ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

Date:

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ದೆಹಲಿಗೆ ಬಂದಿಳಿದಿದ್ದಾರೆ. ಅವರು ದೆಹಲಿ ವಿಮಾನ ನಿಲ್ದಾಣ ತಲುಪುತ್ತಿದ್ದಂತೆಯೇ, ಮೂವರನ್ನೂ ವಿಮಾನದೊಳಗೇ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಶನಿವಾರ ಜಂತರ್ ಮಂತರ್‌ನಲ್ಲಿ ‘ಜಂತರ್ ಮಂತರ್ 2.0’ ಪ್ರತಿಭಟನೆಗಾಗಿ ಮುಂಬೈನಿಂದ ವಿಮಾನದ ಮೂಲಕ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಮೂವರು ನಾಯಕರು ಆಗಮಿಸಿದ್ದಾರೆ. ವಿಮಾನವು ವಿಮಾನ ನಿಲ್ದಾಣದಲ್ಲಿ ನಿಂತ ತಕ್ಷಣವೇ ದೆಹಲಿ ಪೊಲೀಸರ ತಂಡವು ವಿಮಾನದೊಳಗೇ ನುಗ್ಗಿ, ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಯಾವುದೇ ಕಾರಣಕ್ಕೂ ಇವರು ವಿಮಾನ ನಿಲ್ದಾಣದಿಂದ ಹೊರಬಂದು ಜಂತರ್ ಮಂತರ್‌ಗೆ ತೆರಳಬಾರದು ಎಂದು ಪೊಲೀಸರು ಈ ದಮನಕಾರಿ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ಹಿಂದೆ ದೆಹಲಿಗೆ ಆಗಮಿಸುವ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, “ನಾವು ಪ್ರಜಾಪ್ರಭುತ್ವವನ್ನು ಉಳಿಸಲು ದೆಹಲಿಗೆ ತೆರಳುತ್ತಿದ್ದೇವೆ. ದೆಹಲಿ ವಿಮಾನ ನಿಲ್ದಾಣಕ್ಕೆ ಕಾಲಿಡುತ್ತಿದ್ದಂತೆ ಪೊಲೀಸರು ನಮ್ಮನ್ನು ಬಂಧಿಸಿದರೂ ಅಥವಾ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಯಡಿಯಲ್ಲಿ ಪ್ರಕರಣ ದಾಖಲಿಸಿದರೂ ನಾವು ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಹೇಳಿದ್ದರು. ಅವರ ಊಹೆಯಂತೆಯೇ, ದೆಹಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿಯೇ ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕೇವಲ ವಿಮಾನ ನಿಲ್ದಾಣದಲ್ಲಿ ಮಾತ್ರವಲ್ಲದೆ, ದೆಹಲಿ ಗಡಿ ಪ್ರದೇಶಗಳಲ್ಲಿ ಹಾಗೂ ಜಂತರ್ ಮಂತರ್‌ನತ್ತ ಆಗಮಿಸುತ್ತಿದ್ದ ಪ್ರಮುಖ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಕೂಡ ಗುರುಗ್ರಾಮದ ಬಳಿ ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೇಶಾದ್ಯಂತ ಜಂತರ್ ಮಂತರ್ ಚಳವಳಿಗೆ ಬೆಂಬಲ ಸೂಚಿಸಿ ಬಂದಿರುವ ಸಾವಿರಾರು ಯುವಕರು, ವಿದ್ಯಾರ್ಥಿ ಸಂಘಟನೆಗಳ ನಾಯಕರು ಹಾಗೂ ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...