ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

Date:

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿಸುವ ಹುನ್ನಾರ ರಾಜ್ಯಾದ್ಯಂತ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂತಹದ್ದೇ ಷಡ್ಯಂತ್ರ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲೂ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯಂಗಾರ್ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
​
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 64ರಲ್ಲಿ ಬಿಜೆಪಿಯ ಬಿಎಲ್‌ಎ ಜಿ.ಎಸ್. ವಸಂತಲಕ್ಷ್ಮೀ ಮತ್ತು ಇನ್ನೊಬ್ಬ ವ್ಯಕ್ತಿ ಫಾರ್ಮ್-7ಅನ್ನು ದುರ್ಬಳಕೆ ಮಾಡಿದ್ದಾರೆ. ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ವಾಸವಿರುವ ಮತ್ತು ಮತ ಚಲಾಯಿಸುತ್ತಿರುವ ಕಾನೂನುಬದ್ಧ ಮತದಾರರನ್ನು ಗೈರುಹಾಜರಿದ್ದಾರೆ ಅಥವಾ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ, ಒಟ್ಟು 778 ಮತದಾರರ ಹೆಸರುಗಳನ್ನು ಅಳಿಸಲು ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಅನೂಪ್ ಅಯ್ಯರ್ ಆರೋಪಿಸಿದ್ದಾರೆ.

- Advertisement -

ಅವರು‌ದೂರಿನಲ್ಲಿ ವಿವರಿಸಿರುವಂತೆ, ವಾರ್ಡ್‌ ನಂ.64ರಲ್ಲಿರುವ ಮತಗಟ್ಟೆ ಸಂಖ್ಯೆ 157ರಲ್ಲಿ 122, ಮತಗಟ್ಟೆ 155ರಲ್ಲಿ 233, ಮತಗಟ್ಟೆ 156ರಲ್ಲಿ 28, ಮತಗಟ್ಟೆ 158ರಲ್ಲಿ 5, ಮತಗಟ್ಟೆ 154ರಲ್ಲಿ 47, ಮತಗಟ್ಟೆ 205ರಲ್ಲಿ 171, ಮತಗಟ್ಟೆ 203ರಲ್ಲಿ 88 ಹಾಗೂ ಮತಗಟ್ಟೆ 153ರಲ್ಲಿ 14 – ಎಲ್ಲ‌ ಸೇರಿ ಒಟ್ಟು 778 ಮತದಾರರ ವಿರುದ್ಧ ಫಾರ್ಮ್-7 ಅರ್ಜಿಗಳನ್ನು ಆರೋಪಿಗಳು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಎಲ್ಲ‌ ಅರ್ಜಿಗಳು ಬಿಜೆಪಿ ವಿರುದ್ಧ ಮತ ಚಲಾಯಿಸುವ ಮತ್ತು ಮುಸ್ಲಿಂ ಸಮುದಾಯಕ್ಕೆ‌ಸೇರಿದ ಮತದಾರರನ್ನು ಗುರಿಯಾಸಿಕೊಂಡು, ಅವರ ಹೆಸರನ್ನು‌ ಅಳಿಸುವ ಹುನ್ನಾರದಿಂದ ಸಲ್ಲಿಕೆಯಾಗಿವೆ ಎಂದು ದೂರುದಾರರು ಆರೋಪಿಸಿದ್ದಾರೆ.

ಮತ್ತೊಂದು ಗಂಭೀರ ವಿಚಾರವೆಂದರೆ, ಅರ್ಜಿಗಳಲ್ಲಿ ಕಂಡುಬಂದಿರುವ ಸಹಿಗಳಲ್ಲಿ ಗಣನೀಯ ವ್ಯತ್ಯಾಸಗಳಿದ್ದು, ಅರ್ಜಿ ಸಲ್ಲಿಸಿದವರ ಹೆಸರಿನಲ್ಲಿ ಯಾರೋ ಅಪರಿಚಿತರು ಸಹಿಯನ್ನು ಪೋರ್ಜರಿ ಮಾಡಿರುವ ಸಾಧ್ಯತೆಗಳಿವೆ ಎಂದು ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ.

ಪ್ರಸ್ತುತ ದೂರು ದಾಖಲಿಸಿಕೊಂಡಿರುವ ವೈಯಾಲಿಕಾವಲ್ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...