ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ನೀಡಿರುವ ನೋಟಿಸ್ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಹೊರಡಿಸಿರುವ ನೋಟಿಸ್ ರದ್ದುಗೊಳಿಸುವಂತೆ ಹಾಗೂ ಅದರ ಜಾರಿಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಖಾನ್ ಕೋರಿದ್ದಾರೆ.

- Advertisement -

ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಇಮ್ರಾನ್ ಖಾನ್ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಮೆರಿಕದ ಪ್ರಜೆಯಾಗಿರುವ ಖಾನ್, ಸಾಗರೋತ್ತರ ಭಾರತೀಯ ನಾಗರಿಕ (OCI) ಕಾರ್ಡ್ ಹೊಂದಿದ್ದರೂ ರಾಜಕೀಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ವಲಸೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ಅಕ್ಟೋಬರ್ 14ರಂದು ನೀಡಲಾದ ನೋಟಿಸ್‌ನಲ್ಲಿ 2025ರ ವಲಸೆ ಮತ್ತು ವಿದೇಶಿಯರ ಕಾಯ್ದೆ ಉಲ್ಲಂಘಿಸಿರುವುದಾಗಿ ತಿಳಿಸಲಾಗಿದೆ. ಆದರೆ ಯಾವ ನಿಯಮವನ್ನು, ಯಾವ ರೀತಿಯಲ್ಲಿ ಉಲ್ಲಂಘಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ಖಾನ್ ತಮ್ಮ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ. ನೋಟಿಸ್ ಪಾಲಿಸದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ತಾವು ದೀರ್ಘಕಾಲದಿಂದ ಭಾರತದಲ್ಲಿ ವಾಸಿಸುತ್ತಿದ್ದು, OCI ಕಾರ್ಡ್ ಮೂಲಕ ಇಲ್ಲಿ ನೆಲೆಸುವ ಹಕ್ಕು ಹೊಂದಿರುವುದಾಗಿ ಖಾನ್ ಪ್ರತಿಪಾದಿಸಿದ್ದಾರೆ. ಯಾವುದೇ ವಿಚಾರಣೆ ನಡೆಸದೆ, ಕಾರಣ ಕೇಳುವ ನೋಟಿಸ್ ನೀಡದೆ ದೇಶ ತೊರೆಯುವಂತೆ ಸೂಚಿಸಿರುವುದು ಅನ್ಯಾಯವಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ಮಾತ್ರ ಆಧರಿಸಿ ಇಂತಹ ಕಠಿಣ ಕ್ರಮ ಕೈಗೊಳ್ಳುವುದು ಸಮರ್ಥನೀಯವಲ್ಲ ಎಂದು ವಾದಿಸಿದ್ದಾರೆ.

ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರು ಖಾನ್ ವಿರುದ್ಧ ದೂರು ನೀಡಿದ್ದರು. ವಿದೇಶಿ ಪ್ರಜೆಯೊಬ್ಬರು ರಾಜಕೀಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ವಲಸೆ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಗಡೀಪಾರಿಗೆ ಒತ್ತಾಯಿಸಿದ್ದರು. ಆದರೆ ಪ್ರತಿಭಟನೆ ನಡೆದ ಪ್ರದೇಶ ನಿರ್ಬಂಧಿತ ವಲಯವಾಗಿರಲಿಲ್ಲ ಮತ್ತು ತಾವು ಯಾವುದೇ ಬ್ಯಾರಿಕೇಡ್‌ಗಳನ್ನು ಉಲ್ಲಂಘಿಸಿಲ್ಲ ಎಂದು ಖಾನ್ ತಿಳಿಸಿದ್ದಾರೆ.

ವಕೀಲರಾದ ಜುಲ್ಫಿಕರ್ ಮೆಮನ್, ಪರ್ವೇಜ್ ಮೆಮನ್ ಮತ್ತು ಚಿರಾಗ್ ನಾಯಕ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ನೋಟಿಸ್‌ಗೆ ಆಧಾರವಾದ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರಲಾಗಿದೆ. ಸೋಮವಾರ ತುರ್ತು ವಿಚಾರಣೆಗೆ ಅರ್ಜಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ. ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ದೊರೆಯದಿದ್ದರೆ ನೋಟಿಸ್ ಜಾರಿಯಲ್ಲಿಯೇ ಉಳಿಯಲಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ ಅದ್ವಿತೀಯ ಇತಿಹಾಸಕಾರ

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ...

ನಕಲಿ ಕೋರ್ಟ್ ಆದೇಶ ಆಧರಿಸಿ ಬೆಟ್ಟಿಂಗ್ ವೆಬ್‌ಸೈಟ್‌ ಬ್ಲಾಕ್‌: ಟೆಲಿಕಾಂ ಕಾರ್ಯದರ್ಶಿಗೆ ಪ್ರಧಾನಿ ಕಚೇರಿ ಸಮನ್ಸ್

ನಕಲಿ ನ್ಯಾಯಾಲಯದ ಆದೇಶಗಳನ್ನು ಆಧರಿಸಿ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ (ಬ್ಲಾಕ್)...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸಹಕರಿಸಬೇಕು: ಡಿಕೆಶಿ

"ತಮಿಳುನಾಡಿನ 177 ಟಿಎಂಸಿ ನೀರಿನ ಹಕ್ಕಿನ ರಕ್ಷಣೆಯ ಜೊತೆಗೆ ಕರ್ನಾಟಕದ ಹಿತಾಸಕ್ತಿ...