ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

Date:

ಪ್ರತಿಪಕ್ಷ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ನಿಯೋಜಿಸಲಾಗಿರುವ ಸುಮಾರು 20,000 ಅರೆಸೇನಾ ಸಿಬ್ಬಂದಿ ಕನಿಷ್ಠ ಒಂದು ತಿಂಗಳ ಕಾಲ ದೆಹಲಿಯಲ್ಲೇ ಮೊಕ್ಕಾಂ ಹೂಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

- Advertisement -

​ಮುಂಬರುವ ಸಾಲು ಸಾಲು ಹಬ್ಬಗಳ ಸಂದರ್ಭದಲ್ಲಿ ಮಾರುಕಟ್ಟೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿ ಗಣನೀಯವಾಗಿ ಹೆಚ್ಚಾಗುವುದರಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಪ್ರಮಾಣದ ಭದ್ರತಾ ಸಿಬ್ಬಂದಿಯನ್ನು ನಿಯೋಜನೆಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

​ಇದೇ ವೇಳೆ, ನಗರದ ಅತ್ಯಂತ ಬಿಗಿ ಭದ್ರತೆಯ ವಲಯದಲ್ಲಿರುವ ಐತಿಹಾಸಿಕ ಧರಣಿ ತಾಣ ‘ಜಂತರ್ ಮಂತರ್’ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದೆ (ಡಿ-ನೋಟಿಫೈ ಮಾಡಲಾಗಿದೆ). ಇದರ ಬದಲಿಗೆ ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಸಿಬಿಡಿ (CBD) ಮೈದಾನಗಳನ್ನು ನೂತನ ಅಧಿಕೃತ ಪ್ರತಿಭಟನಾ ಸ್ಥಳಗಳೆಂದು ಗುರುತಿಸಲಾಗಿದೆ. ಈ ಹೊಸ ತಾಣಗಳ ಭದ್ರತಾ ವ್ಯವಸ್ಥೆಯ ಸಂಪೂರ್ಣ ಲೆಕ್ಕಪರಿಶೋಧನೆ (ಸೆಕ್ಯುರಿಟಿ ಆಡಿಟ್) ಪೂರ್ಣಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.

​ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರು ಸೋಮವಾರ ಸಂಜೆ ಸರ್ವೋಚ್ಚ ನ್ಯಾಯಾಲಯದತ್ತ ಬೃಹತ್ ಮೆರವಣಿಗೆ ನಡೆಸಿದರು. ‘ಎಸ್‌ಐಆರ್’ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಆರಂಭವಾದ ಈ ಹೋರಾಟ, ವಿದ್ಯಾರ್ಥಿಗಳು ಮತ್ತು ನಾಗರಿಕ ಸಂಘಟನೆಗಳನ್ನು ಒಳಗೊಂಡ ವಿಶಾಲ ‘ಪ್ರಜಾಸತ್ತಾತ್ಮಕ ಚಳವಳಿ’ಯ ಸ್ವರೂಪ ಪಡೆದುಕೊಂಡಿದೆ.

​ಅನಧಿಕೃತ ಸಭೆ-ಸಮಾರಂಭಗಳು ಮತ್ತು ಪ್ರತಿಭಟನೆಗಳನ್ನು ತಡೆಯುವ ಸಲುವಾಗಿ ದೆಹಲಿಯ ಗಡಿಭಾಗಗಳು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಹಾಗೂ ಪ್ರಮುಖ ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಗಡಿಗಳಲ್ಲಿ ವಾಹನಗಳ ತಪಾಸಣೆಯನ್ನು ಬಿಗಿಗೊಳಿಸಲಾಗಿದ್ದು, ಹೋಟೆಲ್‌ಗಳು, ಅತಿಥಿಗೃಹಗಳು, ಲಾಡ್ಜ್‌ಗಳು ಮತ್ತು ಧರ್ಮಶಾಲೆಗಳಲ್ಲಿ ತಪಾಸಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ.

​ಅರೆಸೇನಾ ಪಡೆಗಳಲ್ಲದೆ, ದೆಹಲಿ ಪೊಲೀಸ್ ಇಲಾಖೆಯ ಸಾವಿರಾರು ಸಿಬ್ಬಂದಿಯನ್ನೂ ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ. ನವದೆಹಲಿ ಜಿಲ್ಲಾ ವ್ಯಾಪ್ತಿಯನ್ನು ಒಟ್ಟು 20 ವಲಯಗಳನ್ನಾಗಿ ವಿಂಗಡಿಸಲಾಗಿದ್ದು, ಜಂಟಿ ಪೊಲೀಸ್ ಕಮಿಷನರ್‌ಗಳು, ಡಿಸಿಪಿಗಳು ಮತ್ತು ಹೆಚ್ಚುವರಿ ಡಿಸಿಪಿಗಳು ಖುದ್ದಾಗಿ ಸ್ಥಳದಲ್ಲಿದ್ದು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ; ರಾಜ್ಯವನ್ನು ಪ್ರಪಾತಕ್ಕೆ ತಳ್ಳಿದ ಬಿಜೆಪಿ ಧೋರಣೆ

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ...

ದಲಿತ ವೃದ್ಧನ ಶವಸಂಸ್ಕಾರಕ್ಕೆ ಅಡ್ಡಿ, ಕಾಲಿಗೆ ಬೀಳಿಸಿ ಅವಮಾನ: ಅಧಿಕಾರಿಗಳ ವಿರುದ್ಧ ಈರೋಡ್‌ನಲ್ಲಿ ಪ್ರತಿಭಟನೆ

ದಲಿತ ಸಮುದಾಯದ ವೃದ್ಧರೊಬ್ಬರ ಶವಸಂಸ್ಕಾರದ ವಿಚಾರದಲ್ಲಿ ಉಂಟಾದ ವಿವಾದದ ವೇಳೆ, ಪರಿಶಿಷ್ಟ...

ತಡರಾತ್ರಿ ವಿಶೇಷ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್: ಬಂಧಿತ ಸಿಜೆಪಿ ಕಾರ್ಯಕರ್ತರ ತಕ್ಷಣ ಬಿಡುಗಡೆಗೆ ಆದೇಶ

ಗೋವಾದ ಪಣಜಿಯ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ...