‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Date:

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು ಖಂಡಿಸಿ, ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಅಕ್ಟೋಬರ್ 23ರಂದು ರಾಜ್ಯಾದ್ಯಂತ ‘ಜಂತರ್ ಮಂತರ್’ ಮಾದರಿಯ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ‘ಸಂಯುಕ್ತ ಹೋರಾಟ ಕರ್ನಾಟಕ’ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಈ ಹೋರಾಟಕ್ಕೆ ರಾಜ್ಯದ ರೈತ ಮತ್ತು ದಲಿತ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿ ಕೈ ಜೋಡಿಸಲಿವೆ.

- Advertisement -

​ಸೋಮವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮುಖಂಡರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದರು. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ಏಕಪಕ್ಷೀಯ ಮತ್ತು ಅಕ್ರಮ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸಂಘಟನೆಗಳು ಗಂಭೀರ ಆರೋಪ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯು ಈ ಅಕ್ರಮಗಳನ್ನು ಬಯಲಿಗೆಳೆದಿದೆ. ಇದರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಯುವಕರು ಹಾಗೂ ಮಹಿಳಾ ಪತ್ರಕರ್ತರ ಮೇಲೆ ಪೊಲೀಸರನ್ನು ಬಳಸಿ ಹಲ್ಲೆ ನಡೆಸಲಾಗುತ್ತಿದೆ. ಅಲ್ಲದೆ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ಸಂಘಟನೆಯ ಮುಖಂಡರು ದೂರಿದರು.

​ರೈತ ಮುಖಂಡರು ಕೇಂದ್ರದ ವಿರುದ್ಧ ಕಿಡಿಕಾರುತ್ತಾ, ಕೇಂದ್ರದ ಮೋದಿ-ಅಮಿತ್ ಶಾ ಸರ್ಕಾರವು ಆರೋಪ ಎದುರಿಸುತ್ತಿರುವ ಅಧಿಕಾರಿಯನ್ನು ರಕ್ಷಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ 727 ರೈತರ ಸಾವಿಗೆ ಕಾರಣವಾದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಾಗ ನೀಡಿದ ಭರವಸೆಗಳನ್ನು ಈಡೇರಿಸದೆ ಕೇಂದ್ರ ಸರ್ಕಾರ ರೈತರಿಗೆ ಬೆನ್ನಿಗೆ ಚೂರಿ ಹಾಕಿದೆ. ಈಗ ರಾಜ್ಯದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಬಿಕ್ಕಟ್ಟಿಗೂ ಕೇಂದ್ರದ ನೀತಿಗಳೇ ನೇರ ಕಾರಣ ಎಂದು ರೈತ ಮುಖಂಡರು ಹೇಳಿದ್ದಾರೆ.

​ದಲಿತ ಮುಖಂಡರು ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯ ನೆಪದಲ್ಲಿ ಅಲೆಮಾರಿಗಳು, ದಲಿತರು, ಆದಿವಾಸಿಗಳು, ಹಾಗೂ ಅಲ್ಪಸಂಖ್ಯಾತರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಡಿಲೀಟ್ ಮಾಡಲಾಗುತ್ತಿದೆ. ಇದು ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ಹಾಗಾಗಿ, ಈ ಹೋರಾಟವನ್ನು ನಮ್ಮ ಅಳಿವು-ಉಳಿವಿನ ಹೋರಾಟವಾಗಿ ಸ್ವೀಕರಿಸಲಾಗಿದೆ ಎಂದು ಅವರು ಎಚ್ಚರಿಸಿದರು.

​ಸಂಯುಕ್ತ ಹೋರಾಟವು ತನ್ನ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಹಾಗೂ ಚುನಾವಣಾ ಆಯೋಗದ ಆಯ್ಕೆ ವಿಧಾನವನ್ನು ಪ್ರಜಾತಾಂತ್ರಿಕಗೊಳಿಸಬೇಕು ಎಂದು ಆಗ್ರಹಿಸಿದೆ. ಅಲ್ಲದೇ, ಎಸ್ಐಆರ್ (SIR) ಅನ್ನು ಸಂಪೂರ್ಣವಾಗಿ ರದ್ದುಪಡಿಸಿ, ಹೊಸ ಆಯೋಗದ ನೇತೃತ್ವದಲ್ಲಿ ಮತದಾರರ ಪಟ್ಟಿಯನ್ನು ಮರು ಪರಿಷ್ಕರಣೆ ಮಾಡಬೇಕು ಹಾಗೂ ಎಸ್ಐಆರ್ ಜಾರಿಯಾದ ಬಳಿಕ ನಡೆದ ಎಲ್ಲಾ ಚುನಾವಣೆಗಳನ್ನು ರದ್ದುಗೊಳಿಸಿ, ಮರು ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದೆ. ದೆಹಲಿಯ ಜಂತರ್ ಮಂತರ್ ಅನ್ನು ಪ್ರತಿಭಟನಾ ತಾಣವಾಗಿ ಮುಂದುವರಿಸಬೇಕು ಹಾಗೂ ಯುವಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎನ್ನುವುದು ಅವರ ಹಕ್ಕೊತ್ತಾಯವಾಗಿದೆ.

​ಪತ್ರಿಕಾಗೋಷ್ಠಿಯಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಎಚ್.ಆರ್. ಬಸವರಾಜಪ್ಪ, ದರ್ಶನ್ ಪುಟ್ಟಣ್ಣಯ್ಯ, ಟಿ. ಯಶ್ವಂತ್, ಕುಮಾರ್ ಸಮತಳ ಹಾಗೂ ದಲಿತ ಮುಖಂಡರಾದ ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು, ಎನ್. ವೆಂಕಟೇಶ್, ವಿ. ನಾಗರಾಜ್, ಅಂಬಣ್ಣ ಅರೋಲಿಕರ್, ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಅಕ್ಟೋಬರ್ 23ರಂದು ನಡೆಯಲಿರುವ ಈ ಹೋರಾಟದಲ್ಲಿ ಎಲ್ಲಾ ವರ್ಗದ ಜನರು, ಅದರಲ್ಲೂ ವಿಶೇಷವಾಗಿ ಯುವಕರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ ಸಂಸದರ ಧ್ವನಿ ಕ್ಷೀಣ!

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’...