ಚಿಕ್ಕಮಗಳೂರು | ಪ್ರಜಾಪ್ರಭುತ್ವ ಮರಳಿ ಪಡೆಯಲು ಜನತಾ ಮೆರವಣಿಗೆ: ಮೋದಿ ಸರ್ಕಾರಕ್ಕೆ ಸಂಘಟಕರ ಸವಾಲು 

Date:

People Against SIR (PA-SIR) ಸಂಘಟನೆಯ ವತಿಯಿಂದ ಚಿಕ್ಕಮಗಳೂರಿನ ಅಝಾದ್ ಪಾರ್ಕ್‌ನಲ್ಲಿ ನಡೆದ ಜನತಾ ಮೆರವಣಿಗೆಯಲ್ಲಿ ಮಾತನಾಡಿದ SDPI ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ದೆಹಲಿಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದ ಮೋದಿ ಸರ್ಕಾರಕ್ಕೆ ತಾಕತ್ತಿದ್ದರೆ, ದೇಶಾದ್ಯಂತ ನಡೆಯುತ್ತಿರುವ “ಗಲ್ಲಿ ಗಲ್ಲಿ, ಶಹರ್ ಶಹರ್ — ಜನತರ್ ಮಂತರ್” ಅಭಿಯಾನವನ್ನು ತಡೆಯಲಿ ಎಂದು ಸವಾಲೆಸೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದೆ. ದೆಹಲಿಯಲ್ಲಿ ಪ್ರತಿಭಟನೆಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸಬಹುದು; ಆದರೆ ದೇಶದ ಪ್ರತಿಯೊಂದು ಗಲ್ಲಿ ಮತ್ತು ಪ್ರತಿಯೊಂದು ನಗರದಲ್ಲಿ ಮೊಳಗುತ್ತಿರುವ ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಜನರ ಹಕ್ಕುಗಳಿಗಾಗಿ ನಡೆಯುವ ಹೋರಾಟವನ್ನು ದಮನಿಸುವ ಪ್ರಯತ್ನಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು.

ಆಲ್ದೂರಿನಲ್ಲಿ ಮತದಾರರ ಹಕ್ಕುಗಳ ರಕ್ಷಣೆಗೆ SDPI ಯಶಸ್ವಿ ಹೋರಾಟ

ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ SDPI ಕಾರ್ಯಕರ್ತರು ಪ್ರತಿಯೊಂದು ಬೂತ್‌ನಲ್ಲೂ BLOಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮತದಾರರ ಹಕ್ಕುಗಳ ರಕ್ಷಣೆಗೆ ಶ್ರಮಿಸಿದ್ದಾರೆ. ಆಲ್ದೂರಿನಲ್ಲಿ ಅರ್ಹ ಮತದಾರರ ವಿರುದ್ಧ ಒಂದೇ ಒಂದು Form-7 ಅರ್ಜಿಯೂ ಸಲ್ಲಿಕೆಯಾಗದಂತೆ ತಡೆಯುವಲ್ಲಿ SDPI ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದು ಮುಸ್ತಫ ಆಲ್ದೂರು ತಿಳಿಸಿದರು.

ಆದರೆ, ಇತರೆ ಪ್ರದೇಶಗಳಲ್ಲಿ ಮುಸ್ಲಿಮರು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಉದ್ದೇಶದಿಂದ ಬಿಜೆಪಿ BLAಗಳು Form-7 ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಇಂತಹ ದೂರುಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಆಗ್ರಹಿಸಿದರು.

“ಗಲ್ಲಿ ಗಲ್ಲಿ, ಶಹರ್ ಶಹರ್ — ಜನತರ್ ಮಂತರ್” ಅಭಿಯಾನದ ಮೂಲಕ ದೇಶದಾದ್ಯಂತ ಜನರ ಧ್ವನಿ ಮೊಳಗಲಿದೆ. SIR ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಮತದಾರರ ಹಕ್ಕುಗಳ ರಕ್ಷಣೆಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ. SIR ರದ್ದಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಮುಸ್ತಫ ಆಲ್ದೂರು ಎಚ್ಚರಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ಪ್ರಜಾಪ್ರಭುತ್ವವನ್ನು ಉಳಿಸಲು, ಸಂವಿಧಾನವನ್ನು ರಕ್ಷಿಸಲು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ಕಾಪಾಡಲು ಎಲ್ಲಾ ಜನಪರ ಸಂಘಟನೆಗಳು, ದಲಿತ ಸಂಘಟನೆಗಳು, ರೈತ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಪ್ರಜಾಪ್ರಭುತ್ವದ ಪರ ಇರುವ ನಾಗರಿಕರು ಒಗ್ಗೂಡಿ ಹೋರಾಟಕ್ಕೆ ಕೈಜೋಡಿಸಬೇಕೆಂದು ಪ್ರಗತಿಪರ ಸಂಘಟನೆಗಳು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...