ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

Date:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR), ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತು ತಮಗಿರುವ ಆತಂಕಗಳನ್ನು ಅಕ್ಟೋಬರ್ 21 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸುವುದಾಗಿ ತಿಳಿಸಿದರು.

- Advertisement -

​ಮಂಗಳವಾರ ರಾಜಕೀಯ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದ ಖರ್ಗೆ, ತಾವು ವೈಯಕ್ತಿಕವಾಗಿ ಪ್ರಧಾನಿಗೆ ಎರಡು ಪತ್ರಗಳನ್ನು ಬರೆದಿರುವುದಾಗಿ ತಿಳಿಸಿದರು. “ನಾಳೆ ಅವರಿಗೆ ಎಲ್ಲವನ್ನೂ ವಿವರಿಸುತ್ತೇನೆ, ಚುನಾವಣಾ ಪಟ್ಟಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಯಿಂದ ಆಗುವ ಅನಾಹುತ, ಅವರು ಮಾಡುತ್ತಿರುವ ಕ್ಷೇತ್ರ ಪುನರ್ವಿಂಗಡಣೆಯ ಪರಿಣಾಮಗಳು ಹಾಗೂ ಮಹಿಳಾ ಮೀಸಲಾತಿ ವಿಷಯಗಳನ್ನು ವಿವರಿಸುತ್ತೇನೆ” ಎಂದು ಪತ್ರಕರ್ತರಿಗೆ ಖರ್ಗೆ ತಿಳಿಸಿದರು. “ಅವರು ಏಕೆ ಇದನ್ನು ಜಾರಿಗೆ ತರುತ್ತಿಲ್ಲ? ಈ ಎಲ್ಲಾ ವಿಷಯಗಳನ್ನು ನಾನು ನಾಳೆ ವಿವರಿಸುತ್ತೇನೆ” ಎಂದು ಅವರು ಹೇಳಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಪತ್ರಕ್ಕೆ ಪ್ರತಿಕ್ರಿಯೆ ಕೇಳಿದ ಪತ್ರಕರ್ತರಿಗೆ ಖರ್ಗೆ ಈ ಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

​ಸಂಸತ್ತಿನಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ಕುರಿತು ಪ್ರಸ್ತಾಪಿತ ಸಂವಿಧಾನ ತಿದ್ದುಪಡಿಯನ್ನು ಪರಿಗಣಿಸುವ ಮುನ್ನ ಸರ್ವಪಕ್ಷ ಸಭೆ ಕರೆಯುವಂತೆ ಆಗ್ರಹಿಸಿ ಖರ್ಗೆ ಅವರು ಅಕ್ಟೋಬರ್ 16 ರಂದು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ರಿಜಿಜು ಅವರು ಈ ಪತ್ರ ಬರೆದಿದ್ದರು. ರಿಜಿಜು ಅವರು ತಮ್ಮ ಪತ್ರದಲ್ಲಿ, ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಲಿಖಿತ ಸಂಪರ್ಕಗಳ ಮೂಲಕ ಹಾಗೂ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜೊತೆ ಚರ್ಚಿಸಿದ ನಂತರ ಸರಕಾರವು ಈ ಕಾನೂನಿನ ಕುರಿತು ಕಾಂಗ್ರೆಸ್ ಪಕ್ಷದ ಸಹಕಾರ ಕೇಳಿತ್ತು ಎಂದು ಹೇಳಿದರು. ಆದರೆ, ಕಾಂಗ್ರೆಸ್ ಚರ್ಚೆಗೆ ದಿನಾಂಕಗಳನ್ನು ನೀಡಲು ವಿಫಲವಾಗಿತ್ತು ಎಂದು ರಿಜಿಜು ದೂರಿ ದರು.

​ಈ ಕಾರಣದಿಂದ ಸರಕಾರವು ಡಿಎಂಕೆ, ಸಮಾಜವಾದಿ ಪಾರ್ಟಿ, ವೈಎಸ್‌ಆರ್‌ಸಿಪಿ, ಎನ್‌ಸಿಪಿ, ಶಿವಸೇನಾ (ಯುಬಿಟಿ), ಎಐಎಂಐಎಂ ಮತ್ತು ಬಿಜೆಡಿ ಸೇರಿದಂತೆ ಇತರ ಪಕ್ಷಗಳನ್ನು ಸಂಪರ್ಕಿಸಬೇಕಾಯಿತು ಎಂದು ರಿಜಿಜು ತಿಳಿಸಿದರು. ಆಗಸ್ಟ್ 13 ರಂದು ಮುಂಗಾರು ಅಧಿವೇಶನ ಮುಗಿದ ನಂತರ ಸಂಸತ್ತನ್ನು ಮುಂದೂಡದಿರುವ (prorogue) ಕುರಿತು ಎದ್ದ ಆತಂಕಗಳನ್ನು ರಿಜಿಜು ತಳ್ಳಿಹಾಕಿದರು, ಹಾಗೂ ಸಂವಿಧಾನವು ಅಧಿವೇಶನವನ್ನು ಮುಂದೂಡಲು ಯಾವುದೇ ನಿರ್ದಿಷ್ಟ ಕಾಲಮಿತಿಯನ್ನು ನಿಶ್ಚಯಿಸಿಲ್ಲ ಎಂದು ಹೇಳಿದರು. ಸರಕಾರದ ಜೊತೆ ರಚನಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಮತ್ತು ಮುಖ್ಯ ಕಾನೂನುಗಳಿಗೆ ಅಡ್ಡಿ ಪಡಿಸುವುದನ್ನು ತಪ್ಪಿಸಬೇಕು ಎಂದು ಸಚಿವರು ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಸ್ತೆ ತಡೆದು ಪೂಜಾ ಪೆಂಡಾಲ್ ಹಾಕುವಂತಿಲ್ಲ: ಒಡಿಶಾ ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಹಬ್ಬದ ಪೂಜಾ ಪೆಂಡಾಲ್‌ಗಳ ನಿರ್ಮಾಣ ಮತ್ತು ರಸ್ತೆ ಬಂದ್...

ತಮಿಳುನಾಡು | 150 ದಿನ ಉದ್ಯೋಗ ಖಾತರಿ; ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗ ಭಾಗ್ಯ

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಖಾತರಿ ಅವಧಿಯನ್ನು 150 ದಿನಗಳಿಗೆ...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...