ಯುವಕರು ಕೃಷಿಯಲ್ಲಿ ತೊಡಗಲು ಬೇಸಾಯವನ್ನು ಒಂದು ಲಾಭದಾಯಕ ಕಸುಬನ್ನಾಗಿಸಿ ಆ ಮೂಲಕ ‘ಊಹಿಸಲ್ಪಡುವ ಆದಾಯ’ ದೊರಕುವಂತಾಗಬೇಕು. ಇದಕ್ಕೆ ಪೂರಕವಾಗಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯಾದರೂ ಖಾತರಿಯಾಗಿ ಸಿಗುವುದು ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಪ್ರಥಮವಾಗಿ ಸ್ಥಾಪಿಸಲ್ಪಟ್ಟಿರುವ ‘ಕರ್ನಾಟಕ ಕೃಷಿ ಬೆಲೆ ಆಯೋಗ’ದ ಹಲವು ಉಪಯುಕ್ತ ವರದಿಗಳನ್ನಾಗಲಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕೊಟ್ಟಿರುವ ‘ಬೆಂಬಲ ಬೆಲೆಗೆ ಕಾನೂನು ಸ್ವರೂಪ’ ನೀಡುವ ಆಶ್ವಾಸನೆಯನ್ನಾಗಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನೂ ಪರಿಗಣಿಸದಿರುವುದು ಅರ್ಥವಾಗದ ವಿಚಾರವಾಗಿದೆ….

ಡಾ ಪ್ರಕಾಶ್ ಕಮ್ಮರಡಿ
ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿಯವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಮತ್ತು ಕೃಷಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರು. ಅವರು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ (ಕೆಎಪಿಸಿ) ಅಧ್ಯಕ್ಷರೂ ಆಗಿದ್ದರು. ಅವರು ಈಗ ಕೃಷಿ ಅರ್ಥಶಾಸ್ತ್ರ, ಸುಸ್ಥಿರ ಮತ್ತು ಸಾವಯವ ಕೃಷಿ ಹಾಗೂ ಅಂತಾರಾಷ್ಟ್ರೀಯ ವ್ಯಾಪಾರ ಕ್ಷೇತ್ರದಲ್ಲಿ ವಿವಿಧ ಸಂಸ್ಥೆಗಳಿಗೆ ಖಾಸಗಿ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಸಮಾಜವಾದಿ ಚಿಂತನೆ ಹಾಗೂ ಚಳವಳಿಯಲ್ಲಿ ದಶಕಗಳಿಂದ ಸಕ್ರಿಯರು.