ಇವಿಎಂಗಿಂತಲೂ ಭೀಕರ ‘ಎಸ್‌ಐಆರ್’ ತಂತ್ರ: ಚುನಾವಣಾ ಆಯೋಗದ ಅಸಾಂವಿಧಾನಿಕ ನಡೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಶಾಂತ್ ಭೂಷಣ್

Date:

2047ರವರೆಗೆ ಅಧಿಕಾರದಲ್ಲಿ ಮುಂದುವರಿಯುವ ಆಡಳಿತ ಪಕ್ಷದ ಹುನ್ನಾರ, ಇವಿಎಂ (EVM) ದೋಷಗಳಿಗಿಂತಲೂ ಭೀಕರವಾದ ನೂತನ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆತಂಕ ವ್ಯಕ್ತಪಡಿಸಿದರು.

- Advertisement -

​ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಸೇರಿದ್ದ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಬೃಹತ್ ಅಕ್ರಮಗಳು ಮತ್ತು ಮತದಾರರ ಪಟ್ಟಿಯಿಂದ ಅಸಾಂವಿಧಾನಿಕವಾಗಿ ಹೆಸರುಗಳನ್ನು ಕೈಬಿಡುತ್ತಿರುವ ಆತಂಕಕಾರಿ ವಿಚಾರಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ದೇಶದ ಆರ್ಥಿಕತೆಯನ್ನು ನಾಶಮಾಡಿ, ಉದ್ಯೋಗಗಳನ್ನು ಕಸಿದುಕೊಂಡು, ದೇಶವನ್ನು ಅದಾನಿ ಮತ್ತು ಅಂಬಾನಿಯಂತಹವರ ಕೈಗೊಪ್ಪಿಸಿರುವ ಸರ್ಕಾರ, ಇದೀಗ 2047ರವರೆಗೆ ಆಡಳಿತ ನಡೆಸುವ ಕನಸು ಕಾಣುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

​ಇವಿಎಂಗಳ ಮೂಲಕ ಅಕ್ರಮ ನಡೆಸುವುದರ ಜೊತೆಗೆ, ಇದೀಗ ಭಯಾನಕವಾದ ಹೊಸ ವಿಧಾನದ (SIR) ಮೂಲಕ ದೇಶಾದ್ಯಂತ ಬರೋಬ್ಬರಿ 13 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಒಬ್ಬ ವ್ಯಕ್ತಿ ಒಂದೇ ನಗರದಲ್ಲಿ ಅಥವಾ ಕ್ಷೇತ್ರದಲ್ಲೇ ಬೇರೆ ಕಡೆಗೆ ಸ್ಥಳಾಂತರಗೊಂಡರೂ, ಅವರ ಹೆಸರನ್ನು ಕರಡು ಪಟ್ಟಿಯಿಂದ (Draft Roll) ಸ್ವಯಂಚಾಲಿತವಾಗಿ ತೆಗೆದುಹಾಕಲಾಗುತ್ತಿದೆ. ಇದಕ್ಕೆ ಉದಾಹರಣೆಯಾಗಿ ದೆಹಲಿಯಲ್ಲಿ 42 ಲಕ್ಷ ಜನರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, 33 ಲಕ್ಷ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ವಿವರಿಸಿದರು.

​’ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯ ತನಿಖಾ ವರದಿಯನ್ನು ಉಲ್ಲೇಖಿಸಿದ ಅವರು, ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಉಳಿದ ಇಬ್ಬರು ಆಯುಕ್ತರ ವಿರೋಧ ಮತ್ತು ಆಕ್ಷೇಪಣೆಗಳ ನಡುವೆಯೂ ಈ ಅಸಾಂವಿಧಾನಿಕ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ತಿಳಿಸಿದರು. ನಿಯಮಗಳ ಪ್ರಕಾರ ಮತದಾರರ ಸೇರ್ಪಡೆ ಅಥವಾ ಕಡಿತದ ಅಧಿಕಾರ ಸ್ಥಳೀಯ ಚುನಾವಣಾ ನೋಂದಣಾಧಿಕಾರಿಗೆ (ERO) ಇರುತ್ತದೆ. ಆದರೆ, ಗ್ಯಾನೇಶ್ ಕುಮಾರ್ ಅವರು ಈ ಅಧಿಕಾರವನ್ನು ಕಸಿದುಕೊಂಡು ದೆಹಲಿಯಲ್ಲಿ ಕುಳಿತಿರುವ ಐಟಿ ಸೆಲ್‌ಗೆ (IT Cell) ನೀಡಿದ್ದಾರೆ, ಇದು ಸಂಪೂರ್ಣ ಕಾನೂನುಬಾಹಿರ ಎಂದು ಅವರು ಕಿಡಿಕಾರಿದರು.

​ಈ ಸಂಪೂರ್ಣ ಪ್ರಕ್ರಿಯೆಯ ನಿಯಂತ್ರಣವನ್ನು ಆಡಳಿತಾರೂಢ ಬಿಜೆಪಿಗೆ ನೀಡಲಾಗಿರುವ ಅನುಮಾನಗಳಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತದಾರರ ಸೇರ್ಪಡೆಯ ಕುರಿತು ಅಲ್ಲಿನ ಅಧಿಕಾರಿಗಳಿಗೇ ಮಾಹಿತಿ ಇಲ್ಲದಂತೆ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಇಂತಹ ಬೃಹತ್ ಮಟ್ಟದ ಕಾನೂನುಬಾಹಿರ ಕೃತ್ಯಗಳನ್ನು ಎಸಗಿರುವ ಗ್ಯಾನೇಶ್ ಕುಮಾರ್, ಭವಿಷ್ಯದಲ್ಲಿ ತಮ್ಮ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಬಾರದು ಎಂಬ ಕಾರಣಕ್ಕಾಗಿ ತಮಗೆ ರಕ್ಷಣೆ (Immunity) ನೀಡುವಂತೆ ಸರ್ಕಾರವನ್ನು ಕೋರಿದ್ದರು. ಅದಕ್ಕೆ ತಕ್ಕಂತೆ ಸರ್ಕಾರವು ಕಾನೂನೊಂದನ್ನು ರೂಪಿಸಿ ಅವರಿಗೆ ರಕ್ಷಣೆ ಒದಗಿಸಿದೆ ಎಂದು ಪ್ರಶಾಂತ್ ಭೂಷಣ್ ಅವರು ಈ ಇಡೀ ವ್ಯವಸ್ಥಿತ ಅಕ್ರಮದ ಹಿಂದಿನ ಒಳಸಂಚನ್ನು ವಿವರಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಕರ್ನಾಟಕದಲ್ಲಿ ಎಂಇಎಸ್ ನಿಷೇಧಿಸಲು ಆಗ್ರಹ

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕ, ಕನ್ನಡ...

ಎಲ್ಲ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್‌ ಮೀಡಿಯಂ; ಮುಂದಿನ ವರ್ಷದಿಂದಲೇ‌ ಜಾರಿ: ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ...

ವಾರಾಣಸಿ | ‘ಭಾರತ ರತ್ನ’ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ; ಸ್ಪಷ್ಟನೆ ನೀಡಿದ ಅಧಿಕಾರಿಗಳು

ವಾರಾಣಸಿಯ ಹಡಹಾ ಸಾರಾಯ್ ಪ್ರದೇಶದಲ್ಲಿರುವ ಭಾರತ ರತ್ನ, ಶಹನಾಯಿ ದಿಗ್ಗಜ ಉಸ್ತಾದ್...