SIR ಸಂಚು: 10 ಕೋಟಿ ಜನರಲ್ಲಿ ಸಿಕ್ಕಿದ್ದು ಬರಿ 1,600 ವಿದೇಶಿಯರು!

Date:

ದೇಶಾದ್ಯಂತ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ನಡೆಸುತ್ತಿರುವುದು ದೇಶದ ಕೋಟ್ಯಂತರ ಅರ್ಹ ಪ್ರಜೆಗಳ ಹಕ್ಕನ್ನು ಕಸಿಯುವ ಗಂಭೀರ ಸಂಚು ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರೂಪಿಸಿದ ಈ ಸಂಚನ್ನು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಜಾರಿಗೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದೂರಿದ್ದಾರೆ.

- Advertisement -

ಆದ್ದರಿಂದ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು, ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತಡೆಹಿಡಿಯಬೇಕು ಹಾಗೂ ‘ಇಸಿನೆಟ್’ (ECI-NET) ಪೋರ್ಟಲ್ ವ್ಯವಸ್ಥೆಯನ್ನು ಪಾರದರ್ಶಕವಾಗಿ ಪುನರ್‌ರಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ‘ಎಕ್ಸ್’ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, “ಅಕ್ರಮ ನುಸುಳುಕೋರರನ್ನು ಪತ್ತೆ ಹಚ್ಚಿ, ಮತದಾರರ ಪಟ್ಟಿಯಿಂದ ತೆಗೆದುಹಾಕಿ, ಅವರನ್ನು ಗಡಿಪಾರು ಮಾಡುವುದೇ ಎಸ್‌ಐಆರ್‌ನ ‘3D’ ಉದ್ದೇಶವೆಂದು ಗೃಹ ಸಚಿವರು ಹೇಳಿದ್ದರು. ಆದರೆ. ಈ ಪ್ರಕ್ರಿಯೆಯಿಂದ ಸಾಧಿಸಿದ್ದಾದರೂ ಏನು” ಎಂದು ಪ್ರಶ್ನಿಸಿದ್ದಾರೆ.

Advertisements

“ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಾಗೂ ನಡೆಯುತ್ತಿರುವ ಕರ್ನಾಟಕ, ಜಾರ್ಖಂಡ್, ಮೇಘಾಲಯ, ಕೇರಳ, ಗೋವಾ ಮತ್ತು ಮಿಜೋರಾಂ ಎಂಬ 6 ರಾಜ್ಯಗಳಲ್ಲಿ ಒಟ್ಟು 10 ಕೋಟಿ ಜನರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಆದರೆ, ಅಲ್ಲಿ ಪತ್ತೆಯಾದ ವಿದೇಶಿ ಪ್ರಜೆಗಳ ಸಂಖ್ಯೆ ಕೇವಲ 1,600.  ಇನ್ನುಳಿದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂತಹ ಯಾವುದೇ ಮಾಹಿತಿಯನ್ನೇ ಸಂಗ್ರಹಿಸಿಲ್ಲ. ಇದರಿಂದ ಗೃಹ ಸಚಿವರು ನೀಡಿದ್ದ ಹೇಳಿಕೆ ಸಂಪೂರ್ಣ ಸುಳ್ಳು ಎಂಬುದು ಸ್ಪಷ್ಟವಾಗಿದೆ” ಎಂದು ಅವರು ಲೇವಡಿ ಮಾಡಿದ್ದಾರೆ.

“ಕರ್ನಾಟಕ ಒಂದರಲ್ಲೇ ಬರೋಬ್ಬರಿ 99.7 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಆದರೆ, ಅಲ್ಲಿ ಪತ್ತೆಯಾದ ವಿದೇಶಿಯರ ಸಂಖ್ಯೆ ಕೇವಲ 716. ಅದರಲ್ಲಿಯೂ 545 ಜನರು ನೇಪಾಳ ಮೂಲದವರು. ಇದನ್ನು ನೋಡಿದರೆ ವಿದೇಶಿಯರನ್ನು ಪತ್ತೆಹಚ್ಚುವ ನೆಪದಲ್ಲಿ ಕೋಟ್ಯಂತರ ಭಾರತೀಯರ ಮತದಾನದ ಹಕ್ಕನ್ನು ಕಸಿಯುವುದೇ ಈ ಯೋಜನೆಯ ಮೂಲ ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸಲ್ಲಿಸಿರುವ ಅಫಿಡವಿಟ್ ಅನ್ನು ‘ವಂಚನೆ ಮತ್ತು ದಿಕ್ಕು ತಪ್ಪಿಸುವ ತಂತ್ರ’ ಎಂದು ಬಣ್ಣಿಸಿರುವ ಜೈರಾಮ್ ರಮೇಶ್, “ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಆಯೋಗ ಸುಳ್ಳಿನ ಬಲೆ ಹೆಣೆಯುತ್ತಿದೆ” ಎಂದಿದ್ದಾರೆ.

ಎಸ್‌ಐಆರ್ ನಿರ್ಧಾರಗಳು ಮತ್ತು ಕಾಯ್ದೆಗಳಿಗೆ ಮೂವರೂ ಚುನಾವಣಾ ಆಯುಕ್ತರು ಒಮ್ಮತದಿಂದ ಸಮ್ಮತಿ ಸೂಚಿಸಿದ್ದಾರೆ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಆದರೆ, ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯ ಪ್ರಕಾರ, ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಾದ ತೀರ್ಮಾನಗಳ ವಿರುದ್ಧ ಬರೋಬ್ಬರಿ 14 ಬಾರಿ ಅಧಿಕೃತವಾಗಿ ಆಕ್ಷೇಪಣೆ ಎತ್ತಿದ್ದಾರೆ.

ಆಯುಕ್ತರ ಈ ಭಿನ್ನಾಭಿಪ್ರಾಯಗಳು ಮತ್ತು ಅಸಮಾಧಾನದ ವಿವರಗಳನ್ನು ಕೋರಿ ಹಿರಿಯ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ‘ಮಾಹಿತಿ ಹಕ್ಕು’ (RTI) ಅರ್ಜಿ ಸಲ್ಲಿಸಿದ್ದರು. ನಿಯಮದ ಪ್ರಕಾರ 30 ದಿನಗಳೊಳಗೆ ಉತ್ತರ ನೀಡಬೇಕಿದ್ದರೂ, ಭಾರತೀಯ ಚುನಾವಣಾ ಆಯೋಗವು (ECI) ಇದುವರೆಗೆ ಈ ಅರ್ಜಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಯೋಗದ ಈ ಮೌನವು ಸಾರ್ವಜನಿಕವಾಗಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಒಂದೆಡೆ ಆರ್‌ಟಿಐಗೆ ನಿರುತ್ತರ, ಮತ್ತೊಂದೆಡೆ ಆಯೋಗದ ಒಳಗಿನ ಭಿನ್ನಮತ – ಇದೆಲ್ಲವೂ ಬಯಲಾಗುತ್ತಿದ್ದಂತೆಯೇ ದೇಶದ ನಾನಾ ಭಾಗಗಳಲ್ಲಿ ನಾಗರಿಕ ಸಮಾಜ ಮತ್ತು ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ. ಕರ್ನಾಟಕ, ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ಪ್ರಮುಖ ರಾಜ್ಯಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಏಕಪಕ್ಷೀಯವಾಗಿ ತೆಗೆದುಹಾಕಿರುವುದನ್ನು ಖಂಡಿಸಿ ಸಾರ್ವಜನಿಕರು ಹಾಗೂ ಯುವಜನರು ಪಾದಯಾತ್ರೆಗಳನ್ನು ಹಮ್ಮಿಕೊಂಡಿದ್ದಾರೆ. ‘ನಮ್ಮ ಮತ – ನಮ್ಮ ಹಕ್ಕು’ ಎಂಬ ಘೋಷಣೆಗಳೊಂದಿಗೆ ಆಯೋಗದ ವಿರುದ್ಧ ವ್ಯಾಪಕ ಜನಾಗ್ರಹ ವ್ಯಕ್ತವಾಗುತ್ತಿದೆ. 

ಆಯುಕ್ತರ ನಡುವಿನ ಭಿನ್ನಾಭಿಪ್ರಾಯಗಳನ್ನು ಇದು ಕೇವಲ ಆಯೋಗದ ಆಂತರಿಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಎಂದು ಚುನಾವಣಾ ಆಯೋಗ ಸಮರ್ಥಿಸಿಕೊಳ್ಳಲು ಯತ್ನಿಸುತ್ತಿದೆಯಾದರೂ, ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು ಮತ್ತು ಆಯೋಗವು ಸತ್ಯ ಮುಚ್ಚಿಡಬಾರದು ಎಂದು ವಿಪಕ್ಷಗಳು ತೀವ್ರವಾಗಿ ಪಟ್ಟು ಹಿಡಿದಿವೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕರವಾ ಚೌತ್‌: ಪಿತೃಸತ್ತೆ, ಸಂಪ್ರದಾಯದಾಚೆಗಿನ ಪ್ರಶ್ನೆಗಳು

ಪ್ರತಿ ಕಾರ್ತಿಕ ಮಾಸದ ಕೃಷ್ಣಪಕ್ಷದ ಚೌತಿಗೆ ತಪ್ಪದೆ ಬರುವ ’ಕರವಾ ಚೌತ್’...

ರಾಯಚೂರ | SIR ಪ್ರಕ್ರಿಯೆ ಪೂರ್ಣ : ಜಿಲ್ಲೆಯಲ್ಲಿ 14,24,909 ಲಕ್ಷ ಮತದಾರರು

ರಾಯಚೂರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಗ್ಯಾನೇಶ್ ವಿರುದ್ಧದ ನ.1ರ ರ‍್ಯಾಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಬೆಂಬಲಿಸಲಿರುವ ಸಿಜೆಪಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಿರೋಧಿಸಿ 'ಇಂಡಿಯಾ' (I.N.D.I.A.)...

ಚಿಕ್ಕಮಗಳೂರು | SIR ಪ್ರಕ್ರಿಯೆ: ಅಂತಿಮ ಪಟ್ಟಿಯಲ್ಲಿ 8,74,462 ಮತದಾರರು; ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಷ್ಕರಣೆಯ...