‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

Date:

“ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ ಅಧಿಕಾರವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗುಡುಗಿದ್ದಾರೆ.

- Advertisement -

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಈ ಮಾತುಗಳನ್ನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

​ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ದೇಶಾದ್ಯಂತ ಬರೋಬ್ಬರಿ 13 ಕೋಟಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 6 ರಾಜ್ಯಗಳ ಚುನಾವಣೆಯಲ್ಲಿ ಅದು ಗೆದ್ದಿರುವುದರ ಹಿಂದೆ ದೊಡ್ಡ ಹುನ್ನಾರವಿದೆ. ಬಿಹಾರದಲ್ಲಿ 64 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತಗಳನ್ನು ಕೈಬಿಟ್ಟಿದ್ದು, ಬಂಗಾಳದಲ್ಲೇ 38 ಲಕ್ಷ ಜನರಿಗೆ ನೋಟಿಸ್ ನೀಡಿ ಹಕ್ಕು ತಡೆಹಿಡಿಯಲಾಗಿದೆ. ಹರಿಯಾಣ, ಮಹಾರಾಷ್ಟ್ರದಲ್ಲೂ ಇದೇ ಕೃತ್ಯ ನಡೆದಿದೆ. ನಮ್ಮ ರಾಜ್ಯದಲ್ಲೇ 1.07 ಕೋಟಿ ಮತದಾರರನ್ನು ಕೈಬಿಡಲಾಗಿದ್ದು, ಇದರಲ್ಲಿ 70 ಲಕ್ಷ ಜನರನ್ನು ನಕಲಿ ಮತದಾರರು ಹಾಗೂ 38 ಲಕ್ಷ ಜನರನ್ನು ‘ಇತರೆ’ ಎಂದು ವರ್ಗೀಕರಿಸಿ ಅನ್ಯಾಯ ಮಾಡಲಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

​ಈ ‘ಮತಗಳ್ಳತನ’ದ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2024ರಿಂದಲೇ ಗಂಭೀರ ಆರೋಪ ಮಾಡುತ್ತಿದ್ದಾರೆ. ಇದೇ ಫ್ರೀಡಂ ಪಾರ್ಕ್‌ನಲ್ಲಿ ಈ ಹಿಂದೆ ನಡೆದಿದ್ದ ಪ್ರತಿಭಟನೆಯಲ್ಲೂ ಅವರು ಮಹದೇವಪುರ, ಆಳಂದ ಹಾಗೂ ಮಹಾರಾಷ್ಟ್ರದ ಚುನಾವಣಾ ಅಕ್ರಮಗಳ ಬಗ್ಗೆ ಎಚ್ಚರಿಸಿದ್ದರು. ಆಯೋಗ ಹೇಗೆ ಬಿಜೆಪಿಗೆ ನೆರವಾಗುತ್ತಿದೆ ಎಂದು ವಿವರಿಸಿದ್ದರೂ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಬದಲಿಗೆ ಆಯುಕ್ತರೇ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು ಎಂದು ಅವರು ಟೀಕಿಸಿದರು.

​ಪ್ರಜಾಪ್ರಭುತ್ವದ ಭದ್ರ ಬುನಾದಿಯಾದ ಮತದಾರರ ಪಟ್ಟಿಯನ್ನೇ ಬಿಜೆಪಿ ಬುಡಮೇಲು ಮಾಡುತ್ತಿದೆ. ರಾಜೀವ್ ಗಾಂಧಿ ಅವರು ಯುವಕರಿಗೆ 18ನೇ ವಯಸ್ಸಿಗೆ ಮತದಾನದ ಹಕ್ಕು ನೀಡಿದ್ದರು. ಆದರೆ, ಇಂದಿನ ಯುವಪೀಳಿಗೆ (Gen Z) ಮೋದಿ ಸರ್ಕಾರದ ವಿರುದ್ಧ ನಿಂತಿರುವುದರಿಂದ, ಇಲ್ಲಿಯೇ ಹುಟ್ಟಿ ವ್ಯಾಸಂಗ ಮಾಡಿದ ಅವರ ಹೆಸರುಗಳು ಮತಪಟ್ಟಿಗೆ ಸೇರ್ಪಡೆಯಾಗದಂತೆ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಚುನಾವಣೆಯಲ್ಲಿ ಗೆದ್ದಾಗಲೆಲ್ಲಾ ಅದು ‘ಮೋದಿ ಬಿರುಗಾಳಿ’ ಅಥವಾ ‘ಅಮಿತ್ ಶಾ ಚಾಣಾಕ್ಷತನ’ ಎಂದು ಬಿಂಬಿಸಲಾಗುತ್ತದೆ. ಆದರೆ ಇಲ್ಲಿ ಯಾವ ಬಿರುಗಾಳಿಯೂ ಇಲ್ಲ, ಚಾಣಾಕ್ಷತನವೂ ಇಲ್ಲ. ಆಯೋಗದ ಮೂಲಕ ಮತಗಳನ್ನು ಕದಿಯುವುದನ್ನು ‘ಚಾಣಾಕ್ಷತನ’ ಎನ್ನಲಾಗದು ಎಂದು ಅವರು ಲೇವಡಿ ಮಾಡಿದರು.

​ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಟೀಕಿಸಿದ ಅವರು, ಆಯೋಗದಲ್ಲಿ ಬಹುಮತದ ನಿರ್ಧಾರ ಕೈಗೊಳ್ಳಬೇಕು. ಆದರೆ ಕಳೆದ 10 ತಿಂಗಳಲ್ಲಿ ಇಬ್ಬರು ಆಯುಕ್ತರು 14 ಬಾರಿ ಭಿನ್ನಮತ ವ್ಯಕ್ತಪಡಿಸಿದರೂ, ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ‘ಫಾರಂ-6’ಕ್ಕೆ ತಿದ್ದುಪಡಿ ತಂದಿದ್ದಾರೆ. ವಾಸ್ತವದಲ್ಲಿ ಆಯೋಗದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರೇ ‘ಗೌಪ್ಯ ಆಯುಕ್ತ’ರಂತೆ ಕಾರ್ಯನಿರ್ವಹಿಸುತ್ತಿದ್ದು, ಇವರ ಮಾತನ್ನು ಕೇಳಿಕೊಂಡೇ 13 ಕೋಟಿ ಜನರ ಹಕ್ಕು ಕಸಿಯಲಾಗಿದೆ. 75 ವರ್ಷಗಳ ಕಾಲ ನಿಷ್ಪಕ್ಷಪಾತವಾಗಿದ್ದ ಆಯೋಗವು 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಕ್ರಮಗಳ ಕೂಪವಾಗಿದೆ ಎಂದರು.

​2023ರಲ್ಲಿ ಕಾನೂನು ತಿದ್ದುಪಡಿ ತಂದು ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೈಬಿಟ್ಟು, ಕೇಂದ್ರ ಸಚಿವರನ್ನು ಸೇರಿಸಲಾಗಿದೆ. ಹೀಗಾಗಿ ನ್ಯಾಯ ಸಿಗುವ ಭರವಸೆಯಿಲ್ಲ. ಆಯೋಗದ ಇಂತಹ ಕುತಂತ್ರಗಳಿಗೆ ನ್ಯಾಯಾಂಗವೇ ಕಡಿವಾಣ ಹಾಕಬೇಕು, ಇಲ್ಲವಾದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವೇ ಬುಡಮೇಲಾಗಲಿದೆ. ನಮ್ಮ ಪೂರ್ವಜರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹೋರಾಡಲೇಬೇಕಿದೆ. ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ, ಸೋಮವಾರದಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಈ ಪ್ರತಿಭಟನೆ ವಿಸ್ತರಣೆಯಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಇಸಿ’ ಬಿಕ್ಕಟ್ಟು, ಮೋದಿ ಸರ್ಕಾರಕ್ಕೆ ಇಕ್ಕಟ್ಟು: ಕೇಂದ್ರದ ವಿರುದ್ಧವೇ ಮಿತ್ರಪಕ್ಷಗಳ ಬಂಡಾಯದ ಸುಳಿವು?

ಚುನಾವಣಾ ಆಯೋಗದ (EC) ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ...

ರಾಮಮಂದಿರ ಕಾಣಿಕೆ ಹಗರಣ: ದೇಶದ 3ನೇ ಅತಿ ದೊಡ್ಡ ಚಾರ್ಜ್‌ಶೀಟ್ ಸಲ್ಲಿಕೆ, 73,480 ಪುಟಗಳ ದಾಖಲೆ

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ನಡೆದಿದ್ದ ಕಾಣಿಕೆ ಕಳ್ಳತನ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ...

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ...

ಏಷ್ಯನ್ ಗೇಮ್ಸ್: ಮ್ಯಾರಥಾನ್‌ನಲ್ಲಿ ಐತಿಹಾಸಿಕ ಬೆಳ್ಳಿ, ಶೂಟಿಂಗ್‌ನಲ್ಲೂ ಬೆಳಗಿದ ಭಾರತ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 8ನೇ ದಿನದಂದು ಭಾರತೀಯ...