ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

Date:

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ ಮುಂಭಾಗ CPIM, CPI, CITU ಮತ್ತು ಜನಪರ ಚಳುವಳಿಗಳ ಒಕ್ಕೂಟದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಸಂವಿಧಾನ ವಿರೋಧಿ ಎಸ್ಐಆರ್ ಪ್ರಕ್ರಿಯೆಯ ಮೂಲಕ ದೇಶದ ಮತದಾರರನ್ನು ಹೊರಗಿಡುವ ಕ್ರಮವನ್ನು ಖಂಡಿಸಿ, ಇದಕ್ಕೆ ಕಾರಣವಾಗಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಲು ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಎಡಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ಮುಖಂಡರನ್ನು, ವಿದ್ಯಾರ್ಥಿ ಯುವಜನ ಮುಖಂಡರನ್ನು ಅಮಾನುಷವಾಗಿ ಬಂದಿಸಿದ ಕ್ರಮವನ್ನು ಪ್ರತಿಭಟನಾಕಾರರು ತೀವ್ರವಾಗಿ ವಿಧೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸುಮಾರು 25 ಸಾವಿರಕ್ಕೂ ಹೆಚ್ಚು ಪೊಲೀಸ್, ಮಿಲಿಟರಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಿ ಪ್ರತಿಭಟಿಸುವ ಸಂವಿಧಾನಾತ್ಮಕ ಹಕ್ಕನ್ನು ದಮನಗೊಳಿಸುವ ಈ ಕ್ರಮ ಸರ್ವಾಧಿಕಾರಿಯಾದದ್ದು. ಇಂತಹ ಕ್ರಮಗಳಿಂದ ನರೇಂದ್ರ ಮೋದಿ ಮತ್ತು ಅಮೀದ್ ಶಾಗೆ ದೇಶದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಈ ಪ್ರತಿಭಟನೆಯಲ್ಲಿ ಸಾಹಿತಿಗಳಾದ ರೂಪ ಹಾಸನ ಸಿಪಿಐ ಮುಖಂಡರಾದ ಎಂ.ಸಿ.ಡೋಂಗ್ರೆ, ಸಿಪಿಐಎಂ  ಮುಖಂಡರುಗಳಾದ ಧರ್ಮೇಶ್, ಹೆಚ್.ಆರ್. ನವೀನ್ ಕುಮಾರ್ ಸಿಐಟಿಯುನ ಎಂ.ಬಿ.ಪುಷ್ಪ, ಅರವಿಂದ್, ಡಿವೈಎಫ್ಐ ನ ಎಂ.ಜಿ.ಪೃಥ್ವಿ, ಜನಪರ ಸಂಘಟನೆಗಳ ಇರ್ಷಾದ್ ಅಹಮದ್ ದೇಸಾಯಿ, ಪರಮಶಿವಯ್ಯ, ಮಂಜು, ವಿದ್ಯಾರ್ಥಿ ಮುಖಂಡರುಗಳಾದ ಹಂಸಿನಿ, ಅಹರ್ನಿಷಿ ಮೊದಲಾದ ಪ್ರಮುಖರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...