ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

Date:

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ ತಿಳಿಸಿದ್ದಾರೆ.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಸ್ವಾಯತತ್ತೆ ಸಂಸ್ಥೆಯಾಗಿರುವ ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸದೇ ಕೇಂದ್ರ ಬಿಜೆಪಿ ಸರ್ಕಾರದ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸುತ್ತಿರುವದು ಬಯಲಾಗದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಏಕಪಕ್ಷೀಯ ನಿರ್ಧಾರದ ವಿರುದ್ದ ಸಹದ್ಯೋಗಿ ಆಯುಕ್ತರೇ ಪತ್ರ ಬರೆದು ಬಹಿರಂಗಪಡಿಸಿದ್ದಾರೆ. ಉದ್ದೇಶ ಪೂರಕವಾಗಿ ಒಂದು ಧರ್ಮ, ಜಾತಿಯ ಜನರನ್ನು ಗುರಿಯಾಗಿಸಿ ಮತದಾರರ ಪಟ್ಟಿಯಿಂದ ಹೊರ ಹಾಕುವ ಹುನ್ನಾರ ಬಯಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರಿಗೆ ದೊರಕಿರುವ ಮತದಾನಹಕ್ಕು ಕಸಿಯುವ ಪ್ರಯತ್ನವೇ ವಿರೋಧಿ ನಡೆಯಾಗಿದೆ. ಎಸ್ ಐಆರ್ ಮೂಲಕ ಒಂದು ರಾಜಕೀಯ ಪಕ್ಷಕ್ಕೆ ಪೂರಕವಾಗಿ ಚುನಾವಣಾ ಆಯೋಗ ಕೆಲಸ ಮಾಡುವಂತಾಗಿದ್ದು ಕೂಡಲೇ ಜ್ಞಾನೇಶಕುಮಾರ ಇವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ನೇತಾಜಿ ನಗರದಿಂದ ಪ್ರತಿಭಟನಾ ರ್ಯಾಲಿ ನಗರದ ಪ್ರಮುಖ ಬೀದಿಗಳ ಮುಖಾಂತರ ಡಾ.ಬಿ.ಆರ್.ಅಂಬೇಡ್ಕರ ವೃತ್ತಕ್ಕೆ ಆಗಮಿಸಲಿದೆ. ಎಲ್ಲಾ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿದಂತೆ ಮತ ಕಾವಲು ಸಮಿತಿ ಎಲ್ಲಾ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಹೋರಾಟಗಾರ ಮಾರೆಪ್ಪ ಹರವಿ ಮಾತನಾಡಿ ಎಸ್ ಐಆರ್ ಮೂಲಕ ದೇಶದ ಜನರ ಮತದ ಹಕ್ಕು ಕಸಿಯುವ ಅಜೆಂಡಾ ಚುನಾವಣಾ ಆಯೋಗ ಹೊಂದಿರುವದು ಬಯಲಾಗಿದೆ. ಒಂದು ಪಕ್ಷ ಅಧಿಕಾರಕ್ಕೆ ತರಲು ಮತದಾರರನ್ನೇ ಕಡಿತಗೊಳಿಸಲಾಗಿದೆ. ಹತ್ತಾರು ಬಾರಿ ದೂರುಗಳು ನೀಡಿದರೂ ಆಯೋಗ ಸ್ಪಂದಿಸದೇ ಇರುವದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಇವರನ್ನು ವಜಾಗೊಳಿಸಿ ಎಸ್‌ಐಆರ್ ರದ್ದಿಗೆ ಆಗ್ರಹಿಸಿ ನಡೆಯಲಿರುವ ಪ್ರತಿಭಟನಾ ರ್ಯಾಲಿಯಲ್ಲಿ ಬೆಂಬಲಿಸಲು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | SIR : ನೈಜ ಮತದಾರರನ್ನೇ ಗುರಿಯಾಗಿಸಿ ಫಾರ್ಮ್-7 ಸಲ್ಲಿಕೆ, ಎಸ್‌ಐಟಿ ತನಿಖೆಗೆ ಆಗ್ರಹ

ಈ ಸಂದರ್ಬದಲ್ಲಿ ಪಾಲಿಕೆ ಹಿರಿಯ ಮಾಜಿ ಸದಸ್ಯ ಜಯಣ್ಣ, ಎಂ.ಆ‌ರ್.ಭೇರಿ, ಮಹ್ಮದ ಶಾಲಂ, ಅಸೀಮುದ್ದೀನ್ ಅಕ್ತರ್, ಖಾಜಾ ಅಸ್ಲಂ, ಆಂಜಿನೇಯ್ಯ ಕುರುಬದೊಡ್ಡಿ, ಎನ್. ಶ್ರೀ ನಿವಾಸರೆಡ್ಡಿ, ಕೆ.ಜಿ.ವೀರೇಶ, ಜಯವಂತರಾವ್ ಪತಂಗೆ, ಮಸ್ತಾಕ್ . ನರಸಿಂಹಲು ಮಾಡಗಿರಿ, ಅಮರೇಗೌಡ ಹಂಚಿನಾಳ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...