SIR | ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಮತ ಕಾವಲು ಸಮಿತಿ

Date:

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯಕ್ಕೆ ಆಗ್ರಹಿಸಿ ಅಕ್ಟೋಬರ್‌ 8ರಂದು ‘ಜನತಾ ನ್ಯಾಯಾಲಯ’ ವಿನೋತನ ಪ್ರತಿಭಟನೆ ನಡೆಯಲಿದೆ ಎಂದು ಎಸ್‌ಐಆರ್‌ ವಿರೋಧಿ ಒಕ್ಕೂಟ ಮತ್ತು ನಾಗರಿಕ ಮತ ಕಾವಲು ಸಮಿತಿ ನಾಯಕರು ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮತ ಕಾವಲು ಸಮಿತಿ ಮುಖಂಡ ನೂರ್ ಶ್ರೀಧರ್, “ಎಸ್‌ಐಆರ್‌ ಪ್ರಕ್ರಿಯೆ ಮೂಲಕ ಲಕ್ಷಾಂತರ ಶೋಷಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮತದಾರರ ಹಕ್ಕನ್ನು ಕಸಿಯುವ ಹುನ್ನಾರ ನಡೆಯುತ್ತಿದೆ. ಈ ವ್ಯವಸ್ಥಿತ ಷಡ್ಯಂತ್ರದ ವಿರುದ್ಧ ಜನಜಾಗೃತಿ ಮೂಡಿಸಲು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಈ ವಿನೂತನ ಹೋರಾಟ ರೂಪಿಸಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಅಕ್ಟೋಬರ್ 8 ರಂದು ನಡೆಯಲಿರುವ ಈ ಜನತಾ ನ್ಯಾಯಾಲಯದಲ್ಲಿ SIR ಪ್ರಕ್ರಿಯೆಯ ಹಿನ್ನೆಲೆ ಮತ್ತು ಅದರಿಂದಾಗಿರುವ ಅನ್ಯಾಯಗಳನ್ನು ತೆರೆದಿಡುವ ಮಹತ್ವದ ಸಾಕ್ಷ್ಯಗಳನ್ನು ಸಾರ್ವಜನಿಕವಾಗಿ ಹಾಜರುಪಡಿಸಲಾಗುವುದು. ದೇಶದ ಹಿರಿಯ ಮತ್ತು ಗಣ್ಯ ನ್ಯಾಯಮೂರ್ತಿಗಳು ಈ ಆರೋಪಗಳನ್ನು ಆಲಿಸಿ ತೀರ್ಪು ನೀಡಲಿದ್ದಾರೆ. ಅಲ್ಲದೆ, ನಟ ಪ್ರಕಾಶ್ ರಾಜ್ ಮತ್ತು ಕಿಶೋರ್ ಸೇರಿದಂತೆ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ಸಿಜೆಪಿ ಹಾಗೂ ವಿವಿಧ ವಿದ್ಯಾರ್ಥಿ-ಯುವಜನ ಸಂಘಟನೆಗಳು, ರೈತ, ಕಾರ್ಮಿಕ, ದಲಿತ ಮತ್ತು ಮಹಿಳಾ ಸಂಘಟನೆಗಳ ನಾಯಕರು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಎಸ್‌ಐಆರ್‌ ಹಾವಳಿಗೆ ಒಳಗಾಗಿ ಅನ್ಯಾಯಕ್ಕೊಳದ ರಾಜ್ಯದ ಹಲವಾರು ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಜನತಾ ನ್ಯಾಯಾಲಯದ ಮುಂದೆ ತರಲಿದ್ದಾರೆ. ಸಂತ್ರಸ್ತರು ಅಥವಾ ಸಾಮಾಜಿಕ ಕಾರ್ಯಕರ್ತರು ತಕ್ಷಣವೇ 9606087560 ಸಂಖ್ಯೆಗೆ ಕರೆ ಮಾಡಿ ಅಥವಾ ಸಂದೇಶ ಕಳುಹಿಸುವ ಮೂಲಕ ಎಸ್‌ಐಆರ್‌ನಿಂದಾಗಿ ತಾವು ಎದುರಿಸಿದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಬಹುದು” ಎಂದು ತಿಳಿಸಿದ್ದಾರೆ.

“ಪ್ರಜಾಪ್ರಭುತ್ವದ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಈ ವಿಶೇ‍ಷ ಪ್ರತಿಭಟನೆ – ನಡಾವಳಿಯಲ್ಲಿ ರಾಜ್ಯದ ಪ್ರಜ್ಞಾವಂತ ನಾಗರಿಕರು ಪಾಲ್ಗೊಳ್ಳಬೇಕು” ಎಂದು ಎಸ್‌ಐಆರ್‌ ವಿರೋಧಿ ಒಕ್ಕೂಟ ಕರೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಸೀತರಾಂ ಗುಂಡಪ್ಪ – ರಾಜ್ಯ ಅಧ್ಯಕ್ಷರು, ಆಮ್ ಆದ್ಮಿ ಪಕ್ಷ, ಫಾದರ್ ಅರಣ್ ಲೂಯಿಸ್ – ಮುಖ್ಯಸ್ಥರು ಆಶೀರ್ವಾದ ಕೇಂದ್ರ ಬೆಂಗಳೂರು, ಅಮ್ಜದ್ ಪಾಷಾ – ರಾಜ್ಯ ವಕ್ತಾರರು ಸ್ವರಾಜ್ ಇಂಡಿಯಾ ಪಕ್ಷ, ಹಬೀಬುಲ್ಲಾ – ರಾಜ್ಯ ಅಧ್ಯಕ್ಚರು, ವೆಲ್ ಪೇರ್ ಪಾರ್ಟಿ ಆಫ್ ಇಂಡಿಯಾ, ಜೆ.ಎಂ ವೀರಸಂಗಯ್ಯ – ರಾಜ್ಯ ಕಾರ್ಯಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘಟನೆ, ಡಾ. ಮನೋಹರ ಚಂದ್ರ ಪ್ರಸಾದ್ – ರಾಜ್ಯ ಮುಖಂಡರು ದಲಿತ ಕೈಸ್ತ ಒಕ್ಕೂಟ, ಕುಮಾರ್ ಸಮತಳ – ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಜನಶಕ್ತಿ, ಯೂಸುಫ್ ಕನ್ನಿ – ರಾಜ್ಯ ಕಾರ್ಯದರ್ಶಿ ಗಳು ಜಮಾ- ಅತೆ ಇಸ್ಲಾಮಿ ಹಿಂದ್, ಅಮ್ಜದ್ ಖಾನ್ – ರಾಜ್ಯ ಕೋಶಾಧಿಕಾರಿ SDPI, ಸೋಹೆಲ್ ಅಹ್ಮದ್ – ರಾಜ್ಯ ಸಂಚಾಲಕರು, ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ, ಅಡ್ವೊಕೇಟ್ ನೈನಾ – ಮಹಿಳಾ ಮುಖಂಡರು, ನಾಗೇಶ್ ಅರಳಿಕೊಪ್ಪ – ಮುಖಂಡರು ಎದ್ದೇಳು ಕರ್ನಾಟಕ, ರಾಜೇಶ್ ಗೌಡ – ಸಿಜೆಪಿ, ಸೌತ್ ಜೋನ್ ಸಂಚಾಲಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮಲ್ಲೇಶ್ವರಂನಲ್ಲಿ ಬಿಜೆಪಿಯಿಂದ ಭಾರೀ ಅಕ್ರಮ; ಮೇಲಧಿಕಾರಿಗಳೇ ಶಾಮೀಲು ಶಂಕೆ- ʼಈ ದಿನʼಕ್ಕೆ ಸಿಕ್ಕಿದೆ ಸಾಕ್ಷ್ಯ

ಬಿಜೆಪಿಯ ಬಿಎಲ್‌ಎಗಳು ಸಲ್ಲಿಸಿರುವ ಅರ್ಜಿಗಳಲ್ಲಿ ನೂರಕ್ಕೆ ನೂರು ಹೆಸರುಗಳು ಮುಸ್ಲಿಮರದ್ದು. ಕಳೆದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

ಆಗುಂಬೆ | ಕಂದಕಕ್ಕೆ ಬಿದ್ದ ಲಾರಿ; ಸ್ಥಳೀಯರಿಂದ ಚಾಲಕನ ರಕ್ಷಣೆ

ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು...