SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂದು (ಅ.10) ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಮತ್ತು ‘ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ (AISA) ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆಗೆ ಹೆದರಿರುವ ಮೋದಿ ಸರ್ಕಾರ, ದೆಹಲಿಗೆ ತೆರಳುತ್ತಿದ್ದ ರೈಲುಗಳನ್ನು ತಡೆದು, ವಿದ್ಯಾರ್ಥಿ-ಯುವಜನರು ಮಾರ್ಗಮಧ್ಯೆಯೇ ಇಳಿಸಿ ದೌರ್ಜನ್ಯ ಎಸಗುತ್ತಿದೆ. ಮಾತ್ರವಲ್ಲದೆ, ದೆಹಲಿಯಲ್ಲಿ ನಾನಾ ಭಾಗಗಳಲ್ಲಿ ಅಲ್ಲಿನ ಪೊಲೀಸರು ಸುಮಾರು 1000 ಮಂದಿಯನ್ನು ವಶಕ್ಕೆ ಪಡೆದು, ಬಂಧನದಲ್ಲಿಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

ರಾಜಧಾನಿಯ ಆಗ್ನೇಯ ದೆಹಲಿ ಜಿಲ್ಲೆಯ ಶಾಹೀನ್ ಭಾಗ್ ಸುತ್ತಮುತ್ತಲಿನ ಪ್ರದೇಶಗಳಲ್ಲೇ ಸುಮಾರು 250ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಉತ್ತರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಶಹದಾರ ಮತ್ತು ಪೂರ್ವ ದೆಹಲಿ ಜಿಲ್ಲೆಗಳಿಂದ 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿಯೂ ನಿಗದಿಪಡಿಸಲಾದ 13 ಪ್ರಮುಖ ಬಂಧನ ಕೇಂದ್ರಗಳಿಗೆ ವಶಕ್ಕೆ ಪಡೆಯಲಾದವರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಅಲ್ಲದೆ, ಮುಂಬೈನಲ್ಲಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಬೆಳಗ್ಗೆಯೇ ದೆಹಲಿಗೆ ಹೊರಟಿದ್ದಾರೆ. ತಮ್ಮನ್ನೂ ದೆಹಲಿ ವಿಮಾನ ನಿಲ್ದಾಣದಲ್ಲೇ ಪೊಲೀಸರು ಬಂಧಿಸಬಹುದು ಎಂದು ದೀಪ್ಕೆ ಹೇಳಿದ್ದಾರೆ. ಸಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಪೊಲೀಸರು ತಡೆಯಬಹುದು. ಆದ್ದರಿಂದ, ನಾವು ಜಂತರ್‌ ಮಂತರ್‌ ಬರಲಾಗದೇ ಇರಬಹುದು. ಆದರೂ, ಪ್ರತಿಭಟನೆ ನಡೆಯುತ್ತದೆ. ವಿದ್ಯಾರ್ಥಿ-ಯುವಜನರು ಪ್ರತಿಭಟನೆಯನ್ನು ಮುನ್ನಡೆಸುತ್ತಾರೆ ಎಂದು ದೀಪ್ಕೆ ಹೇಳಿದ್ದಾರೆ.

ಜಂತರ್‌ ಮಂತರ್‌ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯ ನೆಪದಲ್ಲಿ ಸುಮಾರು 30,000ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿಯ ಎಲ್ಲ ಗಡಿ ಭಾಗಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...