ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

Date:

ದೆಹಲಿಯಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ‘ಹಿಂದು ರಕ್ಷಾ ದಳ’ಕ್ಕೆ ಸೇರಿದ ನಾಲ್ವರು ಗೂಂಡಾಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಅಕ್ಟೋಬರ್ 10ರಂದು ದೆಹಲಿಯ ಡಿ.ಡಿ.ಯು ಮಾರ್ಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಬಿಜೆಪಿ ಬೆಂಬಲಿತ ಗೂಂಡಾಗಳು ಹಲ್ಲೆ ನಡೆಸಿದ್ದರು. ಹಲ್ಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ದೃಶ್ಯಾವಳಿಯಲ್ಲಿ ಹಲ್ಲೆ ನಡೆಯುತ್ತಿದ್ದಾಗ ಸ್ಥಳದಲ್ಲಿ ಪೊಲೀಸರು ಇರುವುದು ಮತ್ತು ಅವರು ಹಲ್ಲೆಯನ್ನು ತಡೆಯದೇ ಇದ್ದದ್ದು ಕಂಡುಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ವಿಡಿಯೋ ವೈರಲ್ ಆಗಿ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ, ಪೊಲೀಸರು ಸ್ವಯಂಪ್ರೇರಿತವಾಗಿ ‘ಸುವೋ ಮೋಟೊ’ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆರೋಪಿಗಳು ದೆಹಲಿ-ಎನ್‌ಸಿಆರ್ ಪ್ರದೇಶದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾರೆ ಎಂಬ ಗೌಪ್ಯ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಾಮನ್ ಸೈನಿ (50), ವಿವೇಕಾನಂದ ಅಲಿಯಾಸ್ ವಿವೇಕ್ (32), ಕಪಿಲ್ ಕುಮಾರ್ (27) ಹಾಗೂ ರವೀಂದರ್ ಸಿಂಗ್ ಅಲಿಯಾಸ್ ಗೋವಿಂದ್ ಹಿಂದು (35) ಎಂದು ಗುರುತಿಸಲಾಗಿದೆ.

ಪ್ರತಿಭಟನಾನಿರತರ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋಗಳನ್ನು ಭಾರತೀಯ ಯೂತ್ ಕಾಂಗ್ರೆಸ್, ಎಐಎಸ್‌ಎ ಹಾಗೂ ಸಿಜೆಪಿ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...