‘ಮತ ಕಳ್ಳರೆ ಅಧಿಕಾರ ಬಿಟ್ಟು ತೊಲಗಿ’: SIR ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಆಕ್ರೋಶ

Date:

ಪ್ರಜಾಪ್ರಭುತ್ವದ ಜೀವಾಳವಾಗಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದ್ದು, “ಮತ ಕಳ್ಳರೆ ಅಧಿಕಾರ ಬಿಟ್ಟು ತೊಲಗಿ” ಎಂದು ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

- Advertisement -

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಸೇರಿದ್ದ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಎಸ್‌ಐಆರ್ ಮೂಲಕ ಬರೋಬ್ಬರಿ 13 ಕೋಟಿಗೂ ಹೆಚ್ಚು ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ತೆಗೆದುಹಾಕಲಾಗಿದೆ ಎಂದು ಅವರು ಗಂಭೀರವಾದ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಚುನಾವಣಾ ಆಯೋಗವು ಕೈಗೊಂಡಿರುವ ಈ ಎಸ್‌ಐಆರ್ ಪ್ರಕ್ರಿಯೆಯು ಸಂಪೂರ್ಣವಾಗಿ ಅಸಂವಿಧಾನಿಕ, ಪಾರದರ್ಶಕತೆಯಿಲ್ಲದ ಹಾಗೂ ಅಕ್ರಮವಾದ ಕ್ರಮವಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ಮತ ಕಳ್ಳತನ ನಡೆಯುತ್ತಿದ್ದು, ಜೀವಂತವಾಗಿರುವವರನ್ನು ಸತ್ತಿದ್ದಾರೆ ಎಂದು ದಾಖಲಿಸಿ, ಸ್ಥಳಾಂತರಗೊಂಡವರ ಹೆಸರನ್ನೂ ತೆಗೆದುಹಾಕಲಾಗುತ್ತಿದೆ ಎಂದು ಅವರು ದೂರಿದರು. ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಮತದಾರರ ಪಟ್ಟಿಯಿಂದ ಕೈಬಿಡಲಾದ ಕೋಟ್ಯಂತರ ಜನರು ಮತ್ತೆ ಮತದಾನದ ಹಕ್ಕು ಪಡೆಯಬೇಕಾದರೆ ನಮೂನೆ ಆರು ಭರ್ತಿ ಮಾಡುವಂತೆ ಚುನಾವಣಾ ಆಯೋಗ ಬಲವಂತ ಮಾಡುತ್ತಿದೆ ಎಂದು ಅವರು ವಿವರಿಸಿದರು. ಹೊಸದಾಗಿ ಮೊದಲ ಬಾರಿಗೆ ಮತದಾನ ಮಾಡುವವರು ಇದನ್ನು ತುಂಬಬೇಕು, ಆದರೆ ಹಳೆಯ ಮತದಾರರನ್ನು ಹೊಸ ಮತದಾರರೆಂದು ಸುಳ್ಳು ಹೇಳುವಂತೆ ಒತ್ತಾಯಿಸಲಾಗುತ್ತಿದೆ ಎಂದು ತಿಳಿಸಿದರು. ಸುಳ್ಳು ಹೇಳಿದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವ ಬೆದರಿಕೆಯನ್ನೂ ಒಡ್ಡಲಾಗುತ್ತಿದ್ದು, ಸುಪ್ರೀಂ ಕೋರ್ಟ್ ಕೂಡ ಈ ಕ್ರಮವನ್ನು ತಪ್ಪು ಎಂದು ಸ್ಪಷ್ಟವಾಗಿ ಹೇಳಿದೆ.

ಮತದಾರರ ಹೆಸರನ್ನು ಸೇರಿಸುವ ಅಥವಾ ತೆಗೆದುಹಾಕುವ ಅಧಿಕಾರವನ್ನು ಈ ಹಿಂದೆ ಸ್ಥಳೀಯ ಚುನಾವಣಾ ಅಧಿಕಾರಿಗಳು ಮಾತ್ರ ಹೊಂದಿದ್ದರು. ಆದರೆ ಇದೀಗ ಇಸಿಐನೆಟ್ ಪೋರ್ಟಲ್ ವ್ಯವಸ್ಥೆಯನ್ನು ಕೇಂದ್ರೀಕರಣಗೊಳಿಸಲಾಗಿದ್ದು, ದೆಹಲಿಯಲ್ಲಿ ಕುಳಿತವರು ಯಾರು ಬೇಕಾದರೂ ದೇಶದ ಯಾವುದೇ ಮೂಲೆಯ ಮತದಾರರ ಹೆಸರನ್ನು ಪಟ್ಟಿಯಿಂದ ಸುಲಭವಾಗಿ ತೆಗೆದುಹಾಕುವಂತಹ ವ್ಯವಸ್ಥೆ ತರಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಇದು ಸಂವಿಧಾನ ನೀಡಿರುವ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದರು.

ಪ್ರಜಾಪ್ರಭುತ್ವದಲ್ಲಿ ಜನರು ವ್ಯವಸ್ಥೆಯನ್ನು ಆರಿಸುತ್ತಾರೆಯೇ ಹೊರತು, ವ್ಯವಸ್ಥೆಯು ಜನರನ್ನು ಆರಿಸುವುದಿಲ್ಲ ಎಂದು ಅವರು ಮಾರ್ಮಿಕವಾಗಿ ನುಡಿದರು. ದೇಶದ ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆಯು ಜನರಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಜವಾಬ್ದಾರಿಯಾಗಿರಬೇಕು, ಆದ್ದರಿಂದ ಈ ಅಕ್ರಮ ನಿರ್ಧಾರವನ್ನು ಯಾರು ತೆಗೆದುಕೊಂಡರು ಎಂಬುದಕ್ಕೆ ಆಯೋಗ ಉತ್ತರಿಸಲೇಬೇಕು ಎಂದು ಅವರು ಪಟ್ಟು ಹಿಡಿದರು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಈ ಅನ್ಯಾಯದ ವಿರುದ್ಧ ನಾವು ನಿರಂತರವಾಗಿ ಧ್ವನಿ ಎತ್ತಲಿದ್ದೇವೆ ಎಂದು ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...

‘ಇಂಡಿಯಾ’ ಬೃಹತ್ ರ್ಯಾಲಿ ಮೇಲೆ ಮೋದಿ ಸರ್ಕಾರದ ಕಣ್ಣು; 4,000 ಪೊಲೀಸರು, 200 ಸಿಸಿಟಿವಿ ಕ್ಯಾಮೆರಾಗಳ ನಿಯೋಜನೆ!

ಚುನಾವಣಾ ಅಕ್ರಮಗಳ ವಿರುದ್ಧ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಕೃಷಿರಂಗ | ರಾಜ್ಯೋತ್ಸವದ ನೆಪದಲ್ಲಿ ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಆರಂಭದ ಸವಿನೆನಪುಗಳು

ಮಂಗಳೂರಿನಲ್ಲಿ 1841ರಲ್ಲಿ ಮೊಟ್ಟಮೊದಲಿಗೆ ಆರಂಭವಾದ ಬಾಸೆಲ್ ಮಿಷನ್ ಮತ್ತು ಟ್ರಾಕ್ಟ್ ಡೆಪಾಸಿಟರಿ...