‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟುಮಾಡಲಾಗಿದೆ. ಇದೇ ವೇಳೆ, ಈ ಪ್ರಕ್ರಿಯೆಗೆ ಸಾರ್ವಜನಿಕರ ತೆರಿಗೆ ಹಣದಿಂದ ಮಾಡಿರುವ ವೆಚ್ಚದ ಕುರಿತು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ಅಧಿಕೃತ ಲೆಕ್ಕಪತ್ರದೊಂದಿಗೆ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಜಾಗೃತ ಕರ್ನಾಟಕ ಒತ್ತಾಯಿಸಿದೆ.

- Advertisement -

ಮತದಾರರ ಪಟ್ಟಿಯಿಂದ ಹೆಸರು ಅಳಿಸುವ ಉದ್ದೇಶದಿಂದ ಸಲ್ಲಿಸುವ ಫಾರಂ 7 ಅನ್ನು ದುರ್ಬಳಕೆ ಮಾಡಿಕೊಂಡು, ಅರ್ಹ ಮತದಾರರ ವಿರುದ್ಧ ಸಾಮೂಹಿಕವಾಗಿ ಆಕ್ಷೇಪಣೆ ಸಲ್ಲಿಸಿರುವ ಆರೋಪಗಳ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಸಂಚಾಲಕರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಾಗೃತ ಕರ್ನಾಟಕದ ಸಂಚಾಲಕರು, ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಹೆಸರಿನಲ್ಲಿ ನಡೆದಿರುವ SIR ಪ್ರಕ್ರಿಯೆಯು ಅರ್ಹ ಮತದಾರರಿಗೆ ಅನಗತ್ಯ ತೊಂದರೆ ಉಂಟುಮಾಡಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಬೂತ್ ಮಟ್ಟದ ಏಜೆಂಟರು (BLAಗಳು) ಫಾರಂ 7 ಅನ್ನು ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಅಳಿಸಲು ಸಾಮೂಹಿಕವಾಗಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂಬ ಆರೋಪಗಳಿವೆ. ಇದು ಉದ್ದೇಶಪೂರ್ವಕವಾಗಿ ನಡೆದಿದ್ದರೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂಬಂಧ ಅಕ್ಟೋಬರ್ 1ರಂದೇ ಜಾಗೃತ ಕರ್ನಾಟಕವು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ದೂರು ನೀಡಿ 23 ದಿನಗಳು ಕಳೆದಿದ್ದರೂ ಯಾವುದೇ ಕ್ರಮ ಕೈಗೊಂಡಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದು ಸಂಘಟನೆಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣದ ಕುರಿತು ತಕ್ಷಣ ತನಿಖೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗವು ತನ್ನ ನಿಷ್ಪಕ್ಷಪಾತತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಬೇಕಾದರೆ, ಮತದಾರರ ಹೆಸರನ್ನು ಅಳಿಸಲು ಸುಳ್ಳು ಆಕ್ಷೇಪಣೆ ಸಲ್ಲಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅರ್ಹ ಮತದಾರರು ತಮ್ಮ ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು. SIR ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಹಲವು ರೀತಿಯ ತೊಂದರೆಗಳನ್ನು ಉಂಟುಮಾಡಿದ ಬಳಿಕ, ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ಅಥವಾ SIR ಸಂದರ್ಭದಲ್ಲಿ ಹೆಸರು ಬಿಟ್ಟುಹೋಗಿರುವ ಕಾರಣಕ್ಕೆ ಫಾರಂ 6 ಸಲ್ಲಿಸುವವರಿಗೆ 2002ರ ಮತದಾರರ ಪಟ್ಟಿಯ ವಿವರಗಳನ್ನು ಒದಗಿಸುವುದು ಕಡ್ಡಾಯವಲ್ಲ ಎಂಬ ನಿಲುವು ವ್ಯಕ್ತವಾಗಿದೆ ಎಂದು ಜಾಗೃತ ಕರ್ನಾಟಕ ಪ್ರಶ್ನಿಸಿದೆ.

2002ರ ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ಹುಡುಕುವುದು, ಹೆಸರು ಅಥವಾ ಇತರ ಮಾಹಿತಿಯಲ್ಲಿ ಕಾಗುಣಿತದ ತಪ್ಪುಗಳಿದ್ದರೆ ವಿಚಾರಣೆ ಎದುರಿಸುವುದು ಹಾಗೂ ದಾಖಲೆಗಳನ್ನು ಸಲ್ಲಿಸುವುದು ಸೇರಿದಂತೆ ಜನರಿಗೆ ಹಲವು ರೀತಿಯ ತೊಂದರೆಗಳನ್ನು ಏಕೆ ನೀಡಲಾಯಿತು ಎಂಬುದಕ್ಕೆ ಚುನಾವಣಾ ಆಯೋಗ ಉತ್ತರಿಸಬೇಕು ಎಂದು ಆಗ್ರಹಿಸಿದೆ. ಒಂದೆಡೆ SIR ಹೆಸರಿನಲ್ಲಿ ನಾಗರಿಕರ ಮೇಲೆ ವ್ಯಾಪಕ ಪರಿಶೀಲನೆಯ ಹೊರೆ ಹಾಕಲಾಗಿದೆ. ಮತ್ತೊಂದೆಡೆ, ಹೆಸರು ಸೇರ್ಪಡೆಗೆ ಫಾರಂ 6 ಮೂಲಕ ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾದರೆ, ಇಷ್ಟೊಂದು ದೊಡ್ಡ ಪ್ರಮಾಣದ ಆಡಳಿತಾತ್ಮಕ ಪ್ರಕ್ರಿಯೆ ನಡೆಸುವ ಅಗತ್ಯವೇನಿತ್ತು? ಇದರಿಂದ ಸಾಧಿಸಿರುವ ಉದ್ದೇಶವೇನು? ಸಾರ್ವಜನಿಕರಿಗೆ ಉಂಟಾದ ತೊಂದರೆಗಳಿಗೆ ಯಾರು ಹೊಣೆ ಎಂದು ಸಂಘಟನೆಯ ಮುಖಂಡರು ಪ್ರಶ್ನಿಸಿದರು.

SIR ಪ್ರಕ್ರಿಯೆಗೆ ಸಾರ್ವಜನಿಕರ ತೆರಿಗೆ ಹಣದಿಂದ ₹10,000 ಕೋಟಿಗೂ ಅಧಿಕ ವೆಚ್ಚವಾಗಿದೆ ಎಂಬ ಅಂದಾಜುಗಳು ವ್ಯಕ್ತವಾಗುತ್ತಿವೆ. ಆದರೆ ಈ ಮೊತ್ತದ ಅಧಿಕೃತ ಲೆಕ್ಕಪತ್ರ ಮತ್ತು ವೆಚ್ಚದ ವಿವರಗಳನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಜಾಗೃತ ಕರ್ನಾಟಕ ಒತ್ತಾಯಿಸಿದೆ. SIR ಪ್ರಕ್ರಿಯೆಗೆ ಒಟ್ಟು ಎಷ್ಟು ಹಣ ಖರ್ಚಾಗಿದೆ? ಯಾವ ಉದ್ದೇಶಗಳಿಗೆ ಹಣ ವಿನಿಯೋಗಿಸಲಾಗಿದೆ? ವೆಚ್ಚ ನಿರ್ಧರಿಸಲು ಅನುಸರಿಸಿದ ಮಾನದಂಡಗಳೇನು? ಈ ಪ್ರಕ್ರಿಯೆಯಿಂದ ಸಾಧಿಸಿದ ಫಲಿತಾಂಶಗಳೇನು? ಎಂಬ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದೆ.

ಸಾರ್ವಜನಿಕರ ತೆರಿಗೆ ಹಣವನ್ನು ಬಳಸುವಾಗ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು. ಇಷ್ಟೊಂದು ದೊಡ್ಡ ಪ್ರಮಾಣದ ಹಣವನ್ನು ಖರ್ಚು ಮಾಡಿರುವುದಕ್ಕೆ ಅಧಿಕೃತ ಲೆಕ್ಕಪತ್ರ ನೀಡದೆ ಇರುವುದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ SIRಗೆ ಸಂಬಂಧಿಸಿದ ಸಂಪೂರ್ಣ ವೆಚ್ಚದ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಾಗೃತ ಕರ್ನಾಟಕದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳು:…

  1. ಫಾರಂ 7 ದುರ್ಬಳಕೆ ವಿರುದ್ಧ ಕ್ರಮ: ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ಅಥವಾ ದುರುದ್ದೇಶದಿಂದ ಫಾರಂ 7 ಸಲ್ಲಿಸಿರುವ ಪ್ರಕರಣಗಳ ಕುರಿತು ತನಿಖೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು.
  2. SIR ವೆಚ್ಚದ ಶ್ವೇತಪತ್ರ: SIR ಪ್ರಕ್ರಿಯೆಗೆ ಮಾಡಿರುವ ಒಟ್ಟು ವೆಚ್ಚ, ಹಣದ ವಿನಿಯೋಗ ಮತ್ತು ಸಂಬಂಧಿತ ಲೆಕ್ಕಪತ್ರಗಳ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಬಿಡುಗಡೆ ಮಾಡಬೇಕು.
  3. ಮತದಾರರ ಅಂಕಿಅಂಶ ಪ್ರಕಟಣೆ: SIR ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು ಹಾಗೂ ಮರುಸೇರ್ಪಡೆಗಾಗಿ ಅರ್ಜಿ ಸಲ್ಲಿಸಬೇಕಾದವರ ಸಂಖ್ಯೆಯನ್ನು ರಾಜ್ಯವಾರು ಮತ್ತು ಜಿಲ್ಲಾವಾರು ಪ್ರಕಟಿಸಬೇಕು.
  4. ಸ್ವತಂತ್ರ ಪರಿಶೀಲನೆ: SIR ಅನುಷ್ಠಾನದಲ್ಲಿ ನಡೆದಿರುವ ತಪ್ಪುಗಳು, ಆಡಳಿತಾತ್ಮಕ ಲೋಪಗಳು ಮತ್ತು ಅನಗತ್ಯ ವೆಚ್ಚದ ಕುರಿತು ಸ್ವತಂತ್ರ ಪರಿಶೀಲನೆ ನಡೆಸಬೇಕು.

ಚುನಾವಣಾ ಆಯೋಗವು ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಅದರ ಸ್ವಾಯತ್ತತೆ ಎಂದರೆ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುವ ಹೊಣೆಗಾರಿಕೆಯಿಂದ ಮುಕ್ತವಾಗಿದೆ ಎಂದರ್ಥವಲ್ಲ. ಸ್ವಾಯತ್ತತೆಯೊಂದಿಗೆ ಪಾರದರ್ಶಕತೆ, ನಿಷ್ಪಕ್ಷಪಾತತೆ ಮತ್ತು ಹೊಣೆಗಾರಿಕೆಯೂ ಇರಬೇಕು ಎಂದು ಜಾಗೃತ ಕರ್ನಾಟಕ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ಪ್ರಜಾಪ್ರಭುತ್ವದಲ್ಲಿ ಮತದಾರರು ಚುನಾವಣಾ ಆಯೋಗಕ್ಕೆ ಉತ್ತರದಾಯಕರಲ್ಲ; ಚುನಾವಣಾ ಆಯೋಗವು ಸಂವಿಧಾನ ಮತ್ತು ಜನರಿಗೆ ಉತ್ತರದಾಯಿಯಾಗಿದೆ. ಮತದಾರರ ಹಕ್ಕುಗಳನ್ನು ರಕ್ಷಿಸುವುದು, ಸಾರ್ವಜನಿಕ ಹಣದ ಸದ್ಬಳಕೆ ಖಚಿತಪಡಿಸುವುದು ಹಾಗೂ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವುದು ಅತ್ಯಗತ್ಯ. ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ದೊರೆಯುವವರೆಗೆ ಜಾಗೃತ ಕರ್ನಾಟಕ ತನ್ನ ಪ್ರಜಾಸತ್ತಾತ್ಮಕ ಹೋರಾಟವನ್ನು ಮುಂದುವರಿಸಲಿದೆ ಎಂದು ಮುಖಂಡರು ಎಚ್ಚರಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ಪತ್ರಿಕಾಗೋಷ್ಠಿಯಲ್ಲಿ ಜಾಗೃತ ಕರ್ನಾಟಕದ ಸಂಚಾಲಕರಾದ ಮುತ್ತುರಾಜ್, ಸುಹೆಲ್ ಅಹಮ್ಮದ್ ಮರೂರು, ಜಿ.ಕೆ. ಮೋಹನ್, ರಿಹಾನ್ ಹುಣಸೂರು ಹಾಗೂ ಅನಂತ್ ಹುಣಸೂರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ ಭರವಸೆಯ ಆಟಗಾರ

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ...

ನಟ ಧನ್ವೀರ್ ಗೌಡ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ ದೂರು ದಾಖಲು!

ಕನ್ನಡ ಚಿತ್ರರಂಗದ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ...

ಸಿದ್ಧರಾಮಯ್ಯ ‘ಸ್ಟಿಂಗ್’ ಪ್ರಕರಣ: ಎಚ್‌ಡಿಕೆ‌ ದೆಹಲಿ ಕಚೇರಿಯ ಸಿಬ್ಬಂದಿ ರಿತೇಶ್ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ...

ಟೆಕ್ನೋ ಆಯುರ್ವೇದ ಅಭಿವೃದ್ಧಿಗೆ ಪೂರಕ: ಗುಂಡಪ್ಪಗೌಡ

ಭಾರತದ ಸಾಂಪ್ರದಾಯಿಕ ವೈದ್ಯ ಪದ್ಧತಿಯಾದ ಆಯುರ್ವೇದಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ನೀಡುವುದರಿಂದ...