SIR | ಮತಪಟ್ಟಿಯಲ್ಲಿ ಬಂತು ‘ಭಗತ್ ಸಿಂಗ್‌’ ಫೋಟೋ; ಆಯೋಗದ ಪ್ರಮಾದ ಮತ್ತೊಮ್ಮೆ ಬಹಿರಂಗ

Date:

ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು ರಾಷ್ಟ್ರಮಟ್ಟದಲ್ಲಿ ಭಾರೀ ರಾಜಕೀಯ ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ.

- Advertisement -

ಲೂಧಿಯಾನದ ಮತಗಟ್ಟೆ 38ರ, ಕ್ರಮ ಸಂಖ್ಯೆ 422ರಲ್ಲಿ ನಮೂದಾಗಿರುವ ಅಮನ್ ಕುಮಾರ್ ಎಂಬ ಮತದಾರರ ಹೆಸರಿದೆ. ಆದರೆ, ಭಾವಚಿತ್ರವು ಅಮನ್ ಕುಮಾರ್ ಬದಲಾಗಿ, ಕ್ರಾಂತಿಕಾರಿ ಭಗತ್ ಸಿಂಗ್ ಅವರ ಫೋಟೋ ಮುದ್ರಿಸಲ್ಪಟ್ಟಿದೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮತದಾರರ ಹೆಸರು ಅಳಿಸುವಿಕೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕಾನೂನುಬಾಹಿರವಾಗಿ ಎಸ್‌ಐಆರ್‌ ಜಾರಿಗೊಳಿಸಿ, ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ. ಈ ಕೃತ್ಯದ ಹಿಂದೆ ಮೋದಿ-ಶಾ ಜೋಡಿ ಷಡ್ಯಂತ್ರವಿದೆ ಎಂದು ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲೇ ಆಯೋಗದ ಈ ಎಡವಟ್ಟು ಬೆಳಕಿಗೆ ಬಂದಿದೆ. ಇದು ಚುನಾವಣಾ ಆಯೋಗದ ನಿಖರತೆ ಮತ್ತು ವಿಶ್ವಾಸಾರ್ಹತೆ ಕುರಿತಾದ ಗಂಭೀರ ಪ್ರಶ್ನೆಗಳಿಗೆ ಪುಷ್ಠಿ ನೀಡಿದೆ.

image 209

ಮತಪಟ್ಟಿಯಲ್ಲಿ ಭಗತ್ ಸಿಂಗ್ ಚಿತ್ರ ಇರುವುದು ಬೆಳಕಿಗೆ ಬಂದ ಬಳಿಕ ವಿಪಕ್ಷಗಳು ಚುನಾವಣಾ ಆಯೋಗವನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡಿವೆ. ಲೂಧಿಯಾನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಶಾಸಕ ಸಂಜಯ್ ತಲ್ವಾರ್ ಅವರು, “ಇದು ಕೇವಲ ಒಂದೇ ಒಂದು ಬೂತ್‌ನಲ್ಲಿನ ಯಡವಟ್ಟು ಅಲ್ಲ. ಇಡೀ ಕ್ಷೇತ್ರದ ಸುಮಾರು 235ಕ್ಕೂ ಹೆಚ್ಚು ಬೂತ್‌ಗಳ ಮತದಾರರ ಪಟ್ಟಿಯಲ್ಲಿ ವ್ಯಾಪಕವಾದ ಅಕ್ರಮಗಳು ಅಥವಾ ಲೋಪಗಳು ನಡೆದಿರುವ ಸಂಶಯವಿದೆ” ಎಂದು ಆರೋಪಿಸಿದ್ದಾರೆ. ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಯೋಗವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಜಾಪ್ರಭುತ್ವದ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ. ಇಂತಹ ಪ್ರಮಾದಗಳಿಗೆ ಹೊಣೆ ಯಾರು” ಎಂದು ಪ್ರಶ್ನಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಜತಿಂದರ್ ಖಂಗುರಾ ಕೂಡ ವಾಗ್ದಾಳಿ ನಡೆಸಿದ್ದು, “ಚುನಾವಣಾ ಆಯೋಗದ ಅಧಿಕಾರಿಗಳು ಕನಿಷ್ಠ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಭಗತ್ ಸಿಂಗ್ ಅವರನ್ನೂ ಬಿಟ್ಟಿಲ್ಲ, ಇದು ಕೇವಲ ತಾಂತ್ರಿಕ ದೋಷವಲ್ಲ ಬದಲಾಗಿ ದೊಡ್ಡ ಮಟ್ಟದ ಹಗರಣ” ಎಂದು ದೂರಿದ್ದಾರೆ.

ತಮ್ಮ ಪ್ರಮಾದಕ್ಕೆ ಸ್ಪಷ್ಟನೆ ನೀಡಿರುವ ಲೂಧಿಯಾನ ಜಿಲ್ಲಾ ಚುನಾವಣಾ ಕಚೇರಿ ಮತ್ತು ಉಪ ಆಯುಕ್ತ ಹಿಮಾನ್ಶು ಜೈನ್, “ಹಳೆಯ ಮತದಾರರ ಪಟ್ಟಿಯಲ್ಲಿದ್ದ ಈ ತಪ್ಪಾದ ಫೋಟೋವೇ ಕಳೆದ ಆಗಸ್ಟ್ 13ರಂದು ಪ್ರಕಟಗೊಂಡಿದ್ದ ಕರಡು ಪಟ್ಟಿಯಲ್ಲೂ ಮುಂದುವರಿದುಕೊಂಡು ಬಂದಿದೆ. ಈ ತಾಂತ್ರಿಕ ದೋಷವನ್ನು ಗಮನಿಸಿ ಸರಿಪಡಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು...

ಅ.12ರಂದು ಸುಪ್ರೀಂ ಕೋರ್ಟ್ ಕಡೆ ರಾಹುಲ್ ಗಾಂಧಿ ನೇತೃತ್ವದ ನಡೆ: ಸಿಜೆಐ ಭೇಟಿಗೆ ‘ಇಂಡಿಯಾ’ ಒಕ್ಕೂಟ ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...