ಕರ್ನಾಟಕ SIR | ರಾಜ್ಯದಲ್ಲಿ ಏಕಿಲ್ಲ SSR? ಚುನಾವಣಾ ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳ ಕಿಡಿ; ಹೋರಾಟ ತೀವ್ರ

Date:

ಏಳು ರಾಜ್ಯಗಳಲ್ಲಿ ಮತದಾರರ ಮರುಸೇರ್ಪಡೆಗೆ ಹೊಸ ಅವಕಾಶ ನೀಡಿರುವ ಚುನಾವಣಾ ಆಯೋಗ, ಕರ್ನಾಟಕದಲ್ಲಿ ಅದೇ ಕ್ರಮ ಅನುಸರಿಸದಿರುವುದೇಕೆ ಎಂದು ಎಸ್‌ಐಆರ್‌ ವಿರೋಧಿ ಒಕ್ಕೂಟ ಪ್ರಶ್ನಿಸಿದೆ.

ಕರ್ನಾಟಕದಲ್ಲಿ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ತಪ್ಪಾಗಿ ಕೈಬಿಡಲಾಗಿದೆ. ತನ್ನ ಈ ಕೃತ್ಯಕ್ಕೆ ಚುನಾವಣಾ ಆಯೋಗ ಉತ್ತರಿಸಬೇಕು ಎಂದು ಎಸ್‌ಐಆರ್‌ ವಿರೋಧ ಒಕ್ಕೂಟ ಒತ್ತಾಯಿಸಿದೆ.

- Advertisement -

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ನಾಯಕ ನೂರ್ ಶ್ರೀಧರ್, “ಚುನಾವಣಾ ಆಯೋಗವು ನವೆಂಬರ್‌ 6ರಂದು ಸುತ್ತೋಲೆ ಹೊರಡಿಸಿದೆ. ದೆಹಲಿ, ಮಹಾರಾಷ್ಟ್ರ, ಹರಿಯಾಣ, ಆಂಧ್ರಪ್ರದೇಶ, ಜಾರ್ಖಂಡ್‌, ತೆಲಂಗಾಣ ಹಾಗೂ ನಾಗಾಲ್ಯಾಂಡ್‌ ರಾಜ್ಯಗಳಲ್ಲಿ ಎಸ್‌ಎಸ್‌ಆರ್‌ ನಡೆಸುವುದಾಗಿ ಘೋಷಿಸಿದೆ. ಇದರಡಿ, ಎಸ್‌ಐಆರ್‌ ಪ್ರಕ್ರಿಯೆಯ ವೇಳೆ ಕೈಬಿಡಲಾದ ಮತದಾರರು ಮತ್ತೆ ಮತಪಟ್ಟಿಯಲ್ಲಿ ಸೇರ್ಪಡೆಯಾಗಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಈ ಅವಕಾಶ ಕರ್ನಾಟಕದ ಮತದಾರರಿಗೆ ಯಾಕೆ ನೀಡಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

“ಕರ್ನಾಟಕದಲ್ಲಿ ಎಸ್‌ಐಆರ್‌ನಿಂದಾಗಿ ಲಕ್ಷಾಂತರ ಮತದಾರರು ಮತದ ಹಕ್ಕು ಕಳೆದುಕೊಂಡಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದ್ದಾರೆ.

“ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲು ಸುಮಾರು 5.54 ಕೋಟಿ ಮತದಾರರಿದ್ದರು. ಪರಿಷ್ಕರಣೆ ಬಳಿಕ ಅಕ್ಟೋಬರ್‌ 27ರಂದು ಪ್ರಕಟವಾದ ಅಂತಿಮ ಪಟ್ಟಿಯಲ್ಲಿ ಸುಮಾರು 4.55 ಕೋಟಿ ಮತದಾರರು ಉಳಿದಿದ್ದಾರೆ. ಅಂದರೆ, ಹಿಂದಿನ ಪಟ್ಟಿಗೆ ಹೋಲಿಸಿದರೆ ಸುಮಾರು 99 ಲಕ್ಷ ಮತದಾರರಷ್ಟು ಕಡಿತವಾಗಿದೆ. ಹೀಗಿರುವಾಗಿ, ಅಂತಿಮ ಮತ ಪಟ್ಟಿಯಿಂದ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

‘ಮತ ಕಾವಲು ಸಮಿತಿ’ ಪರಿಶೀಲಿಸಿದ 73 ಮತಗಟ್ಟೆಗಳಲ್ಲಿಯೂ ಅರ್ಹ ಮತದಾರರ ಹೆಸರುಗಳನ್ನು ತಪ್ಪಾಗಿ ಕೈಬಿಟ್ಟಿರುವ ಉದಾಹರಣೆಗಳು ಪತ್ತೆಯಾಗಿವೆ. ಅಲ್ಲದೆ, ಅಂತಿಮ ಮತದಾರರ ಪಟ್ಟಿಯಲ್ಲಿ 9,000 ನಕಲಿ ನಮೂದುಗಳು, ಒಂದೇ ಮನೆ ಸಂಖ್ಯೆಯಲ್ಲಿ ನೂರಕ್ಕೂ ಹೆಚ್ಚು ಮತದಾರರಿರುವ 380 ಪ್ರಕರಣಗಳು ಹಾಗೂ ಸಮರ್ಪಕ ವಿಳಾಸವಿಲ್ಲದ 20 ಲಕ್ಷ ನಮೂದುಗಳನ್ನು ತಮ್ಮ ದತ್ತಾಂಶ ತಂಡ ಪತ್ತೆಹಚ್ಚಿದೆ. ಈ ಅಂಕಿಅಂಶಗಳ ಕುರಿತು ಸ್ವತಂತ್ರ ಪರಿಶೀಲನೆ ನಡೆಸಿ ಚುನಾವಣಾ ಆಯೋಗವು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ನಟ ಪ್ರಕಾಶ್‌ ರಾಜ್‌ ಸೇರಿದಂತೆ, ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಮರಳಿ ಪಡೆಯಲು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ಸಮಸ್ಯೆಗಳನ್ನು ಪರಿಹರಿಸಿ, ಅರ್ಹರನ್ನು ಮರಳಿ ಮತಪಟ್ಟಿಗೆ ಸೇರಿಸಬೇಕು. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತಪ್ಪಾಗಿ ಕೈಬಿಡಲಾದವರನ್ನು ಗುರುತಿಸಿ, ಅವರ ಹಿಂದಿನ ಮತದಾರರ ಗುರುತಿನ ದಾಖಲೆಗಳನ್ನು ಉಳಿಸಿಕೊಂಡೇ ಮರುಸೇರ್ಪಡೆ ಮಾಡಬೇಕು. ಇಲ್ಲವಾದಲ್ಲಿ, ಹೋರಾಟ ಮತ್ತಷ್ಟು ತೀವ್ರವಾಗಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ವೀರಸಂಗಯ್ಯ, ಶ್ರೀಮತಿ, ಅಮ್ಜದ್ ಪಾಶಾ, ನಾಗೇಶ್ ಅರಳಕುಪ್ಪೆ, ಹೈದರ್ ಬೇಗ್ ಸೇರಿದಂತೆ ಹಲವರು ಇದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BJP ಬೆಂಬಲಿಗರಿಂದ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ; ಪೊಲೀಸರ ವಿರುದ್ಧವೂ ಮೊಯಿತ್ರಾ ಗಂಭೀರ ಆರೋಪ!

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಬಿಜೆಪಿ ಬೆಂಬಲಿಗರ ಗುಂಪೊಂದು ತಮ್ಮ...

ನಿವೃತ್ತಿ ನಂತರವೂ EPF ಖಾತೆಯಲ್ಲೇ ಹಣ ಉಳಿಸಿ ತಿಂಗಳ ಆದಾಯ ಪಡೆಯುವ ಅವಕಾಶ: ಹೊಸ ಯೋಜನೆ ಪ್ರಸ್ತಾಪ!

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ನಿವೃತ್ತಿಯ ನಂತರದ...

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ: ಮೊಹಮ್ಮದ್ ಯೂನಸ್ ಪೂರ್ವಿಕರ ಮನೆಗೆ ಬೆಂಕಿ

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಭಾರತದಿಂದ ಬಾಂಗ್ಲಾದೇಶಕ್ಕೆ ಮರಳಲು ಸಿದ್ಧತೆ...

2035ಕ್ಕೆ ಕ್ರೈಸ್ತ ಮತವನ್ನು ಹಿಂದಿಕ್ಕಿ ವಿಶ್ವದ ಅತಿ ದೊಡ್ಡ ಧರ್ಮವಾಗಲಿದೆ ಇಸ್ಲಾಂ: ಪ್ಯೂ ಸಂಶೋಧನಾ ಕೇಂದ್ರ ವರದಿ

ಶತಮಾನಗಳಿಂದ ವಿಶ್ವದ ಅತಿದೊಡ್ಡ ಧರ್ಮವಾಗಿ ಗುರುತಿಸಿಕೊಂಡಿದ್ದ ಕ್ರೈಸ್ತ ಧರ್ಮವನ್ನು ಹಿಂದಿಕ್ಕಿ, 2035ರ...