SIR ಅಂತಿಮ ಮತದಾರರ ಪಟ್ಟಿ ತಿರಸ್ಕರಿಸಿ; ರಾಜ್ಯ ಸರ್ಕಾರಕ್ಕೆ ನಾಗರಿಕ ಸಂಘಟನೆಗಳ ಆಗ್ರಹ

Date:

ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿರುವ ಎಸ್‌ಐಆರ್‌ನ ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಸಂಪೂರ್ಣವಾಗಿ ತಿರಸ್ಕರಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಈ ಮತಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ರಾಜ್ಯ ಸರ್ಕಾರವನ್ನು ‘ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ’ವು ಒತ್ತಾಯಿಸಿದೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಒಕ್ಕೂಟವು, “ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ನೈಜ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಿಹಾಕಲಾಗಿದೆ. ಈ ಬೃಹತ್ ಪ್ರಮಾಣದ ಲೋಪಕ್ಕೆ ಚುನಾವಣಾ ಆಯೋಗವು ಯಾವುದೇ ಸ್ಪಷ್ಟನೆ ಅಥವಾ ಸಮರ್ಪಕ ವಿವರಣೆ ನೀಡುತ್ತಿಲ್ಲ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು;...

ಅಮೆರಿಕದ ಕಾಂಗ್ರೆಸ್‌ಗೆ ನ. 3ರಂದು ನಡೆಯಲಿರುವ 'ಮಧ್ಯಂತರ ಚುನಾವಣೆ' ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಹುದೊಡ್ಡ ಅಗ್ನಿಪರೀಕ್ಷೆ. ಈ ಸಮರದಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ ಬಹುಮತ ಕಳೆದುಕೊಂಡರೂ ಅವರ ಅಧ್ಯಕ್ಷ ಸ್ಥಾನಕ್ಕೇನೂ ಕುತ್ತಿಲ್ಲ;...

“2025ರ ಮತದಾರರ ಪಟ್ಟಿಗೆ ಸುಮಾರು 6.5 ಲಕ್ಷ ನೂತನ ಮತದಾರರು ಸೇರ್ಪಡೆಯಾಗಿದ್ದರೂ, ಅಂತಿಮ ಪರಿಷ್ಕೃತ ಪಟ್ಟಿಯಿಂದ ಬರೋಬ್ಬರಿ 1.06 ಕೋಟಿ ಜನರನ್ನು ಕೈಬಿಡಲಾಗಿದೆ. ಇದರಲ್ಲಿ ಮೃತಪಟ್ಟವರು ಮತ್ತು ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿದ್ದ ಸುಮಾರು 25 ಲಕ್ಷ ಜನರನ್ನು ಹೊರಗಿಡಲಾಗಿದೆ ಎಂದು ಸ್ವತಃ ಚುನಾವಣಾ ಆಯೋಗವೇ ಒಪ್ಪಿಕೊಂಡಿದೆ. ಆದರೆ, ಈ ಅಂಕಿಅಂಶಗಳನ್ನು ಗಣನೆಗೆ ತೆಗೆದುಕೊಂಡರೂ ಉಳಿದ ಸುಮಾರು 75 ಲಕ್ಷ ಮತದಾರರು ಎಲ್ಲಿಗೆ ಹೋದರು ಮತ್ತು ಅವರ ಹೆಸರುಗಳನ್ನು ತೆಗೆದುಹಾಕಲು ಕಾರಣವೇನು ಎಂಬ ಪ್ರಶ್ನೆಗೆ ಆಯೋಗವು ಉತ್ತರಿಸದೆ ಮೌನ ವಹಿಸಿದೆ” ಎಂದು ಸಂಘಟನೆಗಳು ಆರೋಪಿಸಿವೆ.

“ವಿಶೇಷವಾಗಿ, ವೇಗವಾಗಿ ಬೆಳೆಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ 43%ರಷ್ಟು ಮತದಾರರ ಹೆಸರುಗಳು ಪಟ್ಟಿಯಿಂದ ಮಾಯವಾಗಿರುವುದು ಹೇಗೆ ಸಾಧ್ಯ? ‘ನಾಗರಿಕ ಮತ ಕಾವಲು ಸಮಿತಿ’ ರಾಜ್ಯದ ನಾನಾ ಭಾಗಗಳಲ್ಲಿ ನಡೆಸಿದ ಬೂತ್ ಮಟ್ಟದ ಪರಿಶೀಲನೆಯಲ್ಲಿ ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ. ಸ್ಥಳದಲ್ಲೇ ವಾಸವಿದ್ದವರನ್ನು ಸ್ಥಳಾಂತರಗೊಂಡಿದ್ದಾರೆ ಎಂದು ಸುಳ್ಳು ದಾಖಲಿಸಿ ಪಟ್ಟಿಯಿಂದ ಹೊರಗಿಟ್ಟಿರುವುದು, ಜೀವಂತವಾಗಿರುವ ನಾಗರಿಕರನ್ನೇ ಮೃತಪಟ್ಟಿದ್ದಾರೆಂದು ನಮೂದಿಸಿರುವ ಘೋರ ಲೋಪಗಳು ಪತ್ತೆಯಾಗಿದೆ. ಇಂತಹ ತಪ್ಪುಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಮತ್ತೆ ಸೇರ್ಪಡೆಗೊಳಿಸದೆ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಕಳವಳ ವ್ಯಕ್ತಪಡಿಸಿದೆ.

“ದೇಶಾದ್ಯಂತ ಎಸ್‌ಐಆರ್ ವಿರುದ್ಧ ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟವು ಹೋರಾಟ ನಡೆಸುತ್ತಿದ್ದು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಜನಾಂದೋಲನವೇ ನಡೆಯುತ್ತಿರುವಾಗ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರು ಈ ಅಕ್ರಮ ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡುತ್ತಿರುವುದು ತೀವ್ರ ವಿರೋಧಾಭಾಸದಿಂದ ಕೂಡಿದೆ” ಎಂದು ಒಕ್ಕೂಟವು ಆಕ್ಷೇಪಿಸಿದೆ.

“ರಾಜ್ಯ ಸರ್ಕಾರದ ಕೆಲವು ಸಚಿವರು ‘ಬೆಂಗಳೂರಿನಲ್ಲಿ ಮಾತ್ರ ಸಮಸ್ಯೆಯಿದೆ, ಉಳಿದ ಜಿಲ್ಲೆಗಳಲ್ಲಿ ಇಲ್ಲ’ ಅಥವಾ ‘ನಮ್ಮ ಕ್ಷೇತ್ರದಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದರಿಂದ ತೊಂದರೆಯಾಗಿಲ್ಲ’ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳು ಒಟ್ಟಾರೆ ಹೋರಾಟದ ಉದ್ದೇಶವನ್ನೇ ಬುಡಮೇಲು ಮಾಡುವಂತಿವೆ. ಕಾಂಗ್ರೆಸ್ ಪಕ್ಷದ ಈ ದ್ವಂದ್ವ ನಿಲುವು ಮುಂದುವರಿದರೆ ಮುಂಬರುವ ದಿನಗಳಲ್ಲಿ ಪಕ್ಷವು ಭಾರಿ ರಾಜಕೀಯ ಬೆಲೆ ತೆರಬೇಕಾಗುತ್ತದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ರಾಜ್ಯ ಅಧ್ಯಕ್ಷರು ತಕ್ಷಣವೇ ತಮ್ಮ ಸರ್ಕಾರ ಮತ್ತು ಪಕ್ಷದ ಅಧಿಕೃತ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಈ ಲೇಖನ ಓದಿದ್ದೀರಾ?: ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ ಮಂತ್ರ?

“ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಲೋಪದೋಷಗಳಿಂದ ಕೂಡಿದ ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು ಆಗ್ರಹಿಸಿ ವಿಪಕ್ಷಗಳು ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್‌ಐಆರ್ ವಿರೋಧಿ ಒಕ್ಕೂಟವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಲು ಪ್ರಬುದ್ಧ ನಾಗರಿಕರು ಹಾಗೂ ಎಲ್ಲ ವರ್ಗದ ಜನರು ನವೆಂಬರ್ 5ರ ಫ್ರೀಡಂ ಪಾರ್ಕ್ ಚಳವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಒಕ್ಕೂಟವು ಮನವಿ ಮಾಡಿದೆ.

“ಮುಂಬರುವ ಸ್ಥಳೀಯ ಸಂಸ್ಥೆಗಳ (ಪಂಚಾಯತ್ ಮತ್ತು ನಗರ ಸಭೆಗಳ) ಚುನಾವಣೆಗಳಿಗೆ ಈ ಅಕ್ರಮ ಎಸ್‌ಐಆರ್ ಅಂತಿಮ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು. ಸ್ಥಳೀಯ ಚುನಾವಣೆಗಳು ರಾಜ್ಯ ಚುನಾವಣಾ ಆಯೋಗವು ಪ್ರತ್ಯೇಕವಾಗಿ ಸಿದ್ಧಪಡಿಸುವ ಮತದಾರರ ಪಟ್ಟಿಯ ಆಧಾರದ ಮೇಲೆಯೇ ನಡೆಯುವುದರಿಂದ, ಕೇಂದ್ರ ಚುನಾವಣಾ ಆಯೋಗದ ದೋಷಪೂರಿತ ಎಸ್‌ಐಆರ್ ಪಟ್ಟಿಯನ್ನು ಅಳವಡಿಸಿಕೊಳ್ಳುವ ಯಾವುದೇ ಕಾನೂನುಬದ್ಧ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿಲ್ಲ” ಎಂದು ಒಕ್ಕೂಟ ಸ್ಪಷ್ಟವಾಗಿ ಹೇಳಿದೆ.

“ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಎಸ್‌ಐಆರ್ ಪಟ್ಟಿಯನ್ನು ಬಳಸದೇ ಹೊರಗಿಡಲಾಗಿದೆ. ಹೀಗಿರುವಾಗ, ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅನುಸರಿಸಬೇಕು. ರಾಜ್ಯ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ ಎಲ್ಲ ಮತಗಟ್ಟೆಗಳಲ್ಲೂ ಸಾರ್ವಜನಿಕ ಪರಿಶೀಲನಾ ಸಭೆಗಳನ್ನು ನಡೆಸಿ, 2025ರ ಮೂಲ ಮತದಾರರ ಪಟ್ಟಿಯನ್ನೇ ಸಮಗ್ರವಾಗಿ ಪರಿಶೀಲಿಸಿ, ಕಂಡುಬರುವ ಲೋಪಗಳನ್ನು ಸರಿಪಡಿಸಿದ ನಂತರವಷ್ಟೇ ಸ್ಥಳೀಯ ಚುನಾವಣೆಗಳಿಗೆ ಬಳಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ಸಿದ್ಧತೆ; 17 ಕೇಂದ್ರಗಳಲ್ಲಿ 7,362 ಅಭ್ಯರ್ಥಿಗಳು ಭಾಗಿ

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ ಎ, ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನವೆಂಬರ್...

‘ಸೋ-ಕಾಲ್ಡ್ PM 3.0 ಸರ್ಕಾರ PM 2.5 ಬಗ್ಗೆ ಗಮನ ಹರಿಸಲಿ’ – ದೆಹಲಿ ವಾಯುಮಾಲಿನ್ಯಕ್ಕೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ದೇಶದ ರಾಜಧಾನಿ ದೆಹಲಿ, ಸುತ್ತಮುತ್ತಲಿನ ಉತ್ತರ ಭಾರತ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ...

ಮಾಲಿನ್ಯ ಮುಕ್ತ ದೀಪಾವಳಿ ಸಂದೇಶ: ಬಿಜೆಪಿ ಆಕ್ಷೇಪದ ಬೆನ್ನಲ್ಲೇ ನಟಿ ದಿಯಾ ಮಿರ್ಜಾ ವಿಡಿಯೊ ತೆಗೆದ ಬಿಎಂಸಿ

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಹಮ್ಮಿಕೊಂಡಿದ್ದ 'ಪರಿಸರ ಸ್ನೇಹಿ ದೀಪಾವಳಿ' ಜಾಗೃತಿ...

ಬಾಗಲಕೋಟೆ | ಸಾರಿಗೆ ಇಲಾಖೆಯ ಆನ್‌ಲೈನ್ ಸೇವೆ ಪಡೆಯಲು ಮಧ್ಯವರ್ತಿಗಳು ಬೇಕಿಲ್ಲ

ಸಾರಿಗೆ ಇಲಾಖೆಯ ಪ್ರಮುಖ ಸೇವೆಗಳನ್ನು ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ನೇರವಾಗಿ...