SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

Date:

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಅಕ್ರಮಗಳಿಗೆ ಹೊಣೆಹೊತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಟನೆ (AISA) ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು (ಅ.10) ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ಆಂದೋಲನವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ದೆಹಲಿಯಾದ್ಯಂತ ಅರೆಸೇನಾ ಮತ್ತು ಪೊಲೀಸ್ ತುಕಡಿಗಳನ್ನು ನಿಯೋಜಿಸಿ, ಇಡೀ ನಗರವನ್ನೇ ದಿಗ್ಭಂದನದಲ್ಲಿಟ್ಟಿದೆ. ಸರ್ಕಾರದ ಈ ದಮನಕಾರಿ ನಿರ್ಬಂಧಗಳ ವಿರುದ್ಧ ಕಿಡಿಕಾರಿರುವ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, “ದೇಶದಲ್ಲಿ ಪ್ರಸ್ತುತ ನಿರ್ಮಾಣವಾಗಿರುವ ಸನ್ನಿವೇಶವು ‘ತುರ್ತು ಪರಿಸ್ಥಿತಿಗಿಂತಲೂ ಅತ್ಯಂತ ಭೀಕರವಾಗಿದೆ’. ತುರ್ತು ಪರಿಸ್ಥಿತಿಯ ಸಮಯದಲ್ಲೂ ರೈಲುಗಳು ಸಮಯಕ್ಕೆ ಸರಿಯಾಗಿ ಓಡಿದ್ದವು. ಆದರೆ, ಇಂದು ಶಾಂತಿಯುತ ಪ್ರತಿಭಟನೆಗೂ ಅವಕಾಶವಿಲ್ಲದಂತೆ ಎಲ್ಲವನ್ನು ನಿರ್ಬಂಧಿಸಲಾಗಿದೆ” ಎಂದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

- Advertisement -

ಪ್ರತಿಭಟನೆಗಾಗಿ ದೆಹಲಿಗೆ ತೆರಳುವ ಮುನ್ನ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “1975ರ ತುರ್ತು ಪರಿಸ್ಥಿತಿಯ ಸಮಯದಲ್ಲೂ ದೇಶದಲ್ಲಿ ಕನಿಷ್ಠ ರೈಲುಗಳು ಸಮಯಕ್ಕೆ ಸರಿಯಾಗಿ ಚಲಿಸುತ್ತಿದ್ದವು. ಆದರೆ ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸಾರ್ವಜನಿಕರ ಶಾಂತಿಯುತ ಪ್ರತಿಭಟನೆಗೆ ಹೆದರಿ ಸರ್ಕಾರವು ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ನೂರಾರು ರೈಲುಗಳ ಸಂಚಾರವನ್ನೇ ರದ್ದುಗೊಳಿಸುವ ಭೀಕರ ನಿರ್ಧಾರ ಕೈಗೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಕ್ಟೋಬರ್ 2ರಂದು ಸಿಜೆಪಿ ಪ್ರತಿಭಟನೆಗೆ ಅನುಮತಿ ಕೇಳಿದಾಗ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ನೆಪ ಹೇಳಿ ಅನುಮತಿ ನಿರಾಕರಿಸಲಾಗಿತ್ತು. ಆದರೆ, ಈಗ ಸ್ವತಃ ಸರ್ಕಾರವೇ ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿ, ರೈಲು ಸಂಚಾರ ತಡೆದು, ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಲಕ್ಷಾಂತರ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಈ ದ್ವಂದ್ವ ನೀತಿ ಏಕೆ” ಎಂದು ಅವರು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಜಂತರ್ ಮಂತರ್ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ ಅರೆಸೇನಾ ಪಡೆಗಳ ಸುಮಾರು 30,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ದೆಹಲಿಯ ಗಡಿಗಳಲ್ಲಿ ಮತ್ತು ಪ್ರಮುಖ ರಸ್ತೆಗಳಲ್ಲಿ ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೆ, ಶುಕ್ರವಾರ ರಾತ್ರಿಯಿಂದ ಶನಿವಾರ ಸಂಜೆಯವರೆಗೆ ಸುಮಾರು 245ಕ್ಕೂ ಹೆಚ್ಚು ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. 45ಕ್ಕೂ ಹೆಚ್ಚು ಪ್ರಮುಖ ಮೆಟ್ರೋ ನಿಲ್ದಾಣಗಳ ಗೇಟ್‌ಗಳನ್ನು ಮುಚ್ಚಲಾಗಿದೆ. ಸೆಂಟ್ರಲ್ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರ ಸಂಚಾರಕ್ಕೆ ಮತ್ತು ಸಾಮಾನ್ಯ ಜೀವನಕ್ಕೆ ಕಂಠಕವಾಗುವಂತೆ ವಿಧಿಸಲಾಗಿರುವ ಈ ಕಠಿಣ ನಿರ್ಬಂಧಗಳನ್ನು ಗಮನಿಸಿದ ಸುಪ್ರೀಂ ಕೋರ್ಟ್ ಕೂಡ ತೀವ್ರ ಕಳವಳ ವ್ಯಕ್ತಪಡಿಸಿದ್ದು, “ಸಣ್ಣ ನೊಣವನ್ನು ಕೊಲ್ಲಲು ಭಾರೀ ಗಾತ್ರದ ಸುತ್ತಿಗೆಯನ್ನು ಬಳಸಲು ಸಾಧ್ಯವಿಲ್ಲ” ಎಂದು ಸರ್ಕಾರದ ಕ್ರಮವನ್ನು ಟೀಕಿಸಿದೆ.

ಸರ್ಕಾರದ ಭದ್ರತಾ ತಡೆಗೋಡೆಗಳು, ಬೆದರಿಕೆಗಳು ಹಾಗೂ ಬಂಧನದ ಭೀತಿಗೆ ತಾವು ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ ಎಂದು ಅಭಿಜಿತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ. ತಮ್ಮ ಸಂಘಟನೆಗೆ ಯಾವುದೇ ದೊಡ್ಡ ಮಟ್ಟದ ಹಣಕಾಸಿನ ಬಲವಾಗಲಿ, ಹಳೆಯ ರಾಜಕೀಯ ಪಕ್ಷಗಳಂತೆ ಲಕ್ಷಾಂತರ ಕಾರ್ಯಕರ್ತರ ಪಡೆಯಾಗಲಿ ಇಲ್ಲ, ತಮಗಿರುವುದು ಕೇವಲ ದೇಶದ ನೊಂದ ಯುವಜನರ ಮತ್ತು ಸಾರ್ವಜನಿಕರ ಅಭೂತಪೂರ್ವ ಬೆಂಬಲ ಮಾತ್ರ ಎಂದು ಅವರು ಹೇಳಿದ್ದಾರೆ.

ಈ ಸಾರ್ವಜನಿಕ ಬೆಂಬಲದ ಬಲದ ಮೇಲೆ ತಾವು ಜಂತರ್ ಮಂತರ್ ಚಲೋ ನಡೆಸಿಯೇ ತೀರುತ್ತೇವೆ ಎಂದಿರುವ ಅವರು, “ಪ್ರಜಾಪ್ರಭುತ್ವದ ಹಕ್ಕುಗಳ ರಕ್ಷಣೆಗಾಗಿ ಮತ್ತು ಜನರ ಧ್ವನಿಯನ್ನು ಎತ್ತಿಹಿಡಿಯಲು ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ,” ಎಂದು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ, ಮೊದಲ ದಿನದಿಂದಲೇ ನಾವು ಬಂಧನವನ್ನು ಎದುರುನೋಡುತ್ತಿದ್ದೇವೆ. ಸರ್ಕಾರ ದೆಹಲಿಯನ್ನು ಎಷ್ಟು ದಿನಗಳ ಕಾಲ ಸೇನಾ ಶಿಬಿರದಂತೆ ಕಾಯಲು ಸಾಧ್ಯ? ಸಿಜೆಪಿ ಮುಖ್ಯ ನಾಯಕರನ್ನು ಪೊಲೀಸರು ಬಂಧಿಸಿದರೂ ಸಹ, ದೇಶದ ಮೂಲೆ ಮೂಲೆಗಳಿಂದ ಬರುತ್ತಿರುವ ಯುವಜನರು ಜಂತರ್ ಮಂತರ್ ತಲುಪಲಿದ್ದಾರೆ. ಗ್ಯಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಈ ಜನಪರ ಹೋರಾಟ ಯಾವುದೇ ಕಾರಣಕ್ಕೂ ವಿರಮಿಸುವುದಿಲ್ಲ ಎಂದು ದೃಢವಾಗಿ ಸಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...