SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

Date:

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ.

- Advertisement -

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಕೊಳ್ಳೇಗಾಲ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಎಸ್‌ಐಆರ್‌ ಪ್ರಕ್ರಿಯೆಯು ಕಾನೂನುಬಾಹಿರ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಸಮಿತಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಭಾರತ ಚುನಾವಣಾ ಆಯೋಗವು ಸ್ವಾಯತ್ತ ಸಂಸ್ಥೆಯಾಗಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಬದಲು, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಸಂವಿಧಾನ ವಿರೋಧಿ ನಿಯಮಗಳನ್ನು ಅಳವಡಿಸಿಕೊಂಡಿದೆ. ಬಿಜೆಪಿ ಸರ್ಕಾರವನ್ನು ಅಧಿಕಾರದಲ್ಲಿ ಮುಂದುವರಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು, ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.

Advertisements

ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಆಶಯಗಳಲ್ಲಿ ಒಂದಾಗಿದೆ. ನಿರ್ದಿಷ್ಟ ಸಮುದಾಯಗಳ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವುದರ ಜೊತೆಗೆ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟುಮಾಡುತ್ತದೆ ಎಂದು ಸಮಿತಿ ಆತಂಕ ವ್ಯಕ್ತಪಡಿಸಿದೆ.

ಆದ್ದರಿಂದ, ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ವಜಾಗೊಳಿಸಬೇಕು. ಅಲ್ಲದೆ, ಮನವಿಯಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ಕಾನೂನುಬದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ರಾಷ್ಟ್ರಪತಿಗಳನ್ನು ಒತ್ತಾಯಿಸಿದೆ.

ಈ ವಿಶೇಷ ವರದಿ ಓದಿದ್ದೀರಾ? ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

ಪ್ರತಿಭಟನೆಯಲ್ಲಿ ಮಹಮ್ಮದಿನ್ ಮತಿನ್, ನಾಗರಾಜ್, ಕಮಲ್, ಮಹದೇವಯ್ಯ, ಮುಳ್ಳೂರು ಶಿವಮಲ್ಲು, ಶಂಭುಲಿಂಗಸ್ವಾಮಿ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಬಸವಣ್ಣ, ಯಾಸೀನ್, ಇರ್ಫಾನ್, ಮನ್ಸೂರ್, ಚಾಮರಾಜನಗರದ ಸಂಘಸೇನ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...