SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

Date:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ – ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ ನಿರ್ದಿಷ್ಟ ಸಮುದಾಯ ಮತ್ತು ವಿರೋಧಿಗಳ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಗಂಭೀರ ಯತ್ನಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ ‘ಫಾರ್ಮ್ 7’ ಅನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಮತದ ಹಕ್ಕನ್ನು ಕಸಿಯುವ ಕೃತ್ಯಗಳು ಬೆಳಕಿಗೆ ಬಂದಿವೆ.

- Advertisement -

ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಘಟನೆಯೊಂದು ಇಡೀ ವ್ಯವಸ್ಥೆಯನ್ನೇ ಬೆಚ್ಚಿಬೀಳಿಸಿದೆ. ಅಲ್ಲಿನ ಬೂತ್ ಮಟ್ಟದ ಅಧಿಕಾರಿಗೆ (ಬಿಎಲ್‌ಒ) ಸುಮಾರು 150ಕ್ಕೂ ಹೆಚ್ಚು ‘ಫಾರ್ಮ್-7’ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವು ನಿರ್ದಿಷ್ಟ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಕೋರುವ ಅರ್ಜಿಗಳಾಗಿದ್ದವು. ಆದರೆ, ಈ ಅರ್ಜಿಗಳನ್ನು ಬಿಎಲ್‌ಒ ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಅಳಿಸಿಹಾಕಲು ಕೋರಲಾದ ಹೆಸರುಗಳೆಲ್ಲವೂ ಆಯಾ ವಿಳಾಸಗಳಲ್ಲೇ ವರ್ಷಗಳಿಂದ ನಿರಂತರವಾಗಿ ವಾಸಿಸುತ್ತಿರುವ ಮತ್ತು ಬಿಎಲ್‌ಒಗೆ ವೈಯಕ್ತಿಕವಾಗಿ ಪರಿಚಿತರಾಗಿರುವ ಮುಸ್ಲಿಂ ಮತದಾರರದ್ದಾಗಿದ್ದವು. ಅತ್ಯಂತ ಆಘಾತಕಾರಿ ವಿಷಯವೆಂದರೆ, ಈ ರೀತಿ ಅರ್ಜಿಗಳನ್ನು ಸಲ್ಲಿಸಿದವರೆಲ್ಲರೂ ಕೇಂದ್ರದ ಆಡಳಿತಾರೂಢ ಬಿಜೆಪಿಯಿಂದ ನೇಮಕಗೊಂಡ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ). ಕೇವಲ ಒಬ್ಬ ಬಿಎಲ್‌ಒ ಮಾತ್ರವಲ್ಲದೆ, ನೆರೆಹೊರೆಯ ಕ್ಷೇತ್ರಗಳ ಅಧಿಕಾರಿಗಳಿಗೂ ಇದೇ ರೀತಿಯ ನೂರಾರು ಅರ್ಜಿಗಳು ಬಂದಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಈ ರೀತಿಯ ತಂತ್ರ ಕೇವಲ ಮಲ್ಲೇಶ್ವರಂ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಜ್ಯದ ಬಬಲೇಶ್ವರ, ಭಾಲ್ಕಿ, ಬೆಳಗಾವಿ ಉತ್ತರ ಹಾಗೂ ಬೈಲಹೊಂಗಲ ಸೇರಿದಂತೆ ಹತ್ತಾರು ಪ್ರಮುಖ ಕ್ಷೇತ್ರಗಳಲ್ಲಿ ಇದೇ ಮಾದರಿಯಲ್ಲಿ ಸದ್ದಿಲ್ಲದೆ ಮತಗಳನ್ನು ಅಳಿಸಿಹಾಕುವ ಅಕ್ರಮ ಯತ್ನಗಳು ವ್ಯಾಪಕವಾಗಿ ನಡೆಯುತ್ತಿವೆ.

ಎಸ್‌ಐಆರ್ ಜಾರಿಗೆ ಬಂದಾಗ – ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಲಾಗುತ್ತದೆ ಮತ್ತು ದೇಶದಲ್ಲಿರುವ ಅಕ್ರಮ ವಿದೇಶಿಯರು ಹಾಗೂ ಬಾಂಗ್ಲಾದೇಶಿ ವಲಸಿಗರನ್ನು ಹೊರಹಾಕಲಾಗುತ್ತದೆ ಎಂದು ಪ್ರತಿಪಾದಿಸಲಾಗಿತ್ತು. ಆದರೆ, ಈ ಪ್ರಕ್ರಿಯೆಯು ಮುಕ್ತಾಯದ ಹಂತಕ್ಕೆ ಬಂದರೂ ಒಬ್ಬನೇ ಒಬ್ಬ ಅಕ್ರಮ ವಿದೇಶಿ ಮತದಾರ ಪತ್ತೆಯಾಗಿಲ್ಲ. ಬದಲಾಗಿ, ಚುನಾವಣೆಯಲ್ಲಿ ನೇರವಾಗಿ ಗೆಲ್ಲಲು ಸಾಧ್ಯವಾಗದಿದ್ದಾಗ, ತಮಗೆ ಮತ ಹಾಕುವುದಿಲ್ಲ ಎಂಬ ಒಂದೇ ಕಾರಣಕ್ಕೆ ಮುಸ್ಲಿಂ ಮತದಾರರ ಹೆಸರುಗಳನ್ನು ಅನ್ಯಾಯವಾಗಿ ಮತಪಟ್ಟಿಯಿಂದ ಕಿತ್ತುಹಾಕುವ ದುಷ್ಟ ತಂತ್ರವನ್ನು ಹೆಣೆಯಲಾಗಿದೆ.

ಇದಕ್ಕೆ ಮುಖ್ಯ ಕಾರಣ ಚುನಾವಣಾ ಆಯೋಗವು ‘ಫಾರ್ಮ್ 7’ ನಿಯಮದಲ್ಲಿ ತಂದಿರುವ ತಿದ್ದುಪಡಿ. 2024ರವರೆಗೆ ಇದ್ದ ನಿಯಮಗಳ ಪ್ರಕಾರ, ಒಬ್ಬ ವ್ಯಕ್ತಿ ತಾನು ಬೇರೆಡೆಗೆ ಸ್ಥಳಾಂತರಗೊಂಡಾಗ ಮಾತ್ರ ತನ್ನ ಹಳೆಯ ಹೆಸರು ತೆಗೆಯಲು ‘ಫಾರ್ಮ್ 7’ ಹಾಕಬಹುದಿತ್ತು, ಅಥವಾ ಕುಟುಂಬದ ಸದಸ್ಯರು ಯಾರಾದರೂ ಮೃತಪಟ್ಟರೆ ಮಾತ್ರ ಅವರ ಕುಟುಂಬಸ್ಥರು ಅರ್ಜಿ ನೀಡಲು ಅವಕಾಶವಿತ್ತು. ಆದರೆ, ಪ್ರಸ್ತುತ ಚುನಾವಣಾ ಆಯೋಗ ಮಾಡಿರುವ ತಿದ್ದುಪಡಿಯಂತೆ, ವಿಧಾನಸಭಾ ಕ್ಷೇತ್ರದ ಯಾರು ಬೇಕಾದರೂ ಇನ್ನೊಬ್ಬರ ವಿರುದ್ಧ ‘ಫಾರ್ಮ್ 7’ ಅರ್ಜಿ ಸಲ್ಲಿಸಿ ಹೆಸರು ಡಿಲೀಟ್ ಮಾಡಲು ಕೋರಬಹುದು. ಈ ಕಾಯ್ದೆಯ ಲೋಪವನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿ ಏಜೆಂಟ್‌ಗಳು ತಮ್ಮ ವಿರೋಧಿ ಮತಗಳನ್ನು ಅಳಿಸಿಹಾಕುವ ಹೀನ ಕೃತ್ಯಕ್ಕೆ ಇಳಿದಿದ್ದಾರೆ.

ಮತ್ತೊಂದೆಡೆ, ಮತದಾರರ ಹೆಸರು ಮತ್ತು ವಿಳಾಸಗಳನ್ನು ಕೈಯಲ್ಲಿ ಬರೆಯುವ ಬದಲು, ಮುಂಚಿತವಾಗಿಯೇ ಮುದ್ರಿಸಲಾದ ‘ಪ್ರಿ-ಪ್ರಿಂಟೆಡ್’ ಫಾರ್ಮ್‌ಗಳನ್ನು ಬಳಸಿ ಅರ್ಜಿ ಸಲ್ಲಿಸಲಾಗುತ್ತಿದೆ. ಇಂತಹ ಪ್ರಿ-ಪ್ರಿಂಟೆಡ್ ಅರ್ಜಿಗಳನ್ನು ಆಯೋಗ ವಿತರಿಸಿಲ್ಲ ಮತ್ತು ಇವು ಸಂಪೂರ್ಣ ಕಾನೂನುಬಾಹಿರ ಎಂದು ಚುನಾವಣಾ ಆಯೋಗದ ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ.

ಹಾಗಿದ್ದರೆ, ರಾಜಕೀಯ ಪಕ್ಷದ ಏಜೆಂಟರಿಗೆ ಈ ಅಧಿಕೃತ ಡೇಟಾ ಸಿಕ್ಕಿದ್ದು ಹೇಗೆ, ಮತದಾರರ ಖಾಸಗಿ ಮಾಹಿತಿಯನ್ನು ಎಲ್ಲಿಂದ ಕದಿಯಲಾಯಿತು ಅಥವಾ ಆಯೋಗದ ಒಳಗಿನಿಂದಲೇ ಈ ಮಾಹಿತಿ ಸೋರಿಕೆಯಾಗಿದೆಯೇ ಎಂಬ ಬಲವಾದ ಅನುಮಾನಗಳು ಮೂಡಿವೆ. ಇದರ ಬಗ್ಗೆ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯಾಗಬೇಕಿದೆ.

ಈ ಲೇಖನ ಓದಿದ್ದೀರಾ?: SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಇದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಸಮಸ್ಯೆಯಲ್ಲ. ಇಂದು ಮುಸ್ಲಿಂ ಸಮುದಾಯದ ಹೆಸರುಗಳನ್ನು ಗುರಿಯಾಗಿಸಿಕೊಂಡು ಡಿಲೀಟ್ ಮಾಡಲಾಗುತ್ತಿದ್ದರೆ, ನಾಳೆ ದಲಿತರು ಅಥವಾ ಆಡಳಿತ ಪಕ್ಷದ ಅಕ್ರಮಗಳನ್ನು ಪ್ರಶ್ನಿಸುವ ಯಾವುದೇ ಸಾಮಾನ್ಯ ನಾಗರಿಕನ ಮೇಲೂ ಇದು ಮರುಕಳಿಸಬಹುದು. ಒಮ್ಮೆ ನಿಮ್ಮ ಹೆಸರು ಪಟ್ಟಿಯಿಂದ ಹೊರಬಿದ್ದರೆ, ನಿಮ್ಮ ದಿನನಿತ್ಯದ ಕೆಲಸ-ಕಾರ್ಯಗಳನ್ನು ಬಿಟ್ಟು ದಾಖಲೆಗಳನ್ನು ಹಿಡಿದು, ವಿಚಾರಣೆ ಎದುರಿಸಿ ‘ನಾನು ಭಾರತೀಯ’ ಎಂದು ಸಾಬೀತುಪಡಿಸಲು ವಾರಗಟ್ಟಲೆ ಅಲೆಯಬೇಕಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕೇ ಇಲ್ಲದಿದ್ದರೆ ನಾಗರಿಕನಿಗೆ ಯಾವುದೇ ದನಿ ಇರುವುದಿಲ್ಲ.

ವಾಸ್ತವವಾಗಿ, ‘ಫಾರ್ಮ್ 7’ ಅರ್ಜಿ ಸಲ್ಲಿಸುವಾಗ ಪ್ರತಿಯೊಬ್ಬರೂ ಒಂದು ಸ್ವಯಂ ಘೋಷಣೆ ನೀಡಬೇಕಿರುತ್ತದೆ. ಜನಪ್ರತಿನಿಧಿ ಕಾಯ್ದೆ 1950ರ (Representation of the People Act, 1950) ಸೆಕ್ಷನ್ 31ರ ಪ್ರಕಾರ, ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಯತ್ನಿಸಿದರೆ, ಅದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಸ್ಪಷ್ಟ ಅವಕಾಶವಿದೆ.

ಆದ್ದರಿಂದ, ಚುನಾವಣಾ ಆಯೋಗವು ತಕ್ಷಣವೇ ಕಾರ್ಯಪ್ರವೃತ್ತರಾಗಿ, ತಪ್ಪು ಮಾಹಿತಿ ನೀಡಿ ಫಾರ್ಮ್ 7 ಸಲ್ಲಿಸಿರುವ ಎಲ್ಲ ಬಿಎಲ್‌ಎಗಳ ವಿರುದ್ಧ ಈ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜೈಲು ಶಿಕ್ಷೆಗೆ ಗುರಿಪಡಿಸಬೇಕು. ಆ ಮೂಲಕ ಅಕ್ರಮ ಎಸಗುವವರಿಗೆ ತಕ್ಕ ಎಚ್ಚರಿಕೆಯ ಸಂದೇಶ ರವಾನಿಸಬೇಕು. ಅಂತೆಯೇ, ಪ್ರಜಾಪ್ರಭುತ್ವ ಮತ್ತು ನಮ್ಮ ಪ್ರಮುಖ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನೂ ದನಿಯೆತ್ತುವುದೂ ಅತ್ಯಗತ್ಯ.

ಪೋಸ್ಟ್ ಹಂಚಿಕೊಳ್ಳಿ:

ಮುತ್ತುರಾಜು
ಮುತ್ತುರಾಜು
ಪತ್ರಕರ್ತ, ಲೇಖಕ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೃಹತ್ ಸುಧಾರಣೆ: ಮೂರು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದ ಸರ್ಕಾರ!

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಆಧುನಿಕಗೊಳಿಸಲು, ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳನ್ನು ಇನ್ನಷ್ಟು ಸಶಕ್ತಗೊಳಿಸಲು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...