‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಿಸಬೇಕು ಹಾಗೂ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕದ ಮೈಸೂರು ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಮೈಸೂರು ನಗರದ ಸಿದ್ದಾರ್ಥನಗರದಲ್ಲಿರುವ ಬುದ್ಧನ ಪ್ರತಿಮೆಯ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು, ದಲಿತರು, ಕಾರ್ಮಿಕರು, ಅಲ್ಪಸಂಖ್ಯಾತರು, ಆದಿವಾಸಿಗಳು, ಮಹಿಳಾ ಹಕ್ಕುಗಳ ಹೋರಾಟಗಾರರು, ತೃತೀಯ ಲಿಂಗಿಗಳು ಹಾಗೂ ಹಿಂದುಳಿದ ವರ್ಗಗಳ ಮುಖಂಡರು ತಿರಂಗಾ ಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರಿಗೆ ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಭಾರತದ ಪ್ರಜಾಪ್ರಭುತ್ವವನ್ನು ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ವಿವಿಧ ಜನಪರ ಸಂಘಟನೆಗಳು ಒಂದಾಗಿ ಹೋರಾಟಕ್ಕೆ ಮುಂದಾಗಿವೆ ಎಂದು ತಿಳಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಪಾರದರ್ಶಕತೆಯಿಲ್ಲದೆ ಕೋಟ್ಯಂತರ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮತದಾನದ ಹಕ್ಕು ಕಳೆದುಕೊಂಡಿದ್ದಾರೆ ಎನ್ನಲಾದ 13.41 ಕೋಟಿ ನಾಗರಿಕರ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಬೇಕು. ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆಯಾಗದಂತೆ ಮತದಾರರ ಪಟ್ಟಿಯನ್ನು ನಿರ್ವಹಿಸಬೇಕು ಎಂದು ಆಗ್ರಹಿಸಿದರು.

2023ರ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತರಬೇಕು. ಆಯ್ಕೆ ಸಮಿತಿಯಲ್ಲಿ ಪ್ರಧಾನಮಂತ್ರಿ ನಾಮನಿರ್ದೇಶನ ಮಾಡುವ ಕೇಂದ್ರ ಸಚಿವರ ಬದಲಿಗೆ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಬೇಕು ಎಂದು ಒತ್ತಾಯಿಸಿದರು. ಇದಲ್ಲದೆ, ಸಮಗ್ರ ಚುನಾವಣಾ ಸುಧಾರಣೆಗಳನ್ನು ಜಾರಿಗೊಳಿಸಬೇಕು, ಅನುಪಾತಾತ್ಮಕ ಪ್ರಾತಿನಿಧ್ಯ ವ್ಯವಸ್ಥೆಯನ್ನು ಪರಿಚಯಿಸಬೇಕು, ಚುನಾವಣೆಗಳಲ್ಲಿ ಹಣಬಲ ಮತ್ತು ತೋಳ್ಬಲದ ಪ್ರಭಾವವನ್ನು ತಡೆಗಟ್ಟಬೇಕು ಹಾಗೂ ಚುನಾವಣೆಗಳಿಗೆ ರಾಜ್ಯದಿಂದ ಕಾನೂನುಬದ್ಧವಾಗಿ ಹಣಕಾಸಿನ ನೆರವು ಒದಗಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಮುಂದಿಟ್ಟ ಪ್ರಮುಖ ಹಕ್ಕೊತ್ತಾಯಗಳಲ್ಲಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಬೇಕು ಮತ್ತು ಪೊಲೀಸರ ನಿರ್ಬಂಧದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂಬ ಬೇಡಿಕೆ ಪ್ರಮುಖವಾಗಿತ್ತು. ಪ್ರತಿಭಟನಾಕಾರರು, ವಿದ್ಯಾರ್ಥಿನಿಯರು ಮತ್ತು ಪತ್ರಕರ್ತೆಯರ ಮೇಲೆ ನಡೆದಿವೆ ಎನ್ನಲಾದ ದೌರ್ಜನ್ಯ, ಹಲ್ಲೆ ಹಾಗೂ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಅಕ್ರಮವಾಗಿ ಗೃಹ ಬಂಧನದಲ್ಲಿಡುವುದು, ಅವರ ಮನೆಗಳಿಗೆ ಅಕ್ರಮವಾಗಿ ಪ್ರವೇಶಿಸುವುದು ಹಾಗೂ ಪೊಲೀಸ್ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.

ನಾಗರಿಕರ ಸಂವಿಧಾನಬದ್ಧ ಮೂಲಭೂತ ಹಕ್ಕುಗಳು, ಖಾಸಗಿತನ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ಪ್ರತಿಭಟನೆಯಲ್ಲಿ ರಂಗಾಯಣದ ಮಾಜಿ ನಿರ್ದೇಶಕ ಎಚ್. ಜನಾರ್ಧನ್ (ಜನ್ನಿ), ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ, ಸವಿತಾ ಪಾ. ಮಲ್ಲೇಶ್, ರತಿರಾವ್, ನಾ. ದಿವಾಕರ್, ದಸಂಸ ಸಂಚಾಲಕರಾದ ಅಲಗೂಡು ಶಿವಕುಮಾರ್, ದೇವಗಳ್ಳಿ ಸೋಮಶೇಖರ್, ಚೋರನಹಳ್ಳಿ ಶಿವಣ್ಣ, ಡಾ. ಮ.ಪು. ಪೂರ್ಣಾನಂದ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಕಂದೇಗಾಲ ಶ್ರೀನಿವಾಸ್, ನೆಲೆಹಿನ್ನೆಲೆ ಗೋಪಾಲ್, ವರಹಳ್ಳಿ ಆನಂದ, ಮಲ್ಲಹಳ್ಳಿ ನಾರಾಯಣ, ಕಲೀಂ ಪಾಷ, ಎನ್. ವಿಜಯಕುಮಾರ್, ಲ. ಜಗನ್ನಾಥ್, ಶಂಭುಲಿಂಗಸ್ವಾಮಿ, ಭೂಮಿಗೌಡ, ಕೆ. ಬಸವರಾಜು, ಬೀರೇಶ್ವರ, ದೇವದಾಸ್, ಅಮ್ಮದ್, ಸುಶೀಲಾ, ರತಿರಾವ್, ಮಾಳವಿಕ ಗುಬ್ಬಿವಾಣಿ, ಕುಮಾರಸ್ವಾಮಿ, ಶಿವಕುಮಾರ್, ಕಲ್ಲಹಳ್ಳಿ ಕುಮಾರ್, ಜಿ. ರಾಜೇಂದ್ರ, ಅಸಾದುಲ್ಲಾ ಸೇರಿದಂತೆ ವಿವಿಧ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...