ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು ಕಾಂಗ್ರೆಸ್ ‘ಅಣಕು ವಜಾಗೊಳಿಸುವಿಕೆ’ (ಮೋಕ್ ಇಂಪೀಚ್‌ಮೆಂಟ್) ಪ್ರತಿಭಟನೆ ಮತ್ತು ನವೆಂಬರ್ 1ರಂದು ದೆಹಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ನಿರ್ಧರಿಸಿದೆ. ಆದರೆ, ಪ್ರತಿಭಟನೆಗಾಗಿ ರಾಮಲೀಲಾ ಮೈದಾನದಲ್ಲಿ ವೇದಿಕೆ, ಶಾಮಿಯಾನ ಹಾಕಲು ಪೊಲೀಸರು ತಡೆಯೊಡ್ಡಿದ್ದಾರೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ದೆಹಲಿಯ ಯಾವುದೇ ಮೂಲೆಯಲ್ಲಾದರೂ ಸರಿ, ಪ್ರತಿಭಟನೆ ನಡೆಸಿಯೇ ತೀರುತ್ತೇವೆ” ಎಂದು ಸವಾಲು ಹಾಕಿದೆ.

- Advertisement -

ದೆಹಲಿಯ ರಾಮಲೀಲಾ‌ಮೈದಾನದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, “ಇಂಡಿಯಾ ಮೈತ್ರಿಕೂಟದ 21 ಪಕ್ಷಗಳು ಈ ಕಾರ್ಯಕ್ರಮವನ್ನು ಮೊದಲು ಸರ್ಕಾರಿ ಸ್ವಾಮ್ಯದ ಅಶೋಕ್ ಹೋಟೆಲ್‌ನಲ್ಲಿ ನಡೆಸಲು ಯೋಜಿಸಿದ್ದವು. ಆದರೆ ಅಲ್ಲಿ ಅನುಮತಿ ನಿರಾಕರಿಸಲಾಯಿತು. ನಂತರ ರಾಮಲೀಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಮೈತ್ರಿಕೂಟ ನಿರ್ಧರಿಸಿತು. ನಾವು ಅಗತ್ಯ ಅನುಮತಿಗಳನ್ನು ಹೊಂದಿದ್ದರೂ ಪೊಲೀಸರು ಸಿದ್ಧತೆಗಳನ್ನು ತಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

“ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವ ತನಕ ವಿರೋಧ ಪಕ್ಷಗಳು ತಮ್ಮ ಹೋರಾಟವನ್ನು ಮುಂದುವರಿಸಲಿವೆ. ಅವರು (ಮೋದಿ ಸರ್ಕಾರ) ನಮ್ಮನ್ನು ಇಲ್ಲಿ ತಡೆದರೆ, ನಾವು ಅಮಿತ್ ಶಾ ಅವರ ಮನೆ, ಪ್ರಧಾನಿ ಮೋದಿ ಅವರ ಮನೆಗೆ ತೆರಳಿ ಅಲ್ಲಿಯೇ ಬೃಹತ್ ಧರಣಿ ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.

“ಅಮಿತ್ ಶಾ ಅವರೇ, ನೀವು ಎಷ್ಟು ಅನುಮತಿಗಳನ್ನು ನಿರಾಕರಿಸುತ್ತೀರಿ? ಎಷ್ಟು ಜನರನ್ನು ತಡೆಯುತ್ತೀರಿ? ಮೊದಲಿಗೆ ಅವರು ಚುನಾವಣಾ ವ್ಯವಸ್ಥೆಯನ್ನು ನಾಶಪಡಿಸಿದರು, ಈಗ ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ಹೋರಾಡುವವರ ಧ್ವನಿಯನ್ನು ಅಡಗಿಸಲು ಎಲ್ಲ ರೀತಿಯ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಆದರೆ, ನಮ್ಮ ಗುರಿ ಸಾಧನೆಯಾಗುವವರೆಗೆ ನಾವು ಕೊನೆಯವರೆಗೂ ಹೋರಾಡುತ್ತೇವೆ” ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟವು ಅಕ್ಟೋಬರ್ 25 ರಿಂದ ನವೆಂಬರ್ 3 ರವರೆಗೆ ರಾಮಲೀಲಾ ಮೈದಾನವನ್ನು ಬುಕ್ ಮಾಡಿದೆ. ಹಾಗಾಗಿ, ಅಲ್ಲಿ ನಮ್ಮ ಕಾರ್ಯಕ್ರಮವನ್ನು ನಡೆಸಲು ಅನುಮತಿ ನಿರಾಕರಿಸಲು ಯಾವುದೇ ಕಾರಣವಿಲ್ಲ” ಎಂದು ಕಾಂಗ್ರೆಸ್ ಪ್ರತಿಪಾದಿಸಿದ್ದಾರೆ.

ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಈಗಾಗಲೇ ಎರಡು ಬಾರಿ ನೋಟಿಸ್‌ಗಳನ್ನು ಸಲ್ಲಿಸಿವೆ. ಮೊದಲ ನೋಟಿಸ್‌ಅನ್ಮು ಲೋಕಸಭೆ ಮತ್ತು ರಾಜ್ಯಸಭೆ ಎರಡಲ್ಲೂ ತಿರಸ್ಕರಿಸಿದ್ದರೆ, ಎರಡನೇ ಬಾರಿಗೆ ಸಲ್ಲಿಸಲಾದ ನೋಟಿಸ್‌ಗಳು ಮೇಲ್ಮನೆಯಲ್ಲಿ ಇನ್ನೂ ಪರಿಶೀಲನೆಗೆ ಬಾಕಿ ಉಳಿದಿವೆ.

ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ಹುದ್ದೆಯಿಂದ ತೆಗೆದುಹಾಕುವ ಪ್ರಕ್ರಿಯೆಯಂತೆಯೇ ಮುಖ್ಯ ಚುನಾವಣಾ ಆಯುಕ್ತರನ್ನು ಕೂಡ ಸಂಸತ್ತು ವಜಾಗೊಳಿಸಬಹುದು. ಇದಕ್ಕೆ ಸಂಸತ್ತಿನ ಉಭಯ ಸದನಗಳಲ್ಲಿ ವಿಶೇಷ ಬಹುಮತದ ಅಗತ್ಯವಿರುತ್ತದೆ.
ಅಥವಾ 2023ರ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿ ಹಾಗೂ ಸೇವಾ ಷರತ್ತುಗಳ ಕಾಯ್ದೆಯ ಪ್ರಕಾರ, ಚುನಾವಣಾ ಆಯುಕ್ತರೇ ಸ್ವತಃ ರಾಷ್ಟ್ರಪತಿಗಳಿಗೆ ಲಿಖಿತ ರಾಜೀನಾಮೆ ಸಲ್ಲಿಸಿ ಹುದ್ದೆಯಿಂದ ನಿರ್ಗಮಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಣ್ಣೆಕಾಳು ಉತ್ಪಾದನೆ ಸ್ವಾವಲಂಬನೆ ಅಗತ್ಯ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು. ಕುಸುಬೆ,...

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ...

ಈ ದಿನ ಸಂಪಾದಕೀಯ | ಮೋದಿಯ 56 ಇಂಚಿನ ಅಳ್ಳೆದೆ ಮತ್ತು ಚೀನಾದ ಅತಿಕ್ರಮಣ

ಒಂದು ಕಡೆ ಚೀನಾ ನಮ್ಮ ಗಡಿ ಅತಿಕ್ರಮಿಸುತ್ತಿದ್ದರೆ, ಇನ್ನೊಂದು ಕಡೆ ಅದೇ...

ಬೆಂಗಳೂರು ಮೆಟ್ರೋ ಬ್ಲೂ ಲೈನ್ ಕಾಮಗಾರಿಗೆ ಸುಪ್ರೀಂ ಅಸ್ತು; ನಿರ್ಮಾಣ ಮುಂದುವರಿಸಲು ಅನುಮತಿ

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿರೀಕ್ಷೆಯಿರುವ ನಮ್ಮ ಮೆಟ್ರೋದ ಬ್ಲೂ...