45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

Date:

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ವ್ಯವಸ್ಥಿತವಾಗಿ ಕೈಬಿಡುವ ಬೃಹತ್ ಷಡ್ಯಂತ್ರವೊಂದು ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಗುರುವಾರ ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕರೆಯಲಾಗಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ಪ್ರಜೆಗಳಿಗೆ ಸಿಕ್ಕಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಜಾಲವೊಂದು ಸಕ್ರಿಯವಾಗಿದೆ.ಕಾಂಗ್ರೆಸ್‌ಗೆ ಮತರಾರರು ಹಾಗೂ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಮತದಾರರನ್ನೇ ಗುರಿ ಮಾಡಿ ಮತಗಳನ್ನು ಅಳಿಸಲಾಗಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮತದಾರರ ಪಟ್ಟಿಯಿಂದ ಅಧಿಕೃತವಾಗಿ ಹೆಸರುಗಳನ್ನು ತೆಗೆದುಹಾಕಲು ಬಳಸುವ ‘ನಮೂನೆ 7’ (Form 7) ಅನ್ನು ಈ ಅಕ್ರಮಕ್ಕಾಗಿ ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ನಕಲಿ ಅರ್ಜಿಗಳನ್ನು ಹರಿಯಾಣ ಸೇರಿದಂತೆ ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳಲ್ಲಿ ಮುದ್ರಿಸಿ ರಾಜ್ಯಕ್ಕೆ ತರಲಾಗುತ್ತಿದೆ. ದೆಹಲಿ ಹಾಗೂ ರಾಜ್ಯದ ವಿರೋಧ ಪಕ್ಷದ ನಾಯಕರು ಸೇರಿಕೊಂಡು ಈ ಮತಗಳ್ಳತನದ ತಂತ್ರವನ್ನು ರೂಪಿಸಿದ್ದಾರೆ ಎಂದು ಅವರು ನೇರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷದ ಪ್ರಾಬಲ್ಯವಿರುವ ಕ್ಷೇತ್ರಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗುತ್ತಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ, ಭಾಲ್ಕಿ,ನರಸಿಂಹರಾಜ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾವಿರಾರು ಮತದಾರರ ಹೆಸರುಗಳನ್ನು ತೆಗೆದುಹಾಕಲು ಅರ್ಜಿ ಸಲ್ಲಿಸಲಾಗಿದೆ. ಬೆಳಗಾವಿ ಮತ್ತು ಆಳಂದ ಕ್ಷೇತ್ರಗಳಲ್ಲೂ ಇಂಥದ್ದೇ ಅಕ್ರಮ ಕೃತ್ಯಗಳು ನಡೆದಿವೆ. ಬಿಜೆಪಿ ಕಾರ್ಯಕರ್ತರಿಗೆ ಮತದಾರರ ನಿಖರವಾದ ವೈಯಕ್ತಿಕ ದತ್ತಾಂಶ ಹೇಗೆ ಲಭ್ಯವಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದ್ದು, ಈ ಮಾಹಿತಿ ಸೋರಿಕೆಯ ಹಿಂದಿರುವ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾಗಬೇಕಿದೆ ಎಂದು ಮುಖ್ಯಮಂತ್ರಿಗಳು ಆಗ್ರಹಿಸಿದರು.

Advertisements

ಇದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಎಸ್‌ಐಆರ್‌ನಿಂದ (SIR) ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಿದ್ದೀರಿ. ಇಡೀ ದೇಶ ಎಸ್‌ಐಆರ್ ಪದ್ಧತಿ ನೋಡಿ ತಲ್ಲಣಗೊಂಡಿದೆ. ನಾನು ಸಿಎಂ ಆಗಿ, ಪ್ರಜಾಸೇವಕನಾಗಿ ನಿಮ್ಮ ಮತವನ್ನ ಕಾಪಾಡಲು ಪ್ರಯತ್ನ ಮಾಡುತ್ತಿದ್ದೇನೆ. ಆದರೂ ಕೂಡ ಇದರಲ್ಲಿ ವಿಫಲನಾಗಿದ್ದೇನೆ. ಇದನ್ನು ನಾನು ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ.

1 ಕೋಟಿಗೂ ಹೆಚ್ಚು ಮತ ಕಡಿಮೆ ಆಗಿರುವುದನ್ನು ಗಮನಿಸಿದ್ದೀರಿ. ಅದು ವಿವಿಧ ರೀತಿ ಆಗಿರಬಹುದು. 50 ಲಕ್ಷಕ್ಕೂ ಹೆಚ್ಚು ಜನರಿಗೆ ನೋಟಿಸ್ ಕೊಡುವ ಪದ್ಧತಿ ನಡೆಯುತ್ತಿದೆ. ಇದರ ಬಳಿಕ ಇನ್ನೂ 3 ದಿನದ ಒಳಗೆ ಅರ್ಜಿ ಕೊಡುವಂತಹ ಸಂದರ್ಭದಲ್ಲಿ ಕೆಲ ಬಿಜೆಪಿಯವರು, ಅವರ ನಾಯಕರ ನಿರ್ದೇಶನದ ಮೇರೆಗೆ ಅಲ್ಪಸಂಖ್ಯಾತರು, ದಲಿತರ ಮತವನ್ನ ತಗೆದಾಕಲು ಮುಂದಾಗಿದ್ದರೆ. ಇದಕ್ಕಾಗಿ ಫಾರ್ಮ್ 7ನ್ನು ಕೊಡುತ್ತಿದ್ದಾರೆ. ನಮ್ಮ ನಾಯಕರು ಕೂಡ ಇದರ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಈ ವಿಚಾರವಾಗಿ ಕ್ರಿಮಿನಲ್ ತನಿಖೆ ಬಹಳ ಅವಶ್ಯಕತೆ ಇದೆ.

ಇಂತಹ ಕೃತ್ಯವೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿ ತಪ್ಪು ಮಾಹಿತಿ ನೀಡಿ ನಾಗರಿಕರನ್ನು ಮತದಾರರ ಪಟ್ಟಿಯಿಂದ ದೂರವಿಡುವವರ ಬಗ್ಗೆ ಬಿಎಲ್ಎಗಳು ನನಗೆ ನಿಖರ ಮಾಹಿತಿ ನೀಡಬೇಕು. ದಯವಿಟ್ಟು ಈ ಮಾಹಿತಿಯನ್ನು [email protected] ಗೆ ಕಳುಹಿಸಿ ಎಂದು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯ ನಂತರ ಮುಖ್ಯಮಂತ್ರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರನ್ನು ಭೇಟಿ ನೀಡಿ ದೂರು ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ, ಈಶ್ವರ್ ಖಂಡ್ರೆ, ಬಿ ಆರ್ ಪಾಟೀಲ್‌ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆಯೇ, ನಾಯಕರ ಮಾತು ಎಚ್ಚರಿಕೆಯ ಗಂಟೆಯೇ?

ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್‌, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ತನಿಖೆಯ ನೆಪ, ನನೆಗುದಿಗೆ ಬಿಲ್: ₹38,000 ಕೋಟಿ ಪಾವತಿಗೆ ಗಡುವು ನೀಡಿದ ಗುತ್ತಿಗೆದಾರರು

ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಬೆನ್ನೆಲುಬಾಗಿರುವ ಸರ್ಕಾರಿ ಗುತ್ತಿಗೆದಾರರು ಸದ್ಯ ಸರ್ಕಾರದ ವಿರುದ್ಧ...