ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

Date:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ತಮ್ಮ ನ್ಯಾಯಾಂಗ ಬಂಧನವನ್ನು ಎರಡು ದಿನಗಳ ಕಾಲ ವಿಸ್ತರಿಸಿದ್ದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಹಿಂಪಡೆದಿದ್ದಾರೆ.

- Advertisement -

ಅರ್ಜಿದಾರರು ಲಭ್ಯವಿರುವ ಪರ್ಯಾಯ ಕಾನೂನು ಪರಿಹಾರಗಳನ್ನು ಏಕೆ ಬಳಸಿಕೊಂಡಿಲ್ಲ ಎಂದು ನ್ಯಾಯಾಲಯವು ತಾಂತ್ರಿಕ ಪ್ರಶ್ನೆಗಳನ್ನು ಎತ್ತಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

​ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಅಕ್ಟೋಬರ್ 19 ರಂದು ಹೊರಡಿಸಿದ್ದ ಬಂಧನ ವಿಸ್ತರಣೆ ಆದೇಶದ ವಿರುದ್ಧ ನೇರವಾಗಿ ಹೈಕೋರ್ಟ್‌ಗೆ ಬಂದಿದ್ದನ್ನು ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ್ ಅವರಿದ್ದ ಪೀಠವು ಪ್ರಶ್ನಿಸಿತು. ಎಸ್‌ಇಎಂ ನ್ಯಾಯಾಲಯದಲ್ಲಿ ಬುಧವಾರ ಮಧ್ಯಾಹ್ನ ನಡೆಯಲಿರುವ ವಿಚಾರಣೆಯ ಫಲಿತಾಂಶಕ್ಕಾಗಿ ಕಾಯುವಂತೆ ಮುಖಂಡರಿಗೆ ಸೂಚಿಸಿದ ಪೀಠವು, ಅರ್ಜಿಯನ್ನು ವಾಪಸ್ ಪಡೆಯಲು ಅನುಮತಿ ನೀಡಿತು.

​ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಅರ್ಜಿದಾರರಿಗೆ ಮೌಖಿಕವಾಗಿ ಸಲಹೆ ನೀಡಿ, “ಈ ಅರ್ಜಿಯನ್ನು ಹಿಂಪಡೆದು, ಮಧ್ಯಾಹ್ನ 2 ಗಂಟೆಗೆ ಎಸ್‌ಇಎಂ ಮುಂದೆ ಏನಾಗುತ್ತದೆ ಎಂಬುದನ್ನು ಕಾದುನೋಡಿ, ನಂತರ ಕಾನೂನಿನ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳುವುದು ಸೂಕ್ತವಲ್ಲವೇ?” ಎಂದು ತಿಳಿಸಿದರು. ಇದೇ ವೇಳೆ, ಈ ರಿಟ್ ಅರ್ಜಿಯ ಗುಣಾವಗುಣಗಳ (ಮೆರಿಟ್ಸ್) ಬಗ್ಗೆ ತಾನು ಯಾವುದೇ ಅಭಿಪ್ರಾಯ ಅಥವಾ ಅವಲೋಕನವನ್ನು ವ್ಯಕ್ತಪಡಿಸಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...

SBI ಮೇಲೆ ಸೈಬರ್ ದಾಳಿ: ಸಾವಿರಾರು ಗ್ರಾಹಕರ ಸೂಕ್ಷ್ಮ ವಿವರ ಡಾರ್ಕ್ ವೆಬ್‌ನಲ್ಲಿ ಬಹಿರಂಗ!

ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು...