ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

Date:

ಟಿ. ನರಸೀಪುರದಲ್ಲಿ ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ದಸಂಸ ಹಾಗೂ ನೀಲಿ ಶಾಲಿನ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಹಗುರವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ, ಅವರ ಹೇಳಿಕೆಯನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಹುಣಸೂರು ಪಟ್ಟಣದ ಸಂವಿಧಾನ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ದಸಂಸ, ಸಿಪಿಐ(ಎಂ), ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಂವಿಧಾನ ವೃತ್ತದಲ್ಲಿ ಸಮಾವೇಶಗೊಂಡು ಪ್ರತಾಪ್ ಸಿಂಹ ಅವರ ಹೇಳಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಇಂತಹ ಹೇಳಿಕೆಗಳಿಂದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತದೆ ಎಂದು ಹೇಳಿದರು. ಪ್ರತಾಪ್ ಸಿಂಹ ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಹಿರಿಯ ಹೋರಾಟಗಾರ ಹರಿಹರ ಆನಂದಸ್ವಾಮಿ, ಕೋಮುವಾದಿ ಶಕ್ತಿಗಳು ರಾಜಕೀಯ ದುರುದ್ದೇಶದಿಂದ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. ಕುವೆಂಪು ಹಾಗೂ ಬಸವಣ್ಣನವರಂತಹ ಮಹನೀಯರು ಹುಟ್ಟಿದ ನಾಡಿನಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ ನೀಡಬಾರದು. ಇಂತಹ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಬೇಕು ಎಂದರು.

ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ವಿಜಯಕುಮಾರ್ ಮಾತನಾಡಿ, ನೀಲಿ, ಕೆಂಪು, ಹಸಿರು ಸೇರಿದಂತೆ ವಿವಿಧ ಪ್ರಗತಿಪರ ಶಕ್ತಿಗಳು ಒಗ್ಗಟ್ಟಾಗಿ ಇಂತಹ ಪ್ರಯತ್ನಗಳನ್ನು ಹಿಮ್ಮೆಟ್ಟಿಸಬೇಕು. ಇದರಿಂದ ಪರ್ಯಾಯ ಶಕ್ತಿ ರೂಪುಗೊಳ್ಳಲಿದ್ದು, ಕೋಮುವಾದಿ ಶಕ್ತಿಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ಮಾಜಿ ಸಂಸದ ಎಂಬ ಜವಾಬ್ದಾರಿಯನ್ನು ಮರೆತು ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ನಿರ್ಮಾಣಕ್ಕೆ ಕಾರಣವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು. ಪ್ರಕರಣ ದಾಖಲಿಸುವುದಷ್ಟೇ ಸಾಲದು, ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಂಡು ಅಗತ್ಯವಿದ್ದರೆ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವಿಶೇಷ ವರದಿ ಓದಿದ್ದೀರಾ? SIR: ‘ನಮ್ಮ ಸಂವಿಧಾನ-ನಮ್ಮ ಹೋರಾಟ-ನಮ್ಮ ಹಕ್ಕು; ನಾವು ಹೋರಾಟಕ್ಕೆ ಸಿದ್ಧ’- ಪ್ರಕಾಶ್ ರಾಜ್

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ವರದರಾಜು, ತಟ್ಟೆಕೆರೆ ನಾಗರಾಜು, ದಸಂಸ ತಾಲೂಕು ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಸಿಪಿಎಂನ ಬಸವರಾಜು ಕಲ್ಕುಣಿಕೆ, ನಿಂಗರಾಜ್ ಮಲ್ಲಾಡಿ, ಪೀಸ್ ಕಮಿಟಿಯ ಅಜೀಜ್ ಉಲ್ಲಾ, ಮುಖಂಡರಾದ ಜೆ. ಮಹದೇವು, ಚಿಕ್ಕಹುಣಸೂರು ರಾಜು, ಮುದಾಸಿರ್, ಶಿವರಾಜು ಮುತ್ತುರಾಯನ ಹೊಸಳ್ಳಿ, ಅತ್ತಿಕುಪ್ಪೆ ಸಿದ್ದೇಶ್, ಸಿಪಿಎಂನ ಜಗದೀಶ್ ಸೂರ್ಯ, ಕೆ. ಬಸವರಾಜು, ಬಿ.ಕೆ. ಶಿವಣ್ಣ, ನಾಗಯ್ಯ, ಬಿಳಿಕೆರೆ ಬಸವರಾಜು, ಕಿರಂಗೂರು ಸ್ವಾಮಿ, ಹೆಚ್.ಕೆ. ಗೋವಿಂದರಾಜು ಹೈರಿಗೆ, ಕಟ್ಟೆಮಳಲವಾಡಿ ಕಿರಣ್ ಕುಮಾರ್, ದೇವರಾಜ್ ಮಲ್ಲಾಡಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟ ಮಾದಯ್ಯ, ಮಾರನಹಳ್ಳಿ ಶಿವಣ್ಣ, ಗೌರಿಪುರ ವೆಂಕಟೇಶ, ಹಳ್ಳದಕೊಪ್ಪಲು ಪುಟ್ಟರಾಜು, ಎಂ.ಎಸ್. ಚಂದ್ರಶೇಖರ್, ವೇಣು, ದೇವರಾಜು, ರಾಜು, ಕೃಷ್ಣ ಹಳೆಪುರ, ಪುಟ್ಟರಾಜು ಬೀರನಹಳ್ಳಿ, ನಾರಾಯಣ, ಗಿರೀಶ್ ಬಿಳಿಕೆರೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ವಿರುದ್ಧ ‘ಇಂಡಿಯಾ’ ಒಗ್ಗಟ್ಟು ಪ್ರದರ್ಶನ: ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟ ಘೋಷಣೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆ ಮತ್ತು ಚುನಾವಣಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...