ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ವಿಜಯನ್ ಅವರು ಜಂತರ್ ಮಂತರ್‌ಗೆ ತೆರಳುತ್ತಿದ್ದರು. ಈ ವೇಳೆ, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪಿಣರಾಯಿ ವಿಜಯನ್ ಅವರನ್ನು ದೆಹಲಿಯ ಛತ್ರಸಾಲ್ ಕ್ರೀಡಾಂಗಣದ ಸಂಕೀರ್ಣದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ಜಂತರ್ ಮಂತರ್ ಸುತ್ತ ಮೊಳೆಗಳು, ಬೃಹತ್ ಬ್ಯಾರಿಕೇಡ್‌ಗಳು ಹಾಗೂ 30,000 ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡು ಪೊಲೀಸರು ಬೃಹತ್ ಸರ್ಪಗಾವಲು ರಚಿಸಿದ್ದಾರೆ. ಪ್ರತಿಭಟನಾಕಾರರು ಜಂತರ್ ಮಂತರ್ ಪ್ರವೇಶಿಸಿದಂತೆ ತಡೆಯುತ್ತಿದ್ದಾರೆ. ಮಾತ್ರವಲ್ಲದೆ, ಸಿಜೆಪಿ ನಾಯಕರು ಸೇರಿದಂತೆ ಸಾವಿರಾರು ಪ್ರತಿಭಟನಾಕಾರರನ್ನು ಬಂಧಿಸಿ, ಬಂಧನ ಕೇಂದ್ರಗಳಿಗೆ ಕರೆದೊಯ್ದಿದ್ದಾರೆ.



