1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

Date:

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ SIR ಕ್ರೌರ್ಯಕ್ಕೆ ತೆಲಂಗಾಣದಲ್ಲಿ ಸುಮಾರು 47 ಲಕ್ಷ ಮತದಾರರ ಹೆಸರುಗಳು ಬಲಿಯಾಗುವ ಆತಂಕವಿದೆ. ಎಎಸ್‌ಡಿಡಿಒ ಮತ್ತು ನೋಟಿಸ್‌ಗಳ ಅಡಿಯಲ್ಲಿ ಒಂದು ಕೋಟಿಗೂ ಅಧಿಕ ಮತದಾರರನ್ನು ಅನುಮಾನಾಸ್ಪದರಾಗಿ ನೋಡಿದ್ದ ಆಯೋಗ, ವಿಚಾರಣೆಗಳು ಮತ್ತು ಪರಿಶೀಲನೆಗಳ ನಂತರವೂ 47 ಲಕ್ಷ ಮಂದಿಯನ್ನು ಮತಪಟ್ಟಿಯಿಂದ ಹೊರಗಿಸುವ ಭೀತಿ ಎದುರಾಗಿದೆ. ಈ ನಡುವೆ, ಎಸ್‌ಐಆರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ದೇಶಾದ್ಯಂತ ‘ಎಸ್‌ಐಆರ್ ಗೋ ಬ್ಯಾಕ್’ ಅಭಿಯಾನಕ್ಕೆ ಕರೆ ನೀಡಿದ್ದಾರೆ.

- Advertisement -

ತೆಲಂಗಾಣದಲ್ಲಿ ಎಸ್‌ಐಆರ್‌ ಅರಂಭವಾದಾಗ, ಒಟ್ಟು 3.38 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರಿದ್ದರು. ಆದರೆ, ಕರಡು ಪಟ್ಟಿ ಸಿದ್ಧಪಡಿಸುವ ವೇಳೆಗೆ, ಒಟ್ಟು ಮತದಾರರ ಪೈಕಿ 73 ಲಕ್ಷ (ಸುಮಾರು 21.70%) ಮತದಾರರನ್ನು ಎಎಸ್‌ಡಿಡಿಒ (ಹಾಜರಿಲ್ಲದವರು, ವಿಳಾಸ ಬದಲಾಯಿಸಿದವರು, ಮೃತಪಟ್ಟವರು ಅಥವಾ ನಕಲಿ ಮತದಾರರು ಹಾಗೂ ಇತರೆ) ವರ್ಗದಡಿ ಗುರುತಿಸಲಾಗಿತ್ತು. ಈ ಹೆಸರುಗಳನ್ನು ಹೊರಗಿಟ್ಟು ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು. ನಂತರ, ಎಎಸ್‌ಡಿಡಿಒ ಅಡಿಯಲ್ಲಿ ಹೆಸರು ಕಳೆದುಕೊಂಡಿದ್ದ ಮತದಾರರು ಸಲ್ಲಿಸಿದ್ದ ಆಕ್ಷೇಪಣೆಗಳಲ್ಲಿ ಸುಮಾರು 58 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸೆಪ್ಟೆಂಬರ್ 28ರ ವೇಳೆಗೆ ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅವರಲ್ಲಿ, 45 ಲಕ್ಷಕ್ಕೂ ಅಧಿಕ ಮತದಾರರು ಅಂತಿಮ ಪಟ್ಟಿಗೆ ಸೇರ್ಪಡೆಗೊಳ್ಳಲು ಅರ್ಹರೆಂದು ಕಂಡುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದರೆ, ಕರಡು ಪಟ್ಟಿಯಲ್ಲಿ ಹೆಸರು ಪ್ರಕಟವಾಗಿದ್ದ ಸುಮಾರು 92 ಲಕ್ಷ ಮತದಾರರಿಗೂ ಆಯೋಗ ನೋಟಿಸ್‌ ನೀಡಿತ್ತು. ಈ ಪೈಕಿ, 5 ಲಕ್ಷ ಮಂದಿಗೆ ಇನ್ನೂ ನೋಟಿಸ್‌ ವಿತರಣೆಯಾಗಿಲ್ಲ.

ಎಎಸ್‌ಡಿಡಿಒ ಅಡಿಯಲ್ಲಿ ಗುರುತಿಸಲ್ಪಟ್ಟು ಆಕ್ಷೇಪಣೆ ಸಲ್ಲಿಸಿರುವ ಮತದಾರರ ಪೈಕಿ 15 ಲಕ್ಷ ಆಕ್ಷೇಪಣೆಗಳು ಮತ್ತು 92 ಲಕ್ಷ ನೋಟಿಸ್‌ ಪಡೆದ ಮತದಾರರ ವಿಚಾರಣೆ/ಪರಿಶೀಲನೆಗಳು ಬಾಕಿ ಇವೆ. “ಅಧಿಕಾರಿಗಳು ನೀಡಿದ ನೋಟಿಸ್‌ಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಅಥವಾ ಅಗತ್ಯ ದಾಖಲೆಗಳ ಪರಿಶೀಲನೆ ಪೂರ್ಣಗೊಳಿಸದಿದ್ದರೆ, ಅಂತಹ ಲಕ್ಷಾಂತರ ನೈಜ ಮತದಾರರ ಹೆಸರುಗಳನ್ನು ಅಂತಿಮ ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಅಳಿಸಿಹಾಕಲಾಗುವುದು” ಎಂದು ಚುನಾವಣಾ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.

Advertisements

ಪರಿಣಾಮ, ಇನ್ನೂ ವಿಚಾರಣೆ/ಪರಿಶೀಲನೆ ನಡೆಯಬೇಕಿರುವ 1.07 ಕೋಟಿ ಮತದಾರರಲ್ಲಿ ಸುಮಾರು 47 ಲಕ್ಷ ಮಂದಿ ಮತದಾನದ ಹಕ್ಕು ಕಳೆದುಕೊಳ್ಳಬಹುದು ಎಂದು ವಿಶೇಷಕರು ಅಂದಾಜಿಸಿದ್ದಾರೆ.

ಈ ಎಸ್‌ಐಆರ್‌ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಭಾರತದ ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ‘ಸೈಮನ್ ಗೋ ಬ್ಯಾಕ್’ ಚಳವಳಿಯಂತೆ ‘ಎಸ್‌ಐಆರ್ ಗೋ ಬ್ಯಾಕ್’ ನಡೆಸಬೇಕೆಂದು ಕರೆ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

“1929ರಲ್ಲಿ ‘ಸೈಮನ್ ಗೋ ಬ್ಯಾಕ್’ ಘೋಷಣೆ ಮೊಳಗಿದ ರೀತಿಯಲ್ಲೇ, ಇಂದು ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಎಸ್‌ಐಆರ್ ಹಿಂಪಡೆಯುವವರೆಗೆ ದೇಶದ ಯುವಜನತೆ ವಿಶ್ರಮಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ವಿರೋಧಿಸುವ ನೈಜ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಜೊತೆಗೆ, “ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಇತರ ಇಬ್ಬರು ಆಯುಕ್ತರ ಗಮನಕ್ಕೆ ತರದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇಂತಹ ಕೃತ್ಯಗಳು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಸಮಸ್ಯೆಯಲ್ಲ, ಬದಲಿಗೆ ಸಮಗ್ರ ರಾಷ್ಟ್ರದ ಪ್ರಜಾಪ್ರಭುತ್ವಕ್ಕೇ ಬಂದೊದಗಿರುವ ಬಹುದೊಡ್ಡ ಗಂಡಾಂತರ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕಳವಳ ಮತ್ತು ರಾಜಕೀಯ ವಿರೋಧಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ತೆಲಂಗಾಣ ಎಸ್‌ಐಆರ್ ಪ್ರಕ್ರಿಯೆಯನ್ನು ವಿಸ್ತರಿಸಿದೆ. ಮತದಾರರು ತಮ್ಮ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 7ರವರೆಗೆ ಅವಕಾಶ ನೀಡಲಾಗಿದೆ. ನೋಟಿಸ್‌ಗಳು ಮತ್ತು ಆಕ್ಷೇಪಣೆಗಳ ಅಂತಿಮ ಪರಿಶೀಲನೆಯನ್ನು ನವೆಂಬರ್ 5ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯು 2026ರ ನವೆಂಬರ್ 9ರಂದು ಅಧಿಕೃತವಾಗಿ ಪ್ರಕಟಗೊಳ್ಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ಈ ದಿನ ಸಂಪಾದಕೀಯ | ಬರ, ಸರ್ವಪಕ್ಷ ನಿಯೋಗ ಮತ್ತು ರಾಜಕಾರಣಿಗಳ ಕಪಟ ನಾಟಕ

ಯಾವ ಪಕ್ಷ ಅಧಿಕಾರದಲ್ಲಿದ್ದರೂ, ಯಾರೇ ಮುಖ್ಯಮಂತ್ರಿಗಳಾಗಿದ್ದರೂ ಪ್ರಕೃತಿ ವಿಕೋಪದಿಂದ ಪಾರಾಗುವುದು ಸಾಧ್ಯವಿಲ್ಲ....