SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಎಸ್‌ಡಿಪಿಐ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಫಾರಂ ನಂ.7 ಮೂಲಕ ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ಅಳಿಸುವ ಪ್ರಯತ್ನ ನಡೆದಿದೆ ಎಂಬ ಆರೋಪಗಳ ಕುರಿತು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡ (SIT) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್ ಮಾತನಾಡಿ, SIR ಪ್ರಕ್ರಿಯೆಯ ಕುರಿತು ಪಕ್ಷವು ಈ ಹಿಂದೆಯೇ ಹಲವು ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದು, ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿ ಜನಾಗ್ರಹ ಸಮಾವೇಶವನ್ನೂ ನಡೆಸಲಾಗಿದೆ. ಆದರೂ SIRಗೆ ಸಂಬಂಧಿಸಿದ ಗೊಂದಲಗಳು ಮುಂದುವರಿದಿದ್ದು, ಮತದಾರರ ಹಕ್ಕಿಗೆ ಧಕ್ಕೆ ಉಂಟಾಗುವ ಆತಂಕವಿದೆ ಎಂದು ಹೇಳಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಬ್ಯಾಡಗೊಟ್ಟ ಗ್ರಾಮದ ಬೂತ್ ಸಂಖ್ಯೆ 21ಕ್ಕೆ ಸಂಬಂಧಿಸಿದಂತೆ 64 ನಮೂನೆ-7ಗಳು ಸಲ್ಲಿಕೆಯಾಗಿರುವುದು ಗಂಭೀರ ವಿಚಾರವಾಗಿದೆ. ಈ ನಮೂನೆಗಳನ್ನು ಬಿಜೆಪಿ ಪಕ್ಷದ ಬಿಎಲ್‌ಎಗಳು ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವುಗಳನ್ನು ಸೋಮವಾರಪೇಟೆಯ ಬಿಜೆಪಿ ಕಚೇರಿಯಲ್ಲಿ ಮುದ್ರಿಸಲಾಗಿದೆ ಎಂಬ ಆರೋಪವೂ ಇದೆ ಎಂದು ಅವರು ತಿಳಿಸಿದರು.

ಕೇವಲ ಒಂದು ಬೂತ್‌ನಲ್ಲೇ ಇಷ್ಟೊಂದು ಪ್ರಮಾಣದ ನಮೂನೆ-7ಗಳು ಸಲ್ಲಿಕೆಯಾಗಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಕ್ಷೇತ್ರದ ಸುಮಾರು 200 ಬೂತ್‌ಗಳನ್ನು ಪರಿಗಣಿಸಿದರೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿರಬಹುದೆಂಬ ಅನುಮಾನ ಮೂಡಿದೆ ಎಂದು ಅಮೀನ್ ಮೊಹ್ಸಿನ್ ಆರೋಪಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮೂನೆ-7ಗಳನ್ನು ಸಿದ್ಧಪಡಿಸಿದವರು, ಮುದ್ರಿಸಿದವರು ಹಾಗೂ ಸಲ್ಲಿಸಿದವರು ಸೇರಿದಂತೆ ಎಲ್ಲರ ಪಾತ್ರದ ಕುರಿತು ತನಿಖೆ ನಡೆಸಬೇಕು. ಸಂಬಂಧಪಟ್ಟ ಬಿಎಲ್‌ಎಗಳಾದ ರಜಿನಿ ಯು.ಎಲ್., ಲೋಕೇಶ್ ಹಾಗೂ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣವು ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿದೆಯೇ ಅಥವಾ ರಾಜ್ಯದ ಇತರ ಭಾಗಗಳಲ್ಲಿಯೂ ಇದೇ ರೀತಿಯ ಅಕ್ರಮಗಳು ನಡೆದಿವೆಯೇ ಎಂಬುದನ್ನು ಪತ್ತೆಹಚ್ಚಲು ರಾಜ್ಯಮಟ್ಟದ SIT ರಚಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಿತ ನಮೂನೆಗಳು, ದಾಖಲೆಗಳು, ಡಿಜಿಟಲ್ ದಾಖಲೆಗಳು, ಸಿಸಿಟಿವಿ ದೃಶ್ಯಗಳು ಸೇರಿದಂತೆ ಎಲ್ಲ ಸಾಕ್ಷ್ಯಗಳನ್ನು ಸಂರಕ್ಷಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿ SIR ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ಎಸ್‌ಡಿಪಿಐ ಮುಖಂಡರು ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ಯಾಡಗೊಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ವಿಶೇಷ ವರದಿ ಓದಿದ್ದೀರಾ? SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಉಪಾಧ್ಯಕ್ಷ ಹಾಗೂ ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ. ಮನ್ಸೂರ್ ಆಲಿ, ಎಸ್‌ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ನಗರಸಭಾ ಸದಸ್ಯರಾದ ಬಶೀರ್, ಮೇರಿ ವೆಗಸ್, ಕೆ. ಮೊಣ್ಣಪ್ಪ, ಡಿ.ಎಸ್. ನಿರ್ವಾಣಪ್ಪ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...