ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಆರ್‌ಎಸ್‌ಎಸ್

Date:

ಆರ್‌ಎಸ್‌ಎಸ್ ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. 

ಕರಾವಳಿ ಕರ್ನಾಟಕವಾಗಲಿ ಅಥವಾ ದೇಶದ ಯಾವುದೇ ಭಾಗವಾಗಲಿ ಎಂದಿನಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕೊಲೆಗಡುಕರ ಪರವಾಗಿ ನಿಲ್ಲುತ್ತಾ ಬಂದಿದೆ. ಈಗ ಮತ್ತೆ ಆರೋಪಿಗಳ ಬೆಂಬಲಕ್ಕೆ ನಿಂತಿದೆ. ಇದೀಗ ಆರ್‌ಎಸ್‌ಎಸ್‌ ಇತ್ತೀಚೆಗೆ ನಡೆದ ಅತ್ಯಂತ ಕ್ರೂರ ಹಾಗೂ ಮನುಷ್ಯತ್ವಕ್ಕೇ ಕಳಂಕ ತರುವಂತಹ ಭೀಕರ ಕೊಲೆ ಪ್ರಕರಣದ ಆರೋಪಿಗಳ ರಕ್ಷಣೆಗೆ ನಿಂತು, ಅವರ ಪರವಾಗಿ ‘ಬಿ ಸಿ ರೋಡ್ ಚಲೋ’ ಎಂಬ ಬೃಹತ್ ರ‍್ಯಾಲಿಯನ್ನು ಸೆಪ್ಟೆಂಬರ್ 28ರಂದು ಆಯೋಜಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಈ ಬಿ ಸಿ ರೋಡ್ ಚಲೋ ಕಾರ್ಯಕ್ರಮವು ಕೇವಲ ಒಂದು ಪ್ರತಿಭಟನೆಯಾಗಿ ನಾವು ಕಾಣಲಾಗದು. ಬದಲಾಗಿ ಕ್ರೌರ್ಯ ಎಸಗಿದ ಆರೋಪಿಗಳನ್ನು ರಕ್ಷಿಸುವ ಮತ್ತು ಸಮಾಜದಲ್ಲಿ ಧ್ರುವೀಕರಣವನ್ನು ಉಂಟುಮಾಡುವ ಯತ್ನ ಎಂಬುದು ಸ್ಪಷ್ಟ. ಕೊಲೆಯಾದ ವ್ಯಕ್ತಿಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುತ್ತಿರುವಾಗ, ಮನುಷ್ಯತ್ವದ ಪಸೆಯೂ ಇಲ್ಲದೆ ಈ ರೀತಿಯ ರಾಜಕೀಯ ಮತ್ತು ಧಾರ್ಮಿಕ ಬೆಂಬಲವನ್ನು ಆರೋಪಿಗಳಿಗೆ ನೀಡುವುದು ಕರಾವಳಿಯ ಶಾಂತಿಯುತ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಪಾತ್ರಧಾರಿ, ಆರ್‌ಎಸ್‌ಎಸ್‌ ಸೂತ್ರಧಾರಿ!

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಇರಾಕೋಡಿ ಬಳಿ ನಡೆದ ಅಬ್ದುಲ್ ರಹಿಮಾನ್ (ಅಬ್ದುಲ್ ರಹ್ಮಾನ್) ಹತ್ಯೆ ಪ್ರಕರಣದಲ್ಲಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮೈಸೂರಿನ ಕೋಕಾ (KCOCA) ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದ ಬೆನ್ನಲ್ಲೇ, ಇವರಲ್ಲಿ ಪ್ರಮುಖ ಆರು ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆಯು ‘ಗೂಂಡಾ ಕಾಯ್ದೆ’ (Goonda Act) ಅಸ್ತ್ರ ಪ್ರಯೋಗಿಸಿ ಅವರ ಅಪರಾಧ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಭಿನ್ ರೈ, ಪ್ರದೀಪ್, ಶಿವಪ್ರಸಾದ್, ರಂಜಿತ್, ತೇಜಾಕ್ಷ, ಅಬ್ದುಲ್ ರಹಿಮಾನ್ ಅವರಿಗೆ ಫೋನ್ ಮಾಡಿ ಮರಳು ತರಿಸಿಕೊಂಡಿದ್ದ ಆರೋಪಿ ದೀಪಕ್ ಹೆಸರು ಬಿಡುಗಡೆಯಾಗಿದೆ. ಈ ಕೊಲೆ ನಡೆದ ಸಮಯದಲ್ಲಿ ಆರೋಪಿಗಳ ಜತೆ ಸಂಪರ್ಕದಲ್ಲಿದ್ದರು ಎಂಬ ಅನುಮಾನದ ಮೇರೆಗೆ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸಾಕ್ಷಿದಾರ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆರೋಪಿಗಳ ಹಾಗೂ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ನಿವಾಸಿಯಾಗಿದ್ದ ಅಬ್ದುಲ್ ರೆಹಮಾನ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಹತ್ಯೆಯು ಅತ್ಯಂತ ಯೋಜನಾಬದ್ಧವಾಗಿ ನಡೆದಿದ್ದು, ಸಂಚು ರೂಪಿಸಿ ಈ ಕೃತ್ಯ ಎಸಗಲಾಗಿತ್ತು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಮೃತರ ಮೇಲೆ ತೀವ್ರ ಸ್ವರೂಪದ ಆಯುಧಗಳಿಂದ ಹಲ್ಲೆ ನಡೆಸಲಾಗಿದ್ದು, ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದರು. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಂಡಿದ್ದರು.

ಈ ಭೀಕರ ಹತ್ಯೆಯ ನಂತರ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಿವಿಧ ನಾಗರಿಕ ಸಮಾಜದ ಸಂಘಟನೆಗಳು ಹಾಗೂ ಮೃತರ ಕುಟುಂಬದವರು ಆಗ್ರಹಿಸಿದ್ದರು. ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳ ಪರವಾಗಿ ಹಾಗೂ ಪೊಲೀಸರ ಕ್ರಮವನ್ನು ವಿರೋಧಿಸಿ ಕೆಲವು ಹಿಂದುತ್ವ ಸಂಘಟನೆಗಳು ‘ಬಿ ಸಿ ರೋಡ್ ಚಲೋ’ದಂತಹ ಪ್ರತಿಭಟನೆಗಳಿಗೆ ಕರೆ ನೀಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ. ಗಂಭೀರ ಅಪರಾಧ ಹಿನ್ನೆಲೆ ಹೊಂದಿರುವ ಮತ್ತು ಪ್ರತ್ಯಕ್ಷ ಸಾಕ್ಷ್ಯಗಳ ಆಧಾರದ ಮೇಲೆ ಬಂಧಿತರಾಗಿರುವ ಆರು ಮಂದಿ ಕೊಲೆಗಡುಕರನ್ನು ‘ನಿರ್ದೋಷಿಗಳು’ ಎಂದು ಬಿಂಬಿಸಲು ಯತ್ನಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ನ ಒಬ್ಬನಾದರೂ ಜೈಲಿಗೆ ಹೋಗಿದ್ದರೆ, ಕೊಲೆ ಆಗಿದ್ದರೆ ತೋರಿಸಿ: ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ಕೊಲೆಗಡುಕರ ಪರ ನಿಂತಿದ್ದು ಹೊಸದಲ್ಲ

ಆರ್‌ಎಸ್‌ಎಸ್ ಹಾಗೂ ಸಂಘಪರಿವಾರಗಳು ಕೊಲೆ ಅಥವಾ ಗಂಭೀರ ಅಪರಾಧ ಆರೋಪ ಹೊತ್ತವರ ಪರವಾಗಿ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನವನ್ನು ವಿರೋಧಿಸಿ ಹಿಂದು ಏಕ್ತಾ ಮಂಚ್ ನೇತೃತ್ವದಲ್ಲಿ ನಡೆದ ರ‍್ಯಾಲಿಗೆ ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ನಾಯಕರು ಬೆಂಬಲ ನೀಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ತೀವ್ರ ಖಂಡನೆಗೆ ಗುರಿಯಾಗಿತ್ತು.

2022ರ ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿತ್ತು. ಗುಜರಾತ್ ಗಲಭೆಯ ಸಂದರ್ಭದಲ್ಲಿ ಗರ್ಭಿಣಿಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಕುಟುಂಬದವರ ಕೊಲೆ ಆರೋಪದಲ್ಲಿದ್ದ ಶಿಕ್ಷಿತರನ್ನು ಬಿಡುಗಡೆ ಮಾಡಿದಾಗ, ಅವರನ್ನು ಸಂಘ ಪರಿವಾರದ ಬೆಂಬಲಿತ ಗುಂಪುಗಳು ಹಾರ ಹಾಕಿ, ಸಿಹಿ ಹಂಚಿ ಸ್ವಾಗತಿಸಿತ್ತು. ಇದು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆದ ವಿವಿಧ ಗೂಂಡಾಗಿರಿ ಮತ್ತು ಕೋಮು ಹತ್ಯೆಗಳ ಸಂದರ್ಭದಲ್ಲಿ, ಬಂಧಿತ ಆರೋಪಿಗಳನ್ನು ‘ಧರ್ಮ ರಕ್ಷಕರು’ ಎಂದು ಬಿಂಬಿಸಿ, ರ‍್ಯಾಲಿಗಳು, ಕೋರ್ಟ್ ಆವರಣದಲ್ಲಿ ಜೈಕಾರಗಳು ಹಾಗೂ ಕಾನೂನು ವೆಚ್ಚ ಭರಿಸುವ ಅಭಿಯಾನಗಳನ್ನು ನಡೆಸಿರುವ ಉದಾಹರಣೆಗಳು ಕರಾವಳಿಯ ಇತಿಹಾಸದಲ್ಲಿ ದಾಖಲಾಗಿವೆ. ಅಪರಾಧದ ಸ್ವರೂಪ ಮತ್ತು ಅದರಿಂದಾದ ಮಾನವೀಯ ಹಾನಿಗಿಂತ ರಾಜಕೀಯ ಮತ್ತು ಧಾರ್ಮಿಕ ಲಾಭ-ನಷ್ಟಗಳೇ ಇಂತಹ ಸಂಘಟನೆಗಳಿಗೆ ಮುಖ್ಯವಾಗುತ್ತಿವೆ ಎಂಬುದು ಸ್ಪಷ್ಟ.

ಅಷ್ಟಕ್ಕೂ ಯಾವುದೇ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉಳಿಯಬೇಕಾದರೆ ಅಪರಾಧ ಎಸಗಿದವರಿಗೆ ಜಾತಿ, ಧರ್ಮಗಳ ಹಿತಾಸಕ್ತಿಯನ್ನು ಮೀರಿ ಶಿಕ್ಷೆಯಾಗಬೇಕಾದುದು ತೀರಾ ಅಗತ್ಯ. ಆದರೆ ಆರ್‌ಎಸ್‌ಎಸ್ ತನ್ನ ಅಧಿಕಾರ ಬಳಸಿಕೊಂಡು ನಿರಂತರವಾಗಿ ಕೊಲೆ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಿರುವುದು, ಅಪರಾಧಿಗಳಿಗೆ ಭಯವಿಲ್ಲದ ವಾತಾವರಣವನ್ನು ನಿರ್ಮಿಸುತ್ತದೆ.

ಕೊಲೆಯಾದ ನಿರಪರಾಧಿಯ ಕುಟುಂಬಕ್ಕೆ ನ್ಯಾಯ ಸಿಗಬೇಕಾದಾಗ, ಆರೋಪಿಗಳ ಪರವಾಗಿ ಶಕ್ತಿ ಪ್ರದರ್ಶನ ಮಾಡುವುದು ಮನುಷ್ಯತ್ವಕ್ಕೇ ಎಸಗುವ ಅಪಚಾರ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕಾನೂನು ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಿ, ಕೊಲೆಗಡುಕರಿಗೆ ಸೂಕ್ತ ಶಿಕ್ಷೆ ವಿಧಿಸಿದಾಗ ಮಾತ್ರ ನಾಗರಿಕ ಸಮಾಜದಲ್ಲಿ ನ್ಯಾಯದ ಮೇಲಿನ ನಂಬಿಕೆ ಉಳಿಯಲು ಸಾಧ್ಯ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...