‘ಎಸ್‌ಐಆರ್ ವಿರೋಧಿ’ ಪ್ರತಿಭಟನೆ: ಹೋರಾಟದ ಬೆಂಬಲಕ್ಕೆ ನಿಂತ ನಿರ್ಮಲಾ ಸೀತಾರಾಮನ್ ಪತಿ ಪರಕಾಲ ಪ್ರಭಾಕರ್

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು, ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಪ್ರಕ್ರಿಯೆ ಖಂಡಿಸಿ ಅಕ್ಟೋಬರ್ 23ರಂದು ನಡೆಯಲಿರುವ ‘ಎಸ್‌ಐಆರ್ ವಿರೋಧಿ’ ದೇಶವ್ಯಾಪಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಮುಖರೊಂದಿಗೆ ಅವರು ವೇದಿಕೆ ಹಂಚಿಕೊಳ್ಳುವ ನಿರೀಕ್ಷೆಯಿದೆ.

- Advertisement -

​’ಎಸ್‌ಐಆರ್ ವಿರೋಧಿ’ ಒಕ್ಕೂಟವು ಈ ಪ್ರತಿಭಟನೆಯನ್ನು ಆಯೋಜಿಸಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಬಿಡುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದೆ. ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಅಪಾಯವಿದೆ ಎಂದು ಒಕ್ಕೂಟ ಆರೋಪಿಸಿದೆ. “ಹರ್ ಹಾಥ್ ಮೇ ತಿರಂಗಾ, ಹರ್ ಗಲ್ಲಿ ಮೇ ಜಂತರ್ ಮಂತರ್” ಎಂಬ ಘೋಷವಾಕ್ಯದಡಿ, ದೇಶಾದ್ಯಂತ ಜನರು ತಮ್ಮ ಪ್ರದೇಶಗಳಲ್ಲಿಯೇ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಕರೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

​ಹಿರಿಯ ವಕೀಲ ಪ್ರಶಾಂತ್ ಭೂಷಣ್, ರೈತ ಮುಖಂಡ ರಾಕೇಶ್ ಟಿಕಾಯತ್, ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆ ನೇಹಾ ಬೋರಾ ಹಾಗೂ ಲೇಖಕ ತುಷಾರ್ ಗಾಂಧಿ ಕೂಡ ಈ ‘ಎಸ್‌ಐಆರ್ ವಿರೋಧಿ’ ಚಳವಳಿಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಕ್ಟೋಬರ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದ ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲೂ ಧ್ರುವ್ ರಾಠಿ ಹಾಗೂ ಇತರರೊಂದಿಗೆ ಪ್ರಭಾಕರ್ ಪಾಲ್ಗೊಂಡಿದ್ದರು.

​’ದಿ ಕ್ರುಕೆಡ್ ಟಿಂಬರ್ ಆಫ್ ನ್ಯೂ ಇಂಡಿಯಾ’ ಪುಸ್ತಕದ ಲೇಖಕರಾಗಿರುವ ಪ್ರಭಾಕರ್, ಈ ಹಿಂದೆಯೂ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ನೋಟು ಅಮಾನ್ಯೀಕರಣದಂತಹ ನಿರ್ಧಾರಗಳನ್ನು ಕಟುವಾಗಿ ಟೀಕಿಸಿದ್ದರು. 2014-2018ರ ಅವಧಿಯಲ್ಲಿ ಆಂಧ್ರಪ್ರದೇಶ ಸರ್ಕಾರದ ಸಂವಹನ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದ ಇವರ ಪ್ರಸ್ತುತ ನಡೆಯು, ಚುನಾವಣಾ ಪಾರದರ್ಶಕತೆ ಮತ್ತು ಮತದಾರರ ಹಕ್ಕುಗಳ ರಕ್ಷಣೆಯ ಕುರಿತ ಚರ್ಚೆಗೆ ಮತ್ತಷ್ಟು ಕಾವು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು ಸೇರಿ 11 ಬಂದರುಗಳನ್ನು ಮಾರಲು ಹೊರಟ ಮೋದಿ

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಭಾರತದಲ್ಲೇ ಮೊದಲ ಬಾರಿಗೆ eSIM ಬಾಕ್ಸ್ ಜಾಲ ಪತ್ತೆ; 55 ದಿನಗಳ ಕಾರ್ಯಾಚರಣೆ ಬಳಿಕ ನಾಲ್ವರ ಬಂಧನ

ದೇಶದಲ್ಲೇ ಮೊದಲ ಬಾರಿಗೆ ಇಂತಹ ಪ್ರಕರಣವನ್ನು ಭೇದಿಸಿರುವುದಾಗಿ ಹೇಳಲಾಗಿರುವ ಕರ್ನಾಟಕ ರಾಜ್ಯ...