‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

Date:

‘ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಚುನಾವಣಾ ಆಯೋಗದ ಕಚೇರಿಯ ಮುಂದೆ ಪಟ್ಟು ಹಿಡಿದು ಕುಳಿತಿದ್ದಾರೆ.

- Advertisement -

‘ಫಾರಂ-7’ ಅನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಹಾಕುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಈ ಬಗ್ಗೆ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಧರಣಿ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಬಳಸುವ ‘ಫಾರಂ-7’ ಅನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಮುಖ್ಯಮಂತ್ರಿಯವರ ಪ್ರಮುಖ ಆರೋಪ. ರಾಜ್ಯದಾದ್ಯಂತ ಅರ್ಹ ಮತದಾರರ ಹೆಸರನ್ನು ಉದ್ದೇಶಪೂರ್ವಕವಾಗಿ ಅಳಿಸಿಹಾಕಲು ದೊಡ್ಡ ಮಟ್ಟದ ಷಡ್ಯಂತ್ರ ನಡೆದಿದೆ. ಇದು ಪ್ರಜಾಪ್ರಭುತ್ವಕ್ಕೆ ಬಗೆಯುತ್ತಿರುವ ದ್ರೋಹ ಹಾಗೂ ಅತಿದೊಡ್ಡ ‘ಮತಗಳ್ಳತನ’ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ವಿಚಾರಗಳ ಚರ್ಚೆಗೆಂದು ಗುರುವಾರ ನಿಗದಿಯಾಗಿದ್ದ ಮಹತ್ವದ ಸಚಿವ ಸಂಪುಟ ಸಭೆಯನ್ನು ರದ್ದುಪಡಿಸಿದ ಸಿಎಂ, ನೇರವಾಗಿ ಗಾಂಧಿನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿದರು. ಸಚಿವರಾದ ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರ ಜೊತೆಗೂಡಿ ಅಧಿಕಾರಿಗಳಿಗೆ ದೂರು ಮತ್ತು ಸಾಕ್ಷ್ಯಾಧಾರಗಳನ್ನು ಸಲ್ಲಿಸಿದರು. ಆನಂತರ ಆಯೋಗದ ಕಚೇರಿಯ ಮೆಟ್ಟಿಲುಗಳ ಮೇಲೆಯೇ ಕುಳಿತು ಪ್ರತಿಭಟನೆ ಆರಂಭಿಸಿದರು.

ಅಕ್ರಮದ ಬಗ್ಗೆ ವಿವರಿಸಿದ ಅವರು, “ಬಳ್ಳಾರಿಯ ಎರಡು ವಿಧಾನಸಭಾ ಕ್ಷೇತ್ರಗಳು ಹಾಗೂ ವಿಜಯಪುರದಲ್ಲಿ ತಲಾ 13 ಸಾವಿರ ಫಾರಂ-7 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಮೈಸೂರು, ಬೆಳಗಾವಿ ಹಾಗೂ ಭಾಲ್ಕಿ ಕ್ಷೇತ್ರಗಳಲ್ಲೂ ಇದೇ ರೀತಿ ನಡೆದಿದೆ. ಈಗ ಈ ಕೃತ್ಯದಲ್ಲಿ ಭಾಗಿಯಾದವರೇ ತಪ್ಪೊಪ್ಪಿಕೊಂಡು, ನಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಡಿ ಎಂದು ಅರ್ಜಿಗಳನ್ನು ವಾಪಸ್ ಪಡೆಯುತ್ತಿದ್ದಾರೆ. ಅರ್ಜಿ ಹಾಕಿದವರನ್ನು ಕೇಳಿದರೆ, ಬಿಜೆಪಿ ಕಚೇರಿ ಮತ್ತು ನಾಯಕರಿಂದ ತಮಗೆ ಈ ಅರ್ಜಿಗಳು ಬಂದಿವೆ ಎಂದು ಹೇಳುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದರು.

ಈ ಅಕ್ರಮದ ಹಿಂದೆ ದೊಡ್ಡ ಮಾಫಿಯಾ ಕೆಲಸ ಮಾಡುತ್ತಿದೆ ಎಂದಿರುವ ಡಿ.ಕೆ. ಶಿವಕುಮಾರ್, “ಜನಸಾಮಾನ್ಯರಿಗೆ ತಮ್ಮ ಮನೆಯವರ ವೋಟರ್ ಐಡಿ (ಎಪಿಕ್) ಸಂಖ್ಯೆಯೇ ತಿಳಿದಿರುವುದಿಲ್ಲ. ಆದರೆ ಈ ಜಾಲಕ್ಕೆ ಎಲ್ಲರ ಸಂಪೂರ್ಣ ಮಾಹಿತಿಯೂ ಸಿಕ್ಕಿದೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ 10ರಿಂದ 20 ಸಾವಿರ ಮತಗಳನ್ನು ಅಳಿಸುವ ಹುನ್ನಾರ ನಡೆದಿದೆ. ಇದರಲ್ಲಿ ಭಾಗಿಯಾಗಿರುವವರು ಸಾಮಾನ್ಯರಲ್ಲ, ದೊಡ್ಡ ಕ್ರಿಮಿನಲ್‌ಗಳು” ಎಂದು ವಾಗ್ದಾಳಿ ನಡೆಸಿದರು.

ದೂರು ಸ್ವೀಕರಿಸಿರುವ ಚುನಾವಣಾ ಆಯೋಗವು, ಕಾನೂನು ತಜ್ಞರ ಸಲಹೆ ಪಡೆಯಲು ಹಾಗೂ ಉಪ ಆಯುಕ್ತರಿಂದ (ಡಿಸಿ) ವರದಿ ತರಿಸಿಕೊಳ್ಳಲು ಶುಕ್ರವಾರದವರೆಗೂ ಸಮಯ ಕೇಳಿದೆ. ಆದರೆ, ಚುನಾವಣಾ ಆಯೋಗವು ಕಠಿಣ ಕ್ರಮ ಕೈಗೊಳ್ಳುವವರೆಗೂ ತಾವು ಜಾಗ ಬಿಡುವುದಿಲ್ಲ ಎಂದು ಸಿಎಂ ಪಟ್ಟು ಹಿಡಿದಿದ್ದಾರೆ. “ಮತದಾರರ ಹಕ್ಕನ್ನು ರಕ್ಷಿಸುವುದು ನನ್ನ ಜವಾಬ್ದಾರಿ. ಉಪ ಆಯುಕ್ತರು ಕ್ರಿಮಿನಲ್ ಪ್ರಕರಣ (ಎಫ್ಐಆರ್) ದಾಖಲಿಸಲು ಅವಕಾಶ ನೀಡಲೇಬೇಕು, ಅಲ್ಲಿಯವರೆಗೂ ಇಲ್ಲಿಂದ ಕದಲುವುದಿಲ್ಲ” ಎಂದು ಸಿಎಂ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು? ವಿಮಾನದ ಕಾಕ್‌ಪಿಟ್‌ ಹೇಗಿರುತ್ತದೆ ಬಲ್ಲಿರಾ?

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ...