ಪುತ್ರ ಚುನಾವಣಾ ಆಯೋಗದ ವಕೀಲರಾಗಿದ್ದರೂ ಕಾಯ್ದೆ ವಿಚಾರಣೆ: ಸುಪ್ರೀಂ ಜಡ್ಜ್ ನಡೆಗೆ ನೈತಿಕತೆಯ ಪ್ರಶ್ನೆ

Date:

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ–2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠದಲ್ಲಿರುವ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನ್ಯಾಯಮೂರ್ತಿ ಶರ್ಮಾ ಅವರ ಪುತ್ರ ಮಧ್ಯಪ್ರದೇಶದಲ್ಲಿ ಇದೇ ಚುನಾವಣಾ ಆಯೋಗದ (ಇ.ಸಿ) ಅಧಿಕೃತ ವಕೀಲರಾಗಿ (ಸ್ಥಾಯಿ ವಕೀಲರು) ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಮಗನೇ ಆಯೋಗದ ವಕೀಲರಾಗಿದ್ದರೂ, ನ್ಯಾಯಮೂರ್ತಿಯವರು ಅದೇ ಆಯೋಗಕ್ಕೆ ಸಂಬಂಧಿಸಿದ ಮಹತ್ವದ ಕಾಯ್ದೆಯ ವಿಚಾರಣೆ ನಡೆಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ವಿರೋಧ ಪಕ್ಷದ ನಾಯಕರು ಹಾಗೂ ಕಾನೂನು ತಜ್ಞರು ನ್ಯಾಯಾಂಗದ ನೈತಿಕತೆಯ ಪ್ರಶ್ನೆಯನ್ನು ಎತ್ತಿದ್ದಾರೆ.

- Advertisement -

​ಪ್ರಕರಣದ ವಿಚಾರಣೆಗೂ ಮುನ್ನ ನ್ಯಾಯಮೂರ್ತಿ ಶರ್ಮಾ ಅವರು ಈ ಮಾಹಿತಿಯನ್ನು ಅರ್ಜಿದಾರರಿಗೆ ಬಹಿರಂಗಪಡಿಸಿದ್ದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ‘ಲೈವ್ ಲಾ’ ವರದಿ ಮಾಡಿದೆ. ಆಸಕ್ತಿದಾಯಕ ವಿಚಾರವೆಂದರೆ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರೆ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯ ವಿರುದ್ಧ ದಾಖಲಾಗಿದ್ದ ಆರು ಅರ್ಜಿಗಳ ವಿಚಾರಣೆ ವೇಳೆ, ಇದೇ ಪೀಠದಲ್ಲಿದ್ದ ಮತ್ತೊಬ್ಬ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಅಭಿಪ್ರಾಯಕ್ಕೆ ಶರ್ಮಾ ಅವರು ಬುಧವಾರ ಅಸಮ್ಮತಿ ವ್ಯಕ್ತಪಡಿಸಿದ್ದರು. ಈ ಕಾಯ್ದೆಯು ‘ಸ್ವತಂತ್ರ ಆಯ್ಕೆ ಪ್ರಕ್ರಿಯೆಯನ್ನು ಖಚಿತಪಡಿಸುವಂತೆ ತೋರುತ್ತಿಲ್ಲ’ ಎಂದು ದತ್ತಾ ಅಭಿಪ್ರಾಯಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

​2023ರ ಈ ಕಾಯ್ದೆಯ ಪ್ರಕಾರ, ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಚುನಾವಣಾ ಆಯೋಗದ ಮುಖ್ಯಸ್ಥರು ಮತ್ತು ಇತರ ಇಬ್ಬರು ಉನ್ನತ ಸದಸ್ಯರನ್ನು ನೇಮಿಸಲಾಗುತ್ತದೆ. ಈ ಸಮಿತಿಯ ರಚನೆಯಿಂದಾಗಿ, ಯಾವುದೇ ಭಿನ್ನಾಭಿಪ್ರಾಯ ಮೂಡಿದರೂ ಸಮಿತಿಯಲ್ಲಿ ಸರ್ಕಾರದ ಪರವಾಗಿ 2:1 ಬಹುಮತ ಇರಲಿದೆ.

​ಇದರ ಜೊತೆಗೆ, ಬುಧವಾರದಂದು ನ್ಯಾಯಮೂರ್ತಿ ಶರ್ಮಾ ನೇತೃತ್ವದ ಪೀಠವು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಮತ್ತೊಂದು ಮಹತ್ವದ ಆದೇಶವನ್ನು ರದ್ದುಗೊಳಿಸಿದೆ. ನೊಯ್ಡಾ ಕಾರ್ಮಿಕರ ಪ್ರತಿಭಟನೆಯ ನಂತರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ 25 ವರ್ಷದ ಪದವೀಧರೆ ಆಕೃತಿ ಚೌಧರಿ ಎಂಬುವವರಿಗೆ ಗೌತಮ್ ಬುದ್ಧ ನಗರದ ಜಿಲ್ಲಾಧಿಕಾರಿ ಮೇಧಾ ರೂಪಂ ಅವರು ತಮ್ಮ ವೇತನದಿಂದ ₹5 ಲಕ್ಷ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಶರ್ಮಾ ಅವರ ಪೀಠ ರದ್ದುಪಡಿಸಿದೆ. ಗಮನಾರ್ಹ ಅಂಶವೆಂದರೆ, ಈ ಜಿಲ್ಲಾಧಿಕಾರಿ ಮೇಧಾ ರೂಪಂ ಅವರು ಹಾಲಿ ಮುಖ್ಯ ಚುನಾವಣಾ ಆಯುಕ್ತರಾದ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಪುತ್ರಿ. ಅಲ್ಲದೆ, ಸುಪ್ರೀಂ ಕೋರ್ಟ್ ರೋಸ್ಟರ್ ಪ್ರಕಾರ ‘ತಡೆಗಟ್ಟುವ ಬಂಧನ’ (Preventive detention) ಪ್ರಕರಣಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಶರ್ಮಾ ಅವರ ಪೀಠಕ್ಕೆ ವಹಿಸದಿದ್ದರೂ, ಈ ಪ್ರಕರಣವನ್ನು ಅವರ ಪೀಠದ ಮುಂದೆಯೇ ಪಟ್ಟಿ ಮಾಡಲಾಗಿತ್ತು ಎಂದು ವರದಿಯಾಗಿದೆ.

​ಮಧ್ಯಪ್ರದೇಶ ಹೈಕೋರ್ಟ್‌ನ ವೆಬ್‌ಸೈಟ್ ಪ್ರಕಾರ, ನ್ಯಾಯಮೂರ್ತಿ ಶರ್ಮಾ ಅವರ ಪುತ್ರ 2024ರಿಂದ ಚುನಾವಣಾ ಆಯೋಗದ ಸ್ಥಾಯಿ ವಕೀಲರಾಗಿದ್ದಾರೆ. ಜೊತೆಗೆ 2023ರಿಂದ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಹಾಗೂ ಆದಾಯ ತೆರಿಗೆ ಇಲಾಖೆಯ ಸ್ಥಾಯಿ ವಕೀಲರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

​ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ ಅಭಿಯಾನದ ಸಂಚಾಲಕ ಹಾಗೂ ಕಾನೂನು ಪತ್ರಕರ್ತ ಸೌರವ್ ದಾಸ್, “ನ್ಯಾಯಮೂರ್ತಿಯೊಬ್ಬರ ಕುಟುಂಬ ಸದಸ್ಯರು ಸರ್ಕಾರದ ಕೃಪಾಕಟಾಕ್ಷದಲ್ಲಿ ಸೇವೆ ಸಲ್ಲಿಸುತ್ತಿರುವಾಗ, ರಾಜಕೀಯವಾಗಿ ಸೂಕ್ಷ್ಮವಾದ ಪ್ರಕರಣಗಳಲ್ಲಿ ಅವರಿಂದ ‘ನಿಷ್ಪಕ್ಷಪಾತ ಮತ್ತು ನ್ಯಾಯಸಮ್ಮತ’ ತೀರ್ಪನ್ನು ನಿರೀಕ್ಷಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ. “ಶರ್ಮಾ ಅವರ ಪುತ್ರ ಕೇವಲ ಒಂದು ಹುದ್ದೆಯಲ್ಲ, ಬದಲಾಗಿ ಆದಾಯ ತೆರಿಗೆ, ಜಿಎಸ್‌ಟಿ, ಕಸ್ಟಮ್ಸ್, ಅಬಕಾರಿ ಮತ್ತು ಮಧ್ಯಪ್ರದೇಶ ಸರ್ಕಾರದ ವಕೀಲರ ಸಮಿತಿ ಸೇರಿದಂತೆ ನಾಲ್ಕು ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ” ಎಂದು ದಾಸ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

​ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಶರ್ಮಾ ಅವರ ಪುತ್ರ ಚುನಾವಣಾ ಆಯೋಗದ ವಕೀಲರಾಗಿರುವ ಕಾರಣದಿಂದಲೇ ಅವರು ಕಾಯ್ದೆ ವಿಚಾರದಲ್ಲಿ ನ್ಯಾಯಮೂರ್ತಿ ದತ್ತಾ ಅವರ ಅಭಿಪ್ರಾಯವನ್ನು ವಿರೋಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ನ್ಯಾಯಾಂಗವು ರಕ್ಷಕನಾಗಿರಬೇಕು, ಭಕ್ಷಕನಾಗಬಾರದು” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI)...