ಸಿಇಸಿ ಗ್ಯಾನೇಶ್ ವಿರುದ್ಧದ ‘ಇಂಡಿಯಾ’ ಒಕ್ಕೂಟದ ಅರ್ಜಿಯಲ್ಲಿ 10ಕ್ಕೂ ಹೆಚ್ಚು ದೋಷ: ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ರಾಹುಲ್ ಗಾಂಧಿ ನೇತೃತ್ವದ ‘ಇಂಡಿಯಾ’ ಒಕ್ಕೂಟ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯು ಸೋಮವಾರ 10 ಕ್ಕೂ ಹೆಚ್ಚು ದೋಷಗಳನ್ನು ಪತ್ತೆಹಚ್ಚಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್ – SIR) ವೇಳೆ ನಡೆದಿರುವ ಬೃಹತ್ ಪ್ರಮಾಣದ ಮತದಾರರ ಹೆಸರುಗಳ ಅಳಿಸುವಿಕೆ ಮತ್ತು ಅಕ್ರಮಗಳನ್ನು ಪ್ರಶ್ನಿಸಿ ವಿಪಕ್ಷಗಳು ಈ ಅರ್ಜಿ ಸಲ್ಲಿಸಿದ್ದವು.

- Advertisement -

​ಅರ್ಜಿದಾರರಲ್ಲಿ ಒಬ್ಬರಾಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ಅರ್ಜಿ ಸಲ್ಲಿಸಿದ ವಕೀಲರಿಗೆ ರಿಜಿಸ್ಟ್ರಿ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್ಲದೆ, ಅರ್ಜಿಯಲ್ಲಿನ ಕೆಲವು ಪುಟಗಳು ಓದಲು ಅಸಾಧ್ಯವಾಗಿವೆ ಹಾಗೂ ಕೆಲವು ಪುಟಗಳು ನಾಪತ್ತೆಯಾಗಿವೆ. ಜೊತೆಗೆ, ನ್ಯಾಯಾಲಯದ ಶುಲ್ಕದಲ್ಲಿ 200 ರೂ.ಗಳಿಗೂ ಅಧಿಕ ಕೊರತೆಯಿದೆ ಎಂಬುದನ್ನೂ ರಿಜಿಸ್ಟ್ರಿ ಬೆಟ್ಟು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

​ಸೋಮವಾರ ಬೆಳಿಗ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸಾವಿರಾರು ಬೆಂಬಲಿಗರೊಂದಿಗೆ ಸುಪ್ರೀಂ ಕೋರ್ಟ್‌ಗೆ ಕಾಲ್ನಡಿಗೆಯಲ್ಲಿ (ಮಾರ್ಚ್) ತೆರಳಿ ಈ ಅರ್ಜಿಯನ್ನು ಸಲ್ಲಿಸಿದ್ದರು.

​ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪರಿಶೀಲಿಸಬೇಕು, ಸಿಇಸಿ ಗ್ಯಾನೇಶ್ ಕುಮಾರ್ ಅವರು “ಏಕಪಕ್ಷೀಯವಾಗಿ” ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ಕ್ರಮಕೈಗೊಳ್ಳಬೇಕು, ಎಸ್‌ಐಆರ್ (SIR) ಪ್ರಕ್ರಿಯೆ ವೇಳೆ ನಡೆದಿರುವ “ಅವೈಜ್ಞಾನಿಕ” ಮತದಾರರ ಕೈಬಿಡುವಿಕೆಯನ್ನು (deletions) ತಡೆಯಬೇಕು ಮತ್ತು ವಿದ್ಯುನ್ಮಾನ ಮತಯಂತ್ರಗಳ (EVM) ಬಳಕೆ ಮತ್ತು ನಿಯೋಜನೆಯನ್ನು ನಿಯಂತ್ರಿಸುವ ವ್ಯವಸ್ಥೆಯನ್ನು ಪರಿಶೀಲಿಸಬೇಕು ಎಂದು ನಾಯಕರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

​ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಟಿಎಂಸಿಯ ಸೌಗತ ರಾಯ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಆರ್‌ಜೆಡಿಯ ತೇಜಸ್ವಿ ಯಾದವ್, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ಸಿಪಿಐ(ಎಂ)ನ ಎಂ.ಎ. ಬೇಬಿ, ಸಿಪಿಐನ ಡಿ. ರಾಜಾ, ಜೆಎಂಎಂನ ಮಹುವಾ ಮಾಜಿ, ಎನ್‌ಸಿಪಿಯ (ಎಸ್‌ಪಿ) ಸುಪ್ರಿಯಾ ಸುಳೆ ಮತ್ತು ಐಯುಎಂಎಲ್‌ನ ಇ.ಟಿ. ಮೊಹಮ್ಮದ್ ಬಶೀರ್ ಅವರು ಈ ಅರ್ಜಿದಾರರಾಗಿದ್ದಾರೆ.

​ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಕಾನೂನುಬದ್ಧತೆಯನ್ನು ಪ್ರಶ್ನಿಸದೆ, ಅದನ್ನು ಅಮಾನತುಗೊಳಿಸಬೇಕು ಎಂದು ವಿಪಕ್ಷ ನಾಯಕರು ಕೋರಿದ್ದಾರೆ. ಅಲ್ಲದೆ, ಪಂಜಾಬ್ ಸೇರಿದಂತೆ ಮುಂಬರುವ ಚುನಾವಣೆ ನಡೆಯಲಿರುವ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರನ್ನು ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.

​ವಿರೋಧ ಪಕ್ಷಗಳ ನಿಯೋಗವನ್ನು ಭೇಟಿಯಾಗಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ನಿರಾಕರಿಸಿದ ಬಳಿಕ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ನಾವು ಸಿಜೆಐ ಮತ್ತು ಸುಪ್ರೀಂ ಕೋರ್ಟ್ ಅನ್ನು ಗೌರವಿಸುತ್ತೇವೆ. ಅವರು ನಮಗೆ ಮುಂದಿನ ದಾರಿ ತೋರಿದ್ದಕ್ಕೆ ನಮಗೆ ಸಂತೋಷವಾಗಿದೆ. ನಾವು ಅರ್ಜಿ ಸಲ್ಲಿಸಬಹುದು ಎಂದು ಅವರು ನಮಗೆ ತಿಳಿಸಿರುವುದೇ ನಮಗಿರುವ ಮುಂದಿನ ಹಾದಿಯಾಗಿದೆ” ಎಂದು ಹೇಳಿದರು.

​ಎಸ್‌ಐಆರ್ (SIR) ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟ ಹಾಗೂ ಮಾಡಲಾದ ಬದಲಾವಣೆಗಳ ಕುರಿತು ನಿಗದಿತ ಕಾಲಮಿತಿಯೊಳಗೆ ಸ್ವತಂತ್ರ ಲೆಕ್ಕಪರಿಶೋಧನೆ (ಆಡಿಟ್) ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯೊಂದನ್ನು ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಸಮಿತಿಗೆ ತಾಂತ್ರಿಕ ತಜ್ಞರು ಹಾಗೂ ಇತರ ಗಣ್ಯ ನಾಗರಿಕರು ನೆರವು ನೀಡಬೇಕು ಎಂದು ತಿಳಿಸಲಾಗಿದೆ. ಜೊತೆಗೆ “ಮತದಾರರ ಪಟ್ಟಿಯ ಡೇಟಾಬೇಸ್‌ಗಳ ಸಮಗ್ರತೆ ಮತ್ತು ಎಸ್‌ಐಆರ್ ಜಾರಿ”ಯನ್ನು ಪರಿಶೀಲಿಸಲೂ ಸಮಿತಿಯನ್ನು ರಚಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ 7 ಮತ ವಂಚನೆ ಖಂಡಿಸಿ; SIR ವಿರೋಧಿ ಕರ್ನಾಟಕ ಪ್ರತಿಭಟನೆ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...