ಬ್ರೇಕಿಂಗ್ ನ್ಯೂಸ್: ಡಿಕೆಶಿ ಧರಣಿಗೆ ಮಣಿದ ಆಯೋಗ: ಅಕ್ರಮ ಫಾರಂ 7ಗಳ ಮೇಲೆ ಕ್ರಮ – ಇಆರ್‌ಒಗಳಿಗೆ ಸೂಚನೆ

Date:

ರಾಜ್ಯದಲ್ಲಿ SIR ನ ‘ಫಾರಂ-7’ (Form 7) ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲು ಸಗಟು (bulk) ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಬಿಗಿ ಪಟ್ಟು ಮತ್ತು ದಿಢೀರ್ ಪ್ರತಿಭಟನೆ ಫಲ ನೀಡಿದೆ. ನಕಲಿ ಅರ್ಜಿಗಳ ಮೂಲಕ ಮತದಾರರ ಪಟ್ಟಿಯಿಂದ ಹೆಸರು ಅಳಿಸುವ ಷಡ್ಯಂತ್ರವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಮತ್ತು ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ರಾಜ್ಯ ಚುನಾವಣಾ ಆಯೋಗವು ಅಂತಿಮವಾಗಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

- Advertisement -

​ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಚುನಾವಣಾ ಆಯೋಗವು ತುರ್ತು ಕ್ರಮ ಕೈಗೊಂಡಿದೆ. ಫಾರಂ 6, 6ಎ, 7 ಮತ್ತು 8ರ ಅಡಿಯಲ್ಲಿ ಸಗಟು (bulk) ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಅವುಗಳು ನಕಲಿ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಅಧಿಕೃತ ಸುತ್ತೋಲೆಯನ್ನು (ಪತ್ರ ಸಂಖ್ಯೆ: DPAR 477 CHUMAPA 2026) ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಆದೇಶದ ಹಿನ್ನೆಲೆಯಲ್ಲಿ 224 ವಿಧಾನಸಭಾ ಕ್ಷೇತ್ರಗಳ ಚುನಾವಣಾ ನೋಂದಣಾಧಿಕಾರಿಗಳು (EROs), ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರಿಗೆ ಈ ಆದೇಶ ರವಾನಿಸಲಾಗಿದೆ. ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಅಥವಾ ಘೋಷಣೆಗಳನ್ನು ನೀಡಿ ನಕಲಿ ಅರ್ಜಿ ಸಲ್ಲಿಸಿದವರ (ಅರ್ಜಿದಾರರ) ವಿರುದ್ಧ 1950 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 31 ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಈ ಕಠಿಣ ಕ್ರಮ ಕೈಗೊಳ್ಳುವ ಮುನ್ನ 1960 ರ ಮತದಾರರ ನೋಂದಣಿ ನಿಯಮಗಳ ನಿಯಮ 20 ರ ಅಡಿಯಲ್ಲಿ ಸೂಕ್ತ ವಿಚಾರಣೆ ನಡೆಸಬೇಕು ಎಂದು ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಿದೆ.

​ನಕಲಿ ಅರ್ಜಿ ಸಲ್ಲಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಚುನಾವಣಾ ಆಯೋಗದಿಂದ ಈ ಮಹತ್ವದ ಅಧಿಕೃತ ಆದೇಶ ಹೊರಬಿದ್ದ ನಂತರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ತಮ್ಮ ಧರಣಿಯನ್ನು ಅಂತ್ಯಗೊಳಿಸಿ ಪ್ರತಿಭಟನಾ ಸ್ಥಳದಿಂದ ತೆರಳಿದರು.

​

61828

.

​

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...