ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ 4,000ಕ್ಕೂ ಹೆಚ್ಚು ಮಂದಿ ಬಂಧನ: ಹೋರಾಟ ನಿಲ್ಲದು ಎಂದ ಕಾಕ್ರೋಚ್‌ ಪಡೆ

Date:

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್‌ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ದೆಹಲಿ ಪೊಲೀಸರು ಸುಮಾರು 4,000ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಕಬ್ಬಿಣದ ಕೋಟೆ ಮತ್ತು ಬಂಧನಗಳ ನಡುವೆಯೂ ಹೋರಾಟ ನಿಲ್ಲುವುದಿಲ್ಲ, ಪ್ರತಿಭಟನೆಗಳು ಮುಂದುವರೆಯುತ್ತವೆ ಎಂದು ಸಿಜೆಪಿ ಹೇಳಿದೆ. ಯುವಜನರು ದೆಹಲಿಗೆ ಬರುವಂತೆ ಕರೆಕೊಟ್ಟಿದೆ.

- Advertisement -

ದೆಹಲಿಯಲ್ಲಿ ಜಂತರ್ ಮಂತರ್ ಕಡೆಗೆ ತೆರಳುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ ಸಂಪೂರ್ಣ ಬಂದ್ ಮಾಡಲಾಗಿದೆ. ಮೆಟ್ರೋ ನಿಲ್ದಾಣಗಳನ್ನೂ ಮುಚ್ಚಲಾಗಿದೆ. ದೆಹಲಿಯನ್ನು ಬಹುತೇಕ ಲಾಕ್‌ಡೌನ್ ಮಾದರಿಯಲ್ಲಿ ನಿರ್ಬಂಧಿಸಲಾಗಿದೆ. ಪೊಲೀಸರ ಸರ್ಪಗಾವಲನ್ನು ದಾಟಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳದ ನಾಯಕ ಪಿಣರಾಯಿ ವಿಜಯನ್, ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್, ಅಭಿಜೀತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ ಹಾಗೂ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಸೇರಿದಂತೆ ಸುಮಾರು 4,000 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಬಂಧನಗಳ ನಡುವೆಯೂ ಪ್ರತಿಭಟನೆ ಮುಂದುವರೆಸುವುದಾಗಿ ಸಿಜೆಪಿ ಘೋಷಿಸಿದೆ. “ದೆಹಲಿ ಪೊಲೀಸರು ನಿಮ್ಮನ್ನು ಎಲ್ಲಿ ತಡೆಯುತ್ತಾರೋ, ಅದೇ ಸ್ಥಳವನ್ನು ನಿಮ್ಮ ಜಂತರ್ ಮಂತರ್ ಆಗಿ ಪರಿವರ್ತಿಸಿ ಪ್ರತಿಭಟನೆ ನಡೆಸಿ” ಎಂದು ಹೋರಾಟಗಾರರಿಗೆ ಕರೆ ನೀಡಿದೆ.

ಸರ್ಕಾರವು ಸಾರ್ವಜನಿಕರ ಧ್ವನಿಯನ್ನು ಅಡಗಿಸಲು ಎಷ್ಟೇ ಪ್ರಯತ್ನಿಸಿದರೂ ಮತ್ತು ಬಂಧನಗಳ ಮೂಲಕ ಬೆದರಿಸಲು ನೋಡಿದರೂ, ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೂ ದೇಶವ್ಯಾಪಿ ಈ ಪ್ರತಿಭಟನೆ ಮುಂದುವರಿಯಲಿದೆ ಎಂದು ಸಿಜೆಪಿ ನಾಯಕರು ದೃಢವಾಗಿ ತಿಳಿಸಿದ್ದಾರೆ.

ಬಂಧಿತರಾದ ಪ್ರಮುಖ ನಾಯಕರನ್ನು ನಗರದ ವಿವಿಧ ತಾತ್ಕಾಲಿಕ ಬಂಧನ ಕೇಂದ್ರಗಳಿಗೆ ರವಾನಿಸಲಾಗಿದ್ದು, ವಿಪಕ್ಷಗಳು ಸರ್ಕಾರದ ಈ ಕಠಿಣ ನಡೆಯನ್ನು ‘ಅಘೋಷಿತ ತುರ್ತು ಪರಿಸ್ಥಿತಿ’ ಎಂದು ತೀವ್ರವಾಗಿ ಖಂಡಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...