SIR ಅಂತಿಮ ಮತಪಟ್ಟಿ ತಿರಸ್ಕರಿಸಿ, ಸಾಮಾಜಿಕ ಪರಿಶೋಧನೆ ನಡೆಸಿ: ರಾಜ್ಯ ಸರ್ಕಾರಕ್ಕೆ SIR ವಿರೋಧಿ ಒಕ್ಕೂಟ ಆಗ್ರಹ

Date:

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಸ್‌ಐಆರ್‌ ಮತಪಟ್ಟಿಯನ್ನು ಬಳಸಬಾರದು. ಸ್ವತಂತ್ರ ಸಾಮಾಜಿಕ ಪರಿಶೋಧನೆ ನಡೆಸಿ ಪರಿಷ್ಕರಿಸಿದ 2025ರ ಮತದಾರರ ಪಟ್ಟಿಯನ್ನೇ ಆಧಾರವಾಗಿಟ್ಟುಕೊಳ್ಳಬೇಕು ಎಂದು ಎಸ್‌ಐಆರ್‌ ವಿರೋಧಿ ಒಕ್ಕೂಟ ಒತ್ತಾಯಿಸಿದೆ.

ಕರ್ನಾಟಕದಲ್ಲಿ ಎಸ್‌ಐಆರ್‌ (SIR) ಪ್ರಕ್ರಿಯೆಯ ಮೂಲಕ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ಅರ್ಹ ಮತದಾರರನ್ನು ಗುರುತಿಸಲು ಸ್ವತಂತ್ರ ಸಾಮಾಜಿಕ ಪರಿಶೋಧನೆ ನಡೆಸಿ, 2025ರ ಮತಪಟ್ಟಿಯನ್ನು ಪರಿಷ್ಕರಿಸಿ, ಆ ಪರಿಷ್ಕೃತ ಮತಪಟ್ಟಿಯ ಆಧಾರದಲ್ಲಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಬೇಕು ಎಂದು ಎಸ್‌ಐಆರ್‌ ವಿರೋಧಿ ಒಕ್ಕೂಟ ಆಗ್ರಹಿಸಿದೆ.

- Advertisement -

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ನಾಯಕ ನೂರ್ ಶ್ರೀಧರ್, ರಾಜ್ಯ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದಾರೆ. ಎಸ್‌ಐಆರ್‌ ಅಂತಿಮ ಪಟ್ಟಿಯನ್ನು ತಿರಸ್ಕರಿಸಬೇಕು, ಮತದಾರರ ಪಟ್ಟಿಯಿಂದ ಕೈಬಿಡಲಾದ ಮತ್ತು ನೋಂದಣಿಯಾಗದೆ ಉಳಿದಿರುವ ಅರ್ಹ ಮತದಾರರನ್ನು ಗುರುತಿಸಲು ವ್ಯವಸ್ಥಿತ ಸಾಮಾಜಿಕ ಪರಿಶೋಧನೆ ನಡೆಸಬೇಕು ಹಾಗೂ ಆ ಪರಿಶೋಧನೆಯ ಮೂಲಕ ಪರಿಷ್ಕರಿಸಲಾದ 2025ರ ಮತದಾರರ ಪಟ್ಟಿಯನ್ನು ಸ್ಥಳೀಯ ಚುನಾವಣೆಗಳಿಗೆ ಆಧಾರವಾಗಿಸಿಕೊಳ್ಳಬೇಕು. ಇವು ಒಕ್ಕೂಟದ ಬೇಡಿಕೆಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

“ಒಂದೆಡೆ ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್‌ ಅಂತಿಮ ಪಟ್ಟಿಯನ್ನು ಆಧರಿಸಿ ಚುನಾವಣಾ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದೆ. ಮತ್ತೊಂದೆಡೆ ಅದೇ ಪಟ್ಟಿಯನ್ನು ಸ್ಥಳೀಯ ಚುನಾವಣೆಗಳಿಗೆ ಬಳಸಬಹುದೇ ಎಂಬ ಪ್ರಶ್ನೆಯನ್ನು ಸುಪ್ರೀಂ ಕೋರ್ಟ್‌ ಮುಂದಿಟ್ಟಿದೆ. ಈ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆಯಬೇಕು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಚಾರದಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳುವುದು ಅಗತ್ಯವಾಗಿದೆ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಇದೇ ವೇಳೆ, “ಎಸ್‌ಐಆರ್‌ ವಿಚಾರದಲ್ಲಿ ಕರ್ನಾಟಕದ ಕೆಲವು ಕಾಂಗ್ರೆಸ್‌ ಸಚಿವರು ದ್ವಂದ್ವ ನಿಲುವು ಅನುಸರಿಸುತ್ತಿದ್ದಾರೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ನಾಯಕತ್ವ ಎಸ್‌ಐಆರ್‌ ಪ್ರಕ್ರಿಯೆಯನ್ನು ವಿರೋಧಿಸುತ್ತಿದ್ದರೂ, ರಾಜ್ಯದ ಕೆಲವು ಸಚಿವರು ತಮ್ಮ ಕ್ಷೇತ್ರಗಳ ರಾಜಕೀಯ ಲಾಭ-ನಷ್ಟಗಳ ಆಧಾರದಲ್ಲಿ ಮತಪಟ್ಟಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ಒಕ್ಕೂಟದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕೆಲವು ಸಚಿವರಿಗೆ ತಮ್ಮ ಕ್ಷೇತ್ರದಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದರಿಂದ ರಾಜಕೀಯ ಲಾಭವಾಗಬಹುದು. ಈ ಲೆಕ್ಕಾಚಾರದಲ್ಲಿ ಎಸ್‌ಐಆರ್‌ ಅಂತಿಮ ಪಟ್ಟಿಯನ್ನು ಉಳಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಇಂತಹ ನಿಲುವನ್ನು ಕಾಂಗ್ರೆಸ್‌ ಪಕ್ಷದ ನಾಯಕತ್ವ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒಕ್ಕೂಟ ಆಗ್ರಹಿಸಿದೆ.

ಈ ಲೇಖನ ಓದಿದ್ದೀರಾ?: ಕರ್ನಾಟಕ SIR | ರಾಜ್ಯದಲ್ಲಿ ಏಕಿಲ್ಲ SSR? ಚುನಾವಣಾ ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳ ಕಿಡಿ; ಹೋರಾಟ ತೀವ್ರ

ಡಿಸೆಂಬರ್‌ 1ರಿಂದ ಜನವರಿ 1ರವರೆಗೆ ಎಸ್‌ಎಸ್‌ಆರ್‌ ನಡೆಸಲು ಚುನಾವಣಾ ಆಯೋಗ ಮುಂದಾಗಿರುವುದನ್ನೂ ಒಕ್ಕೂಟ ಪ್ರಶ್ನಿಸಿದೆ. “ಎಸ್‌ಐಆರ್‌ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎನ್ನುತ್ತಿರುವ ಆಯೋಗ, ಕೈಬಿಟ್ಟ ಮತದಾರರನ್ನು ಮತ್ತೆ ಸೇರ್ಪಡೆಗೊಳಿಸಲು ಎಸ್‌ಎಸ್‌ಆರ್‌ ನಡೆಸುವ ಅಗತ್ಯವೇನು? ಹಿಂದಿನ ಪರಿಷ್ಕರಣೆಯಲ್ಲಿ ಉಂಟಾಗಿರುವ ದೋಷಗಳನ್ನು ಗುರುತಿಸದೆ ಮತ್ತೊಂದು ಪರಿಷ್ಕರಣೆ ನಡೆಸುವುದರಿಂದ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ. ಮೊದಲು ಕೈಬಿಟ್ಟ ಮತದಾರರ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು” ಎಂದು ಒಕ್ಕೂಟದ ನಾಯಕರು ಒತ್ತಾಯಿಸಿದ್ದಾರೆ.

“ರಾಜ್ಯ ಸರ್ಕಾರವು ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಅರ್ಹ ಮತದಾರರ ಹಕ್ಕುಗಳ ರಕ್ಷಣೆಗೆ ಸ್ಪಷ್ಟ ಕ್ರಮಗಳನ್ನು ರೂಪಿಸಬೇಕು” ಎಂದು ಒಕ್ಕೂಟ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ವೀರಸಂಗಯ್ಯ, ಶ್ರೀಮತಿ, ಅಮ್ಜದ್ ಪಾಶಾ, ನಾಗೇಶ್ ಅರಳಕುಪ್ಪೆ, ಹೈದರ್ ಬೇಗ್ ಸೇರಿದಂತೆ ಹಲವರು ಇದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

GTA ಶೈಲಿಯಲ್ಲಿ ಪ್ರಗತಿ ಪಟ್ಟಿ ಹಂಚಿಕೊಂಡ ಮೋದಿ; ಜೈರಾಮ್ ರಮೇಶ್ ಟೀಕೆ

ಜಾಗತಿಕವಾಗಿ ಭಾರೀ ಕುತೂಹಲ ಮೂಡಿಸಿದ್ದ ಜನಪ್ರಿಯ ವಿಡಿಯೋ ಗೇಮ್ 'ಗ್ರ್ಯಾಂಡ್ ಥೆಫ್ಟ್...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ ನ್ಯಾಯ?

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ...

BJP ಬೆಂಬಲಿಗರಿಂದ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ; ಪೊಲೀಸರ ವಿರುದ್ಧವೂ ಮೊಯಿತ್ರಾ ಗಂಭೀರ ಆರೋಪ!

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಬಿಜೆಪಿ ಬೆಂಬಲಿಗರ ಗುಂಪೊಂದು ತಮ್ಮ...

ನಿವೃತ್ತಿ ನಂತರವೂ EPF ಖಾತೆಯಲ್ಲೇ ಹಣ ಉಳಿಸಿ ತಿಂಗಳ ಆದಾಯ ಪಡೆಯುವ ಅವಕಾಶ: ಹೊಸ ಯೋಜನೆ ಪ್ರಸ್ತಾಪ!

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ನಿವೃತ್ತಿಯ ನಂತರದ...