‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಹೆಸರು, ದಾಖಲೆಗಳು ಹಾಗೂ ಅರ್ಹತೆಯ ಪರಿಶೀಲನೆ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ಮತ್ತು ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲಿ, SIR ವಿರೋಧಿ-ಕರ್ನಾಟಕ ಸಂಘಟನೆ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದೆ.

- Advertisement -

ಇದರ ಭಾಗವಾಗಿ ಚಿಂತಕ, ಹೋರಾಟಗಾರ ಹಾಗೂ ನಟ ಪ್ರಕಾಶ್ ರಾಜ್ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, SIR ಪ್ರಕ್ರಿಯೆಯಿಂದ ಸಮಸ್ಯೆ ಎದುರಿಸುತ್ತಿರುವ ಮತದಾರರನ್ನು ನೇರವಾಗಿ ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ SIR ಬಾಧಿತರು ಹಾಗೂ ಸಂತ್ರಸ್ತ ಮತದಾರರೊಂದಿಗೆ ಪ್ರಕಾಶ್ ರಾಜ್ ಸಂವಾದ ನಡೆಸಲಿದ್ದು, ಅವರ ಸಮಸ್ಯೆಗಳು, ದಾಖಲೆಗಳ ಪರಿಶೀಲನೆ ವೇಳೆ ಎದುರಾದ ತೊಂದರೆಗಳು ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ಆತಂಕಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕರ್ನಾಟಕದಲ್ಲಿ SIR ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನೋಟಿಸ್‌ಗಳ ವಿತರಣೆ ಹಾಗೂ ಹಕ್ಕು-ಆಕ್ಷೇಪಣೆಗಳ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ ವರೆಗೆ ಮುಂದುವರಿಯಲಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 27ರಂದು ಪ್ರಕಟಿಸುವ ವೇಳಾಪಟ್ಟಿ ಇದೆ.

ಕರ್ನಾಟಕದ ಕರಡು ಪಟ್ಟಿಯಲ್ಲಿ ಹಿಂದಿನ ಪಟ್ಟಿಯಲ್ಲಿದ್ದ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳು ವಿವಿಧ ಕಾರಣಗಳಿಂದ ಕರಡು ಪಟ್ಟಿಯಲ್ಲಿ ಕಾಣಿಸದಿರುವುದು ವರದಿಯಾಗಿದೆ. ಇಂತಹ ಮತದಾರರನ್ನು ‘Absent, Shifted, Dead, Duplicate or Others’ (ASDDO) ವಿಭಾಗದಲ್ಲಿ ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದರಿಂದ ಹೆಸರು ಕಾಣೆಯಾಗಿರುವ ಮತದಾರರು ತಮ್ಮ ಹೆಸರು ಯಾವ ಕಾರಣಕ್ಕೆ ಪಟ್ಟಿಯಲ್ಲಿ ಇಲ್ಲ ಎಂಬುದನ್ನು ಪರಿಶೀಲಿಸುವುದು ಹಾಗೂ ಅಗತ್ಯವಿದ್ದಲ್ಲಿ ನಿಗದಿತ ಪ್ರಕ್ರಿಯೆಯ ಮೂಲಕ ಹಕ್ಕು ಮಂಡಿಸುವುದು ಮಹತ್ವ ಪಡೆದಿದೆ.

SIR ಪ್ರಕ್ರಿಯೆಯ ಉದ್ದೇಶ ಅರ್ಹ ಮತದಾರರನ್ನು ಖಚಿತಪಡಿಸುವುದು ಮತ್ತು ಮೃತರು, ಸ್ಥಳಾಂತರಗೊಂಡವರು ಅಥವಾ ಒಂದಕ್ಕಿಂತ ಹೆಚ್ಚು ಕಡೆ ನೋಂದಾಯಿತರಾಗಿರುವವರಂತಹ ತಪ್ಪು ನಮೂದುಗಳನ್ನು ಸರಿಪಡಿಸುವುದೆಂದು ಚುನಾವಣಾ ಆಯೋಗ ತಿಳಿಸಿದೆ. ಅದೇ ಸಮಯದಲ್ಲಿ, ನಿಜವಾದ ಅರ್ಹ ಮತದಾರರ ಹೆಸರು ಯಾವುದೇ ಕಾರಣಕ್ಕೂ ತಪ್ಪಾಗಿ ಕೈಬಿಡದಂತೆ ಪರಿಶೀಲನೆ ಮತ್ತು ಆಕ್ಷೇಪಣೆಗಳ ಪ್ರಕ್ರಿಯೆ ಪರಿಣಾಮಕಾರಿಯಾಗಿರಬೇಕು ಎಂಬುದು ಸಾರ್ವಜನಿಕವಾಗಿ ವ್ಯಕ್ತವಾಗುತ್ತಿರುವ ಪ್ರಮುಖ ಕಾಳಜಿಯಾಗಿದೆ.

ವಿಶೇಷವಾಗಿ ವಯೋವೃದ್ಧರು, ಬಡವರು, ವಲಸೆ ಕಾರ್ಮಿಕರು, ದಾಖಲೆಗಳ ಕೊರತೆ ಇರುವವರು, ಗ್ರಾಮೀಣ ಪ್ರದೇಶದ ಜನರು ಹಾಗೂ ಡಿಜಿಟಲ್ ವ್ಯವಸ್ಥೆಗಳ ಬಳಕೆಯಲ್ಲಿ ಪರಿಣತಿ ಇಲ್ಲದವರಿಗೆ SIR ಪ್ರಕ್ರಿಯೆ ಸವಾಲಾಗಬಹುದು ಎಂಬ ಆತಂಕ ವ್ಯಕ್ತವಾಗುತ್ತಿದೆ. SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಅಕ್ರಮಗಳು ಮತ್ತು ಲೋಪಗಳು ಬೆಳಕಿಗೆ ಬಂದಿವೆ ಎಂದು SIR ವಿರೋಧಿ-ಕರ್ನಾಟಕ ಸಂಘಟನೆ ಹಾಗೂ ಅದರ ಬೆಂಬಲಿಗರು ಆರೋಪಿಸಿದ್ದಾರೆ. ಮತದಾರರ ಹಕ್ಕಿಗೆ ಧಕ್ಕೆಯಾಗುವಂತಹ ಯಾವುದೇ ಕ್ರಮ ನಡೆಯಬಾರದು ಮತ್ತು ಹೆಸರು ಕೈಬಿಡುವ ಮುನ್ನ ಸಂಬಂಧಪಟ್ಟ ಮತದಾರರಿಗೆ ಸಮರ್ಪಕ ಮಾಹಿತಿ, ನೋಟಿಸ್ ಹಾಗೂ ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಪ್ರಕ್ರಿಯೆಯನ್ನು ಸಂಘಟನೆಗಳು ‘ಮತದಾನದ ಹಕ್ಕಿನ ಮೇಲಿನ ಆತಂಕಕಾರಿ ಬೆಳವಣಿಗೆ’ ಎಂದು ಬಣ್ಣಿಸಿದ್ದು, ಇದರ ವಿರುದ್ಧ ಜನಜಾಗೃತಿ ಮತ್ತು ಸಂಘಟಿತ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

“SIR ಹಿಂದೆ ರಾಜಕೀಯ ಉದ್ದೇಶವಿದೆ” – ಬಡಗಲಪುರ ನಾಗೇಂದ್ರ

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, SIR ಜಾರಿಗೆ ರಾಜಕೀಯ ಉದ್ದೇಶವೂ ಇದೆ ಎಂಬುದು ತಮ್ಮ ಆರೋಪವಾಗಿದೆ ಎಂದು ಹೇಳಿದರು. “ಹಿಂದೂ ರಾಷ್ಟ್ರ ಘೋಷಣೆ ಮಾಡಬೇಕು ಎಂಬ ಉದ್ದೇಶದ ಭಾಗವಾಗಿಯೂ SIR ಜಾರಿಗೊಳಿಸಲಾಗುತ್ತಿದೆ” ಎಂದು ಅವರು ಆರೋಪಿಸಿದರು. ಕಾಂಗ್ರೆಸ್‌ನ್ನು ದೊಡ್ಡ ಪ್ರಜಾಪ್ರಭುತ್ವವಾದಿ ಪಕ್ಷ ಎಂದು ಹೇಳಲಾಗುತ್ತಿತ್ತು. ಆದರೆ, ಬಿಜೆಪಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಸವಾರಿ ಮಾಡುತ್ತಿದೆ ಎಂಬ ಟೀಕೆಯನ್ನೂ ಅವರು ಮಾಡಿದರು. ದೇಶದಲ್ಲಿ ನಡೆಯುತ್ತಿರುವ ವಿವಿಧ ಚಳವಳಿಗಳು ಮತ್ತಷ್ಟು ಗಟ್ಟಿಯಾಗುತ್ತಿವೆ. SIR ವಿಷಯದಲ್ಲಿಯೂ ಜನರ ಹಕ್ಕುಗಳ ರಕ್ಷಣೆಗೆ ವ್ಯಾಪಕ ಜನಾಂದೋಲನ ಅಗತ್ಯವಿದೆ ಎಂದು ಅವರು ಹೇಳಿದರು.

“ಬಾಧಿತ ಮತದಾರರನ್ನು ನೇರವಾಗಿ ಭೇಟಿ ಮಾಡಲಾಗುತ್ತಿದೆ”-ಡಾ. ಮ.ಪು. ಪೂರ್ಣಾನಂದ

SIR ವಿರೋಧಿ ಹೋರಾಟದ ಡಾ. ಮ.ಪು. ಪೂರ್ಣಾನಂದ ಮಾತನಾಡಿ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು SIRನಿಂದ ಸಮಸ್ಯೆ ಎದುರಿಸುತ್ತಿರುವ ಮತದಾರರನ್ನು ನೇರವಾಗಿ ಭೇಟಿ ಮಾಡುತ್ತಿದ್ದಾರೆ. ಬಾಧಿತ ಮತದಾರರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಮಾಧ್ಯಮಗಳ ಮೂಲಕ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಮೈಸೂರಿನ ಕಾರ್ಯಕ್ರಮವೂ ಇದೇ ಉದ್ದೇಶದ ಭಾಗವಾಗಿದೆ ಎಂದು ತಿಳಿಸಿದರು. ಮತದಾರರ ಪಟ್ಟಿಯಲ್ಲಿನ ಹೆಸರು ಕೇವಲ ಆಡಳಿತಾತ್ಮಕ ದಾಖಲೆ ಅಲ್ಲ; ಅದು ಚುನಾವಣೆಯಲ್ಲಿ ಮತ ಚಲಾಯಿಸುವ ನಾಗರಿಕರ ಹಕ್ಕಿಗೆ ನೇರವಾಗಿ ಸಂಬಂಧಿಸಿದೆ. ಆದ್ದರಿಂದ SIR ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನಿಖರತೆ, ಸೂಕ್ತ ನೋಟಿಸ್, ಆಕ್ಷೇಪಣೆ ಸಲ್ಲಿಸಲು ಅವಕಾಶ ಮತ್ತು ಬಾಧಿತ ಮತದಾರರ ಅಹವಾಲುಗಳಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಎಂಬುದು ಈ ಹೋರಾಟದ ಪ್ರಮುಖ ಬೇಡಿಕೆಯಾಗಿದೆ.

ಚುನಾವಣಾ ಆಯೋಗದ ಪ್ರಕ್ರಿಯೆಯ ಪ್ರಕಾರವೂ ಮತದಾರರ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವುದು, ದಾಖಲೆಗಳನ್ನು ಪರಿಶೀಲಿಸುವುದು ಮತ್ತು ಹಕ್ಕು-ಆಕ್ಷೇಪಣೆಗಳಿಗೆ ಅವಕಾಶ ನೀಡುವ ವ್ಯವಸ್ಥೆ ರೂಪಿಸಲಾಗಿದೆ. ಹೀಗಾಗಿ, SIR ಕುರಿತು ಉಂಟಾಗಿರುವ ಗೊಂದಲ ಮತ್ತು ಆತಂಕ ನಿವಾರಿಸಲು ಅಧಿಕೃತ ಮಾಹಿತಿ ಜನರಿಗೆ ಸುಲಭವಾಗಿ ತಲುಪಿಸುವುದು, ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಲು ನೆರವು ನೀಡುವುದು ಮತ್ತು ಅರ್ಹ ಮತದಾರರ ಹಕ್ಕು ರಕ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಈ ವಿಶೇಷ ವರದಿ ಓದಿದ್ದೀರಾ? ಶಾಲಾ ದಾಖಲೆ ಪರಿಶೀಲಿಸಿ; ತಿದ್ದುಪಡಿಗೆ ಶಾಲೆ-BEO ಹಂತದವರೆಗೆ ಇರುವ ಮಾರ್ಗವೇನು?

ಮೈಸೂರಿನ ಕಾರ್ಯಕ್ರಮ: ದಿನಾಂಕ: ಸೆಪ್ಟೆಂಬರ್ 29, 2026, ಮಂಗಳವಾರ ಸಮಯ: ಸಂಜೆ 5 ಗಂಟೆ ಸ್ಥಳ: ರಮಾ ಗೋವಿಂದ ರಂಗಮಂದಿರ, ನೃಪತುಂಗ ಕನ್ನಡ ಶಾಲಾ ಆವರಣ, ಸುಯೋಗ ಆಸ್ಪತ್ರೆ ಹತ್ತಿರ, ರಾಮಕೃಷ್ಣನಗರ, ಮೈಸೂರು.

ಸಂಪರ್ಕ:
ಡಾ. ಮ.ಪು. ಪೂರ್ಣಾನಂದ-9448754996
ಕೆ.ಆರ್. ಗೋಪಾಲಕೃಷ್ಣ-9448382333

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...