ಸಿಜೆಪಿ ಪ್ರತಿಭಟನೆ: ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಬಂಧನ; ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು

Date:

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಗೂ ಮುನ್ನವೇ, ಸಿಜೆಪಿಯ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -

ರತ್ನಾ ಸಿಂಗ್‌ ಅವರು ಪ್ರತಿಭಟನಾ ಸ್ಥಳವನ್ನು ತಲುಪಬಾರದು ಮತ್ತು ಬಂಧಿತ ನಾಯಕರು ಮತ್ತು ಕಾರ್ಯಕರ್ತರ ಪರವಾಗಿ ತಕ್ಷಣಕ್ಕೆ ಯಾವುದೇ ಕಾನೂನು ಕ್ರಮ ಜರುಗಿಸದಂತೆ ತಡೆಯುವ ಉದ್ದೇಶದಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ವಕೀಲೆಯೂ ಆಗಿರುವ ರತ್ನಾ ಸಿಂಗ್, ಕಳೆದ ಕೆಲ ದಿನಗಳಿಂದ ಜಂತರ್ ಮಂತರ್ ಚಳವಳಿಯಲ್ಲಿ ಭಾಗವಹಿಸಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದರು. ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನಾಕಾರರ ಮೇಲೆ ದಾಖಲಾಗುತ್ತಿದ್ದ ಎಫ್‌ಐಆರ್‌ಗಳನ್ನು ಎದುರಿಸಲು ಮತ್ತು ಸಂಕಷ್ಟದಲ್ಲಿದ್ದ ಕಾರ್ಯಕರ್ತರಿಗೆ ತಕ್ಷಣಕ್ಕೆ ಜಾಮೀನು ಕೊಡಿಸುವಲ್ಲಿ ರತ್ನಾ ಸಿಂಗ್ ನೇತೃತ್ವದ ಲೀಗಲ್ ಟೀಮ್ ಪ್ರಮುಖ ಪಾತ್ರ ವಹಿಸುತ್ತಿತ್ತು. ಇದೀಗ ಅವರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಜೆಪಿ ಪ್ರತಿಭಟನೆಯನ್ನು ಸಂಪೂರ್ಣವಾಗಿ ಹತ್ತಿಕ್ಕಲು ಯತ್ನಿಸುತ್ತಿರುವ ದೆಹಲಿ ಪೊಲೀಸರು, ಪ್ರಮುಖ ಸಿಜೆಪಿ ನಾಯಕರನ್ನು ಸಾಲಾಗಿ ಬಂಧಿಸುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ವಿಮಾನದೊಳಗೇ ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ, ಗುರುಗ್ರಾಮದಲ್ಲಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಜೆಪಿ, ಪ್ರಜಾಪ್ರಭುತ್ವದ ವ್ಯಾಪ್ತಿಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಕೀಲರು ಮತ್ತು ನಾಯಕರನ್ನು ಈ ರೀತಿ ಅಕ್ರಮವಾಗಿ ಮನೆಗಳಿಂದಲೇ ಎತ್ತಂಗಡಿ ಮಾಡುತ್ತಿರುವುದು ಸರ್ವಾಧಿಕಾರಿ ಧೋರಣೆ ಎಂದು ಖಂಡಿಸಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...