ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಂ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

Date:

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ ಮುಂದುವರೆದಿದ್ದು, ಇದೇ ಅವಧಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸಲು ಬಳಸುವ ನಮೂನೆ-7 ಫಾರಂ ಇದೀಗ ಮುಸ್ಲಿಂ ಮತದಾರರ ಮತಗಳನ್ನು ಅಕ್ರಮವಾಗಿ ನೂರಾರು ಅರ್ಜಿಗಳನ್ನು ಸಲ್ಲಿಕೆಯಾಗಿರುವುದು ಬೀದರ್‌ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾಗಿದೆ.

- Advertisement -

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಈಶ್ವರ ಖಂಡ್ರೆ ಮತ್ತು ಅವರ ಪುತ್ರ ಬೀದರ್‌ ಲೋಕಸಭಾ ಸದಸ್ಯ ಸಾಗರ್‌ ಖಂಡ್ರೆ ಅವರು ಪ್ರತಿನಿಧಿಸುವ ಭಾಲ್ಕಿ ವಿಧಾನಸಭಾ ಕ್ಷೇತ್ರದ ವಿವಿಧ ಬೂತ್‌ಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಅರ್ಜಿಗಳನ್ನು (ನಮೂನೆ-7) ಅಕ್ರಮವಾಗಿ ಬಿಎಲ್‌ಗೆಗಳಿಗೆ ಸಲ್ಲಿಕೆಯಾಗಿದ್ದು, ಇನ್ನೊಂದು ವಿಚಿತ್ರವೆಂದರೆ ಕೆಲವೇ ವ್ಯಕ್ತಿಗಳು ಸೆ.22ರಂದು ಒಂದೇ ದಿನ ನೂರಾರು ಅರ್ಜಿಗಳು ಸಲ್ಲಿಸಿರುವ ಮಾಹಿತಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಜಿಲ್ಲೆಯಲ್ಲಿ ಒಟ್ಟು 12,24,797 ಮತದಾರರು ಇದ್ದು, ಈ ಪೈಕಿ 6,34,295 ಪುರುಷರು, 5,90,470 ಮಹಿಳೆಯರು ಹಾಗೂ 32 ಲೈಂಗಿಕ ಅಲ್ಪಸಂಖ್ಯಾತ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 32,672 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಈ ಪೈಕಿ 32,512 ಮಂದಿಗೆ ನೋಟಿಸ್ ತಲುಪಿಸಲಾಗಿದೆ. ಇನ್ನೂ 160 ಮಂದಿಗೆ ನೋಟಿಸ್‌ ನೀಡುವುದು ಬಾಕಿ ಇದೆ. ಈವರೆಗೆ 22, 771 ನೋಟಿಸ್‌ಗಳ ಪರಿಶೀಲನೆ ನಡೆಸಿ ಇತ್ಯರ್ಥಪಡಿಸಲಾಗಿದೆ.

ಆಗಸ್ಟ್ 24ರಿಂದ‌ ಸೆ.23ರ ಒಳಗಾಗಿ ಸಲ್ಲಿಕೆಯಾದ ಆಕ್ಷೇಪಣೆ/ಅರ್ಜಿಗಳನ್ನು ಅಕ್ಟೋಬರ್ 10ರ ಒಳಗಾಗಿ ವಿಲೇವಾರಿ ಮಾಡಲಾಗುತ್ತದೆ, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಬೀದರ್‌ನಲ್ಲೇ ಹೆಚ್ಚು ನಮೂನೆ-7

ಸೆ.16ರಿಂದ ಸೆ.24ರವರೆಗೆ ಕರ್ನಾಟಕ ರಾಜ್ಯದಲ್ಲಿ ಒಟ್ಟು 19,48,164 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗವು ಸೆ.25ರಂದು ಅಂಕಿ-ಅಂಶಗಳ ಸಹಿತ ಮಾಹಿತಿ ಪ್ರಕಟಿಸಿದೆ. ಇದರಲ್ಲಿ ನಮೂನೆ-6, ನಮೂನೆ-6A, ನಮೂನೆ-7 ಹಾಗೂ ನಮೂನೆ-8 ಸೇರಿವೆ. ಈ ಪೈಕಿ ಇದೇ ವೇಳೆ ಬೀದರ್‌ ಜಿಲ್ಲೆಯಲ್ಲಿ 26,645 ಫಾರ್ಮ್‌ ನಂ-6, ನಮೂನೆ-6A 15, ಫಾರ್ಮ್ ನಂ.7 ಬರೋಬ್ಬರಿ 5,154 ಸ್ವೀಕರಿಸಲಾಗಿದೆ. ಫಾರ್ಮ್ ನಂ.8, 25,616 ಸ್ವೀಕರಿಸಲಾಗಿದೆ. ಒಟ್ಟು 57,430 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಕರಡು ಮತದಾರರ ಪಟ್ಟಿಯ ಹಕ್ಕು ಮತ್ತು ಆಕ್ಷೇಪಣೆಗೆ ಸಂಬಂಧಿಸಿದಂತೆ ಕಳೆದ ಆಗಸ್ಟ್‌ 24ರಿಂದ ಸೆ.22ರರವರೆಗೆ ಬೀದರ್‌ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಸೇರಿ 2,384 ಅರ್ಜಿಗಳು (ನಮೂನೆ-7) ಸ್ವೀಕೃತಗೊಂಡಿದ್ದವು. ಆದರೆ, ಈ ಪೈಕಿ ಭಾಲ್ಕಿ ವಿಧಾನಸಭಾ ಕ್ಷೇತ್ರ ಒಂದರಲ್ಲೇ 2,285 ನಮೂನೆ-7 ಸ್ವೀಕೃತವಾಗಿದ್ದು ವಿಶೇಷ. ಸೆ.16 ರಿಂದ ಸೆ.24ರವರೆಗಿನ ಅಂಕಿ-ಅಂಶಗಳು ಗಮನಿಸಿದರೆ ಬೀದರ್‌ ಜಿಲ್ಲೆಯಲ್ಲಿ (ನಮೂನೆ-7) ಆಕ್ಷೇಪಣೆ ಅರ್ಜಿಗಳು ಒಟ್ಟು 5,154 ಸ್ವೀಕೃತವಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ನಮೂನೆ-7 (ಅರ್ಜಿ) ಸಲ್ಲಿಕೆಯಾಗಿರುವುದು ಬೀದರ್‌ ಜಿಲ್ಲೆಯಲ್ಲಿ, ಅದರಲ್ಲೂ ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಎಂಬುದು ಗಮನಾರ್ಹ.

ಭಾಲ್ಕಿ ಕ್ಷೇತ್ರದ ಬೂತ್‌ ಸಂಖ್ಯೆ ಹೆಸರಿನಲ್ಲಿ ಹಲವುಮುಸ್ಲಿಂ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ನಮೂದಿಸಲಾದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದರೆ, ದೂರದ ಪಂಜಾಬ್‌ನಲ್ಲಿನ ಜಲಂಧರ್‌ನ ಯೂಟ್ಯೂಬರ್‌ ಒಬ್ಬರಿಗೆ ಕರೆ ಹೋಯಿತು. ‘ನಿನ್ನೆಯಿಂದ ಈ ರೀತಿ 20ಕ್ಕೂ ಹೆಚ್ಚು ಕರೆಗಳು ಬರುತ್ತಿವೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಮಗ್ರ ತನಿಖೆಗೆ ವೆಲ್ಫೇರ್ ಪಾರ್ಟಿ ಒತ್ತಾಯ

ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಫಾರಂ-7 ಅರ್ಜಿಗಳನ್ನು ವ್ಯಾಪಕವಾಗಿ ಸಲ್ಲಿಸಲಾಗಿರುವ ಕುರಿತು ಗಂಭೀರ ಆರೋಪಗಳು ಕೇಳಿ ಬಂದಿದ್ದು, ಈ ಪ್ರಕರಣದ ಬಗ್ಗೆ ಚುನಾವಣಾ ಆಯೋಗ ಹಾಗೂ ಜಿಲ್ಲಾ ಆಡಳಿತವು ತಕ್ಷಣ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೇರ್ ಹುಸೈನ್ ಆಗ್ರಹಿಸಿದ್ದಾರೆ.

WhatsApp Image 2026 09 25 at 4.46.06 PM
ಬೀದರ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೇರ್ ಹುಸೈನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಭಾಲ್ಕಿ ಮತ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನೈಜ ಮತದಾರರು ಹೆಸರನ್ನು ಅಳಿಸಲು ನಮೂನೆ-7 ಭರ್ತಿ ಮಾಡಿ ಬಿಎಲ್‌ಒಗಳಿಗೆ ನೀಡಲಾಗಿರುವ ಬಗ್ಗೆ ಖುದ್ದಾಗಿ ಭಾಲ್ಕಿ ಕೇತ್ರದಲ್ಲಿ ಹೋದ ವೇಳೆ ಗೊತ್ತಾಗಿದೆ ಎಂದು ಗಂಭೀರವಾಗಿ ಆರೋಪಿಸಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆಯ ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿದ್ದರೆ, ಅರ್ಜಿಗಳ ಹಿಂದಿನ ಕಾರಣಗಳು, ಅರ್ಜಿದಾರರ ವಿವರಗಳು ಮತ್ತು ಸಂಬಂಧಿತ ದಾಖಲೆಗಳನ್ನು ಪಾರದರ್ಶಕವಾಗಿ ಪರಿಶೀಲಿಸುವ ಅಗತ್ಯವಿದೆ. ಪ್ರಜಾಪ್ರಭುತ್ವ ಮತ್ತು ನಾಗರಿಕರ ಬೆನ್ನಿಗೆ ಚೂರಿ ಹಾಕಿರುವ ರಾಜ್ಯ ಮುಖ್ಯಚುನಾವಣಾಧಿಕಾರಿ ಗ್ಯಾನೇಶಕುಮಾರ ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಯಾವುದೇ ಅರ್ಹ ಮತ್ತು ನೈಜ ಮತದಾರನ ಹೆಸರನ್ನು ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಬಾರದು. ವಿಶೇಷವಾಗಿ ಯಾವುದೇ ಒಂದು ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡುವ ಪ್ರಯತ್ನ ನಡೆದಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಅವರು ಬೀದರ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಭಾಲ್ಕಿ ಕ್ಷೇತ್ರದ ಮತಗಟ್ಟೆ ಸಂಖ್ಯೆ 129, 107, 111, 112, 114 ಹಾಗೂ 115ರಲ್ಲಿ ಮತದಾರರ ಮತ ಹಕ್ಕು ಅಳಿಸಿ ಹಾಕಲು ನೂರಾರು ಅರ್ಜಿಗಳು ಸಲ್ಲಿಸಲಾಗಿದೆ. ಇದರಲ್ಲಿ ʼಶಾಶ್ವತ ಸ್ಥಳಾಂತರʼ ಎಂಬುದು ಹೆಚ್ಚಿನ ಅರ್ಜಿಗಳಲ್ಲಿ ನಮೂದಿಸಲಾಗಿದ್ದು, ಬಹುತೇಕ ಅರ್ಜಿಗಳು ಸೆ.22ರಂದು ಸಲ್ಲಿಕೆಯಾಗಿರುವ ಮಾಹಿತಿ ಲಭ್ಯವಿದೆ. ಅರ್ಜಿಗಳಲ್ಲಿ ಮುಸ್ಲಿಂ ಮತದಾರರ ಹೆಸರೇ ಅಳಿಸುವ ಷಡ್ಯಂತ್ರ ನಡೆದಿದೆ. ಅಲ್ಲದೆ ಭಾಲ್ಕಿ ಕ್ಷೇತ್ರದ ವಲಯ ವ್ಯಾಪ್ತಿಯ ಕೆಲ ಬೂತ್‌ಗಳಲ್ಲಿ ಮುಸ್ಲಿಂ ಮತದಾರರ ಹೆಸರು ಅಳಿಸುವ ಪ್ರಯತ್ನವೂ ನಡೆದಿದೆ ಎಂದು ಆರೋಪಿಸಿದರು.

ಇದನ್ನೂ ಓದಿ : ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

“ಯಾವುದೇ ಮತದಾರರು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಬಿಎಲ್‌ಒಗಳಿಗೆ ಸಲ್ಲಿಕೆಯಾದ ಆಕ್ಷೇಪಣೆಯ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ, ವಿಚಾರಣೆ ನಡೆಸಲಾಗುವುದು. ಇದರಲ್ಲಿ ಏನಾದರೂ ಲೋಪದೋಷ, ಅಕ್ರಮ ಆಗಿರುವುದನ್ನು ಕಂಡು ಬಂದರೆ ಪರಿಶೀಲಿಸಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ” ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ʼಈದಿನʼ ಜೊತೆ ಮಾತನಾಡಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

AI ಕಲಿಕೆ ಪ್ರತ್ಯೇಕ ವಿಷಯವಾಗದೆ; ತೃತೀಯ ಭಾಷೆಗೆ ಪರ್ಯಾಯವಾಗಿ ಬೇಕೆ! ತಜ್ಞರು ಹೇಳುವುದೇನು?

NSQF ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ವೃತ್ತಿಪರ AI ವಿಷಯವನ್ನು ಆಯ್ಕೆ ಮಾಡಿಕೊಂಡರೆ,...