ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

Date:

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ ಸರ್ಕಾರಿ ದೌರ್ಜನ್ಯ ನಡೆಸಿ ಬಂಧಿಸಿದರೆ ಇಡೀ ಕರ್ನಾಟಕ ನಾಗರಿಕ ಸಮಾಜ ಒಗ್ಗಟ್ಟಿನಿಂದ ತೀವ್ರ ಹೋರಾಟ ರೂಪಿಸಲಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಎಸ್‌ಐಆರ್ ವಿರೋಧಿ ಕರ್ನಾಟಕದ ನಾಯಕ ನೂರ್ ಶ್ರೀಧರ್ ಎಚ್ಚರಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಅಕ್ಟೋಬರ್ 10 ರಂದು ಜಂತರ್ ಮಂತರ್‌ನಲ್ಲಿ ದೆಹಲಿ ಚಲೋ ಸತ್ಯಾಗ್ರಹ ನಡೆಯಲಿದೆ. ಈ ಹೋರಾಟವನ್ನು ಅತ್ಯಂತ ಕಮಿಟ್‌ಮೆಂಟ್ ಮತ್ತು ಶಕ್ತಿಯಿಂದ ಮುನ್ನಡೆಸುತ್ತಿರುವ ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜದ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕರ್ನಾಟಕದಲ್ಲಿ ಎಸ್ಐಆರ್ ವಿರುದ್ಧ ನಡೆದ ಹೋರಾಟದ ಸ್ವರೂಪ ಮತ್ತು ಬೆಳವಣಿಗೆಯ ಕುರಿತು ವಿವರಿಸಿದ ನೂರ್ ಶ್ರೀಧರ್, ಸುಮಾರು 5,000 ಗ್ರೌಂಡ್ ವಾಲಂಟಿಯರ್‌ಗಳು ಮತ್ತು ನೂರಾರು ಸಂಘಟನೆಗಳು ನಿರಂತರವಾಗಿ ಶ್ರಮಿಸುತ್ತಿದ್ದರೂ ಹೋರಾಟಕ್ಕೆ ಸೂಕ್ತ ಧ್ವನಿ ಸಿಕ್ಕಿರಲಿಲ್ಲ. ಆದರೆ ನಟ ಪ್ರಕಾಶ್ ರಾಜ್ ಅವರು ಈ ಹೋರಾಟಕ್ಕೆ ಧ್ವನಿಯಾಗಿ, ರಾಜ್ಯದ 26 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಶೋಷಿತರು, ಅಲೆಮಾರಿಗಳು, ದಲಿತರು ಮತ್ತು ಅಲ್ಪಸಂಖ್ಯಾತ ಸಂತ್ರಸ್ತರ ಸ್ಥಿತಿಯನ್ನು ಮುನ್ನೆಲೆಗೆ ತಂದರು. ಈ ಯುವಕರ ಬದ್ಧತೆ ಹಾಗೂ ಹೋರಾಟದ ಹಾದಿಯನ್ನು ಕಂಡು ಹಿರಿಯ ಬರಹಗಾರ ದೇವನೂರು ಮಹಾದೇವ ಅವರು ತೀವ್ರ ನಿರಾಳತೆ ಮತ್ತು ಸಂತಸ ವ್ಯಕ್ತಪಡಿಸಿದ್ದಾರೆ.

ದೆಹಲಿ ಪ್ರತಿಭಟನೆಯ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮೂರು ಪ್ರಮುಖ ಆಯ್ಕೆಗಳನ್ನು ನೂರ್ ಶ್ರೀಧರ್ ಮುಂದಿಟ್ಟಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಪುರಸ್ಕರಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸುವುದು ಮೊದಲ ಆಯ್ಕೆಯಾದರೆ, ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಡುವುದು ಎರಡನೇ ಆಯ್ಕೆಯಾಗಿದೆ. ಒಂದು ವೇಳೆ ಈ ಎರಡನ್ನೂ ಮಾಡದೆ ಕೇಂದ್ರ ಸರ್ಕಾರ ಅಥವಾ ದೆಹಲಿ ಪೊಲೀಸರು ದೌರ್ಜನ್ಯ ಮತ್ತು ಹಿಂಸಾಚಾರದ ಹಾದಿ ತುಳಿದರೆ, ದೇಶಾದ್ಯಂತ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಅವರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...