ರಾಯಚೂರು ರಾಜಕೀಯದಲ್ಲಿ ಮತ್ತೆ ಹಿನ್ನಡೆ: ಸಚಿವ ಸ್ಥಾನಕ್ಕೆ ಚೊಂಬು, ಜಿಲ್ಲೆಯ ನಿರೀಕ್ಷೆ ಭಗ್ನ

Date:

ರಾಯಚೂರು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳಲ್ಲಿ ರಾಜ್ಯ ಸರ್ಕಾರದ ವಿಶೇಷ ಗಮನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರವಾಗಿ ಸಚಿವ ಸಂಪುಟದಲ್ಲಿ ಪ್ರಭಾವಿ ಧ್ವನಿ ಇರಬೇಕೆಂಬ ಒತ್ತಾಯ ಮತ್ತೊಮ್ಮೆ ಕೇಳಿಬಂದಿದೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯ ಸಂದರ್ಭದಲ್ಲಿ ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲೇ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆದರೆ, ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯೊಬ್ಬರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜಿಲ್ಲೆಯ ನಾಯಕರು ನಿರೀಕ್ಷೆಯಿಂದ ಕಾಯುತ್ತಿದ್ದರು.

- Advertisement -

ಎರಡನೇ ಪಟ್ಟಿಯಲ್ಲಿಯೂ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಮತ್ತೆ ನಿರಾಸೆ ಮೂಡಿಸಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ನಾಯಕರು ಹಾಗೂ ಪಕ್ಷದ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದರೂ ಅಂತಿಮ ಪಟ್ಟಿಯಲ್ಲಿ ಜಿಲ್ಲೆಯ ಹೆಸರಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ರಾಯಚೂರು ಜಿಲ್ಲೆ ರಾಜ್ಯ ರಾಜಕೀಯದಲ್ಲಿ ಪ್ರಮುಖ ಸ್ಥಾನ ಹೊಂದಿದ್ದರೂ, ಸತತವಾಗಿ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಸಚಿವರ ಪ್ರಾತಿನಿಧ್ಯ ಅಗತ್ಯ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಜಿಲ್ಲೆಯ ನಾಯಕರ ನಡುವಿನ ಒಗ್ಗಟ್ಟಿನ ಕೊರತೆ, ಪಕ್ಷದ ಆಂತರಿಕ ರಾಜಕೀಯ, ಪ್ರಾದೇಶಿಕ ಹಾಗೂ ಜಾತಿ ಸಮೀಕರಣಗಳಂತಹ ಹಲವು ಅಂಶಗಳು ಸಚಿವ ಸ್ಥಾನ ಕೈತಪ್ಪಲು ಕಾರಣವಾಗಿರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂರಕ್ಕೆ ನೂರು ಸಚಿವ ಸ್ಥಾನ ದೊರೆಯಲಿದೆ ಎಂದು ಅವರ ಆಪ್ತರು, ಬೆಂಬಲಿಗರು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಅಂತಿಮ ಪಟ್ಟಿಯಲ್ಲೂ ಅವರ ಹೆಸರು ಕಾಣಿಸದಿರುವುದು ಕಾರ್ಯಕರ್ತರಿಗೆ ನಿರಾಸೆ ಉಂಟುಮಾಡಿದೆ.

ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ ಅವರಿಗೂ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಅವರ ಆಶೆಯೂ ಈಡೇರಲಿಲ್ಲ.

ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರುಗಳಾದ ಎನ್ ಎಸ್ ಬೋಸರಾಜು ಹಾಗೂ ಎ. ವಸಂತಕುಮಾರ್ ಅವರು ಪಕ್ಷದ ಸಂಘಟನೆ ಬಲಪಡಿಸಲು ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಿ, ಪಕ್ಷದ ಗೆಲುವಿಗೆ ಶ್ರಮಿಸಿದ ನಾಯಕರಾಗಿದ್ದಾರೆ. ಇಷ್ಟಾದರೂ ರಾಯಚೂರು ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ನಿರಾಶೆ ಮೂಡಿಸಿದೆ.

ಎರಡನೇ ಪಟ್ಟಿಯಲ್ಲೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ರಾಯಚೂರು ಜಿಲ್ಲೆಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುತ್ತಾರೆಯೇ ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿದೀರಾ? ʼಮೀಸಲಾತಿ ಹಠಾವೋʼ ಅಲ್ಲ; ಸಮಾನ ಅವಕಾಶ ಮತ್ತು ಪ್ರಾತಿನಿಧ್ಯಕ್ಕೆ ವಿಭಿನ್ನ ಬೆಂಬಲ

ರಾಯಚೂರು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳಲ್ಲಿ ರಾಜ್ಯ ಸರ್ಕಾರದ ವಿಶೇಷ ಗಮನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರವಾಗಿ ಸಚಿವ ಸಂಪುಟದಲ್ಲಿ ಪ್ರಭಾವಿ ಧ್ವನಿ ಇರಬೇಕೆಂಬ ಒತ್ತಾಯ ಮತ್ತೊಮ್ಮೆ ಕೇಳಿಬಂದಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...