ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

Date:

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ ಸಿಪಿಐ(ಎಂ) ನಾಯಕರು, ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಸದಸ್ಯರು ಹಾಗೂ ಹಲವು ವಕೀಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಎಸ್‌ಎಫ್‌ಐ ಮತ್ತು ಇತರ ವಿದ್ಯಾರ್ಥಿ ಸಂಘಟನೆಗಳ ನೂರಾರು ಕಾರ್ಯಕರ್ತರು ಮತ್ತು ವಕೀಲರು ಸುಪ್ರೀಂ ಕೋರ್ಟ್‌ ಆವರಣದಿಂದ ಜಂತರ್ ಮಂತರ್ ಕಡೆಗೆ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನು ಭದ್ರತಾ ಕಾರಣಗಳು ಮತ್ತು ಕಾನೂನು ಪ್ರಕ್ರಿಯೆಗಳ ನೆಪವೊಡ್ಡಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪೊಲೀಸರ ತಡೆಯನ್ನೂ ಮೀರಿ ಮುನ್ನುಗ್ಗಲು ಯತ್ನಿಸಿದ ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಆದರ್ಶ್ ಎಂ. ಸಾಜಿ ಸೇರಿದಂತೆ 400ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಮತ್ತೊಂದೆಡೆ, ಜಂತರ್ ಮಂತರ್ ಪ್ರದೇಶದಲ್ಲಿ ಪ್ರತಿಭಟನೆಗೆ ಯತ್ನಿಸುತ್ತಿದ್ದ ಸಿಪಿಐ(ಎಂ) ಹಿರಿಯ ನಾಯಕರಾದ ಎಂ. ಎ. ಬೇಬಿ, ಬೃಂದಾ ಕಾರಟ್ ಸೇರಿದಂತೆ ಹಲವಾರು ಎಡಪಂಥೀಯ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಒತ್ತಾಯಿಸಿ ಹಾಗೂ ಚುನಾವಣಾ ಅಕ್ರಮಗಳ ವಿರುದ್ಧ ತನಿಖೆಗೆ ಆಗ್ರಹಿಸಿ ಸಿಜೆಪಿ ಬೃಹತ್ ಪ್ರತಿಭಟನೆಗೆ ಕರೆಕೊಟ್ಟಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದ ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಸೌರವ್ ದಾವ್, ಅಶುತೋಷ್ ರಂಕಾ, ರತ್ನಾ ಸಿಂಗ್, ಖ್ಯಾತ ಯೂಟ್ಯೂಬರ್ ಧೃವ್ ರಾಠಿ, ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸಾವಿರಾರು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆಗೆ ಹೆದರಿದ ಮೋದಿ ಸರ್ಕಾರ: ಜಂತರ್‌ ಮಂತರ್‌ನಲ್ಲಿ ಮೊಳೆ-ಕಬ್ಬಿಣದ ಕೋಟೆ ಕಟ್ಟಿದ ದೆಹಲಿ ಪೊಲೀಸರು

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...