿಯವರ ಬಗ್ಗೆ ಬರೆದ ಲೇಖನಗಳ ಸಂಗ್ರಹ (ಸಂಪಾದಿತ).